Get Updates
Get notified of breaking news, exclusive insights, and must-see stories!

Laxman Savadi Gets Athani Ticket: ಅಥಣಿಯಿಂದ ಕಾಂಗ್ರೆಸ್‌ ಪರ ಲಕ್ಷ್ಮಣ ಸವದಿ ಕಣಕ್ಕೆ

ಬೆಂಗಳೂರು, ಏಪ್ರಿಲ್. 15: ಬಿಜೆಪಿ ಟಿಕೆಟ್ ನಿರಾಕರಿಸಿದ್ದ ಕಾರಣ ಬಂಡಾಯವೆದ್ದು ಪಕ್ಷ ತೊರೆದಿದ್ದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ. ತಮ್ಮ ಅಥಣಿ ಕ್ಷೇತ್ರದಿಂದಲೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಲಕ್ಷ್ಮಣ ಸವದಿ ಚುನಾವಣೆ ಎದುರಿಸಲಿದ್ದಾರೆ.

ಶನಿವಾರ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಮೂರನೇ ಪಟ್ಟಿಯಲ್ಲಿ 43 ಅಭ್ಯರ್ಥಿಗಳಿಗೆ ಎಐಸಿಸಿ ಟಿಕೆಟ್‌ ನೀಡಿದೆ. ಇದಕ್ಕೂ ಮುನ್ನ ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳನ್ನ ಘೋಷಿಸಿದ್ದ ಕಾಂಗ್ರೆಸ್‌ ಹೈಕಮಾಂಡ್, ಎರಡನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಟಿಕೆಟ್ ಹಂಚಿಕೆ ಮಾಡಿತ್ತು. 224 ಅಭ್ಯರ್ಥಿಗಳ ಪೈಕಿ 166 ಅಭ್ಯರ್ಥಿಗಳನ್ನ ಚುನಾವಣಾ ಕಣಕ್ಕಿಳಿಸಿದ್ದ ಕಾಂಗ್ರೆಸ್ ಮತ್ತೆ 43 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ.

Congress Candidates 3rd List: Laxman Savadi gets Athani ticket

ಶುಕ್ರವಾರ ಕಾಂಗ್ರೆಸ್‌ಗೆ ಸೇರ್ಪಡೆಯಾದ ಬಿಜೆಪಿ ನಾಯಕ ಲಕ್ಷ್ಮಣ ಸವದಿ ಕಾಂಗ್ರೆಸ್ ಮೂರನೇ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಅಥಣಿಯಿಂದ ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದ ಮಾಜಿ ಉಪ ಮುಖ್ಯಮಂತ್ರಿಗಳಿಗೆ ಹೈಕಮಾಂಡ್ ಟಿಕೆಟ್ ನಿರಾಕರಿಸಿತ್ತು. ಇದರಿಂದ ಅಸಮಾಧಾನಗೊಂಡಿದ್ದ ಅವರು ತಮ್ಮ ಬೆಂಬಲಿಗರ ಸಭೆ ಕರೆದು ಸಮಾಲೋಚನೆ ನಡೆಸಿದ್ದರು.

Congress Candidates 3rd List: Laxman Savadi gets Athani ticket

"ನನ್ನ ಕ್ಷೇತ್ರದ ಕಾರ್ಯಕರ್ತರು, ಬೆಂಬಲಿಗರು ಮತ್ತು ಮಾರ್ಗದರ್ಶಕರ ಜೊತೆಗೆ ಚರ್ಚೆ ಮಾಡಿ ಬಿಜೆಪಿ ತೊರೆದಿದ್ದೇನೆ. ನನ್ನ ಮುಂದಿನ ಹೆಜ್ಜೆ ಯಾವ ಕಡೆ ಎಂದು ಕೇಳಿದಾಗ 30 ಸಾವಿರಕ್ಕೂ ಹೆಚ್ಚು ಜನರು ನಿಮಗೆ ಮುಂದೆ ಭವಿಷ್ಯ ಇದ್ದರೆ ಅದು ಕಾಂಗ್ರೆಸ್ ಪಕ್ಷ ಸೇರಬೇಕು ಎಂದು ಮಾರ್ಗದರ್ಶನ ನೀಡಿದ್ದಾರೆ. ಅವರ ಅಪ್ಪಣೆಯಂತೆ ನಾನು ಬೆಂಗಳೂರಿಗೆ ಬಂದು ರಣದೀಪ್ ಸುರ್ಜೆವಾಲ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರ ಜೊತೆ ಚರ್ಚೆ ಮಾಡಿ ಪಕ್ಷ ಸೇರುತ್ತಿದ್ದೇನೆ" ಎಂದು ಕಾಂಗ್ರೆಸ್ ಸೇರ್ಪಡೆ ವೇಳೆ ತಿಳಿಸಿದ್ದರು.

ಅಥಣಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಹೇಶ್ ಕುಮಟಳ್ಳಿಗೆ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್‌ನಿಂದ ಬಂದ ಕುಮಟಳ್ಳಿಗೆ ಟಿಕೆಟ್ ನೀಡದಿದ್ದರೇ ತಾನು ಸ್ಪರ್ಧೆ ಮಾಡುವುದಿಲ್ಲ ಎಂದು ರಮೇಶ್ ಜಾರಕಿಹೊಳಿ ಹಠ ಹಿಡಿದಿದ್ದರು. ಇದಕ್ಕೆ ಬಿಜೆಪಿ ಹೈಕಮಾಂಡ್ ತಲೆಬಾಗಿದ್ದು, ಕಳೆದ ಬಾರಿ ಬಿಜೆಪಿ ಸರ್ಕಾರ ರಚನೆಗೆ ಕಾರಣವಾಗಿದ್ದ ರಮೇಶ್ ಜಾರಕಿಹೊಳಿಯ ಋಣ ಸಂದಾಯ ಮಾಡಿದೆ.

ಅಥಣಿಯಲ್ಲಿ ಜಾತ್ಯಾತೀತ ಜನತಾದಳ (ಜೆಡಿಎಸ್) ಇನ್ನು ಅಭ್ಯರ್ಥಿ ಘೋಷಿಸಿಲ್ಲ. ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿಯಾಗಿ ಸಂಪತ್ ಕುಮಾರ್ ಶೆಟ್ಟಿ ಕಣಕ್ಕಿಳಿದಿದ್ದಾರೆ. ಇನ್ನು, ಲಕ್ಷ್ಮಣ ಸವದಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿಲ್ಲ ಎಂದಿದ್ದರೇ ಕಾಂಗ್ರೆಸ್‌ನ ಪ್ರಬಲ ಅಭ್ಯರ್ಥಿಯಾಗಿರುವ ಎಸ್‌.ಕೆ.ಬುಟಾಳಿ ಅವರನ್ನು ಚುನಾವಣೆಗೆ ಕಣಕ್ಕಿಳಿಸಲು ಶಾಸಕ ಸತೀಶ್ ಜಾರಕಿಹೊಳಿ ಯೋಜಿಸಿದ್ದರು.

ಇದರ ಜೊತೆಗೆ ಇತ್ತ ಕಾಂಗ್ರೆಸ್‌ನ ಬಸವರಾಜ ಬೀಸನಕೊಪ್ಪ ಮತ್ತು ಕಳೆದ ಬಾರಿ ಬಿಜೆಪಿಯ ಮಹೇಶ್ ಕಮಟಳ್ಳಿ ವಿರುದ್ಧ ನಿಂತು ಬರೊಬ್ಬರಿ 39 ಸಾವಿರ ಮತಗಳಿಂದ ಪರಾಭವಗೊಂಡಿದ್ದ ಗಜಾನನ ಮಂಗಸೂಳಿ ಕೂಡ ಟಿಕೆಟ್ ಪಡೆಯಲು ಕಸರತ್ತು ನಡೆಸುತ್ತಿದ್ದರು. ಆದರೆ, ಕಾಂಗ್ರೆಸ್ ಟಿಕೆಟ್ ನಿನ್ನೆಯಷ್ಟೇ ಪಕ್ಷಕ್ಕೆ ಸೇರ್ಪಡೆಯಾದ ಲಕ್ಷ್ಮಣ ಸವದಿ ಪಾಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+