ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರು

ಬೆಂಗಳೂರು, ಮೇ 12 : ಕರ್ನಾಟಕ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ನೇಮಕ ಮಾಡಲಾಗಿದೆ. ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಬ್ಬಾಳ್ಕರ್ 2014 ಲೋಕಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು.

ಕಾಂಗ್ರೆಸ್‌ ಉಪಾಧ್ಯಕ್ಷ ಮತ್ತು ಮಹಿಳಾ ಘಟಕದ ಉಸ್ತುವಾರಿ ಹೊತ್ತಿರುವ ರಾಹುಲ್‌ ಗಾಂಧಿ ಅವರು ಸೋಮವಾರ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ನೇಮಕ ಮಾಡಿದ್ದಾರೆ ಎಂದು ಎಐಸಿಸಿ ಪ್ರಕಟಣೆ ತಿಳಿಸಿದೆ. ಕರ್ನಾಟಕ ಸೇರಿದಂತೆ 9 ರಾಜ್ಯಗಳ ಮಹಿಳಾ ಘಟಕದ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗಿದೆ. ಮಂಜುಳಾ ನಾಯ್ಡು ಅವರು ಇಷ್ಟುದಿನ ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾಗಿದ್ದರು.

Laxmi Hebbalkar

ಸದ್ಯ, ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷೆಯಾಗಿರುವ ಹೆಬ್ಬಾಳ್ಕರ್‌ ಅವರು 2014ರ ಲೋಕಸಭೆ ಚುನಾವಣೆಯಲ್ಲಿ 4,78,557 ಮತಗಳನ್ನುಪಡೆದು ಬಿಜೆಪಿಯ ಸುರೇಶ ಅಂಗಡಿ ಅವರ ಎದುರು ಪರಾಭವಗೊಂಡಿದ್ದರು. [ಬೆಳಗಾವಿಯಲ್ಲಿ ಲಕ್ಷ್ಮಿಗೆ ಸಿಕ್ತು ಮರಾಠಿಗರ ಬೆಂಬಲ]

ಎಐಸಿಸಿ ಸದಸ್ಯರಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಹಿಂದೆ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಖಾನಾಪುರದ ಭಾಗ್ಯಲಕ್ಷ್ಮೀ ಶುಗರ್ಸ್ ನಿರ್ದೇಶಕಿಯಾಗಿ ಕೆಲಸ ಮಾಡಿದ್ದಾರೆ. ಎಂ.ಎಸ್.ಕೃಷ್ಣ ಸರ್ಕಾರದ ಅವಧಿಯಲ್ಲಿ ಅವರು ರಾಜ್ಯ ಗ್ರಾಹಕ ಮಹಾಮಂಡಲದ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸಿದ್ದರು. [ಲಕ್ಷ್ಮೀ ಹೆಬ್ಬಾಳ್ಕರ್ ಪರಿಚಯ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+