ಚುನಾವಣೆ ರಿಸಲ್ಟ್ ಬಂದು ಎರಡು ತಿಂಗಳು: ಇನ್ನೂ ವಿಪಕ್ಷ ನಾಯಕನ ಆಯ್ಕೆಯಿಲ್ಲ; ಮತ್ತೆ ಕುಟುಕಿದ ಕಾಂಗ್ರೆಸ್‌!

ಬೆಂಗಳೂರು, ಜುಲೈ 13: ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಬಿಜೆಪಿ ಸೋಲು ಕಂಡಿದ್ದು, ಎರಡು ತಿಂಗಳು ಕಳೆದರು ಇನ್ನೂ ವಿಪಕ್ಷ ನಾಯಕನ ಆಯ್ಕೆಯಾಗಿಲ್ಲ ಎಂದು ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ.

ಜುಲೈ 3 ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಿ ಎರಡು ವಾರ ಸದನ ನಡೆದಿದೆ. ಆದರೆ, ಆಡಳಿತ ಪಕ್ಷವನ್ನು ಎದುರಿಸಲು ಬಿಜೆಪಿ ಇನ್ನೂ ಸಿದ್ದಗೊಂಡಿಲ್ಲ. ಹೌದು, ವಿಪಕ್ಷ ನಾಯಕನ ಆಯ್ಕೆ ವಿಚಾರ ಇನ್ನೂ ಗೊಂದಲದ ಗೂಡಾಗಿ ಉಳಿದಿದೆ. ಈಗಾಗಲೇ ತುರ್ತಾಗಿ ವಿಪಕ್ಷ ನಾಯಕ ಬೇಕಾಗಿದೆ ಎಂದು ರಾಜ್ಯ ಕಾಂಗ್ರೆಸ್‌ ಪ್ರಕಟಣೆಯನ್ನ ನೀಡಿತ್ತು.

Leader Of Opposition Urgently Wanted Congress Said

ಈ ಕುರಿತು ಜುಲೈ 1 ರಂದು ಟ್ವೀಟ್‌ ಮೂಲಕ ಕಾಂಗ್ರೆಸ್‌ ಪ್ರಕಟಣೆಯನ್ನ ನೀಡಿದ್ದು, ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ. ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. ಸಿಡಿಗೆ ತಡೆಯಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.

ಅಲ್ಲದೇ RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು.
ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ಇನ್ನೂ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ.

ಈಗಾಗಲೇ ಕಾಂಗ್ರೆಸ್‌ ಟ್ವೀಟ್‌ ಅತೀ ಶೀಘ್ರದಲ್ಲೇ ಸಮರ್ಥ ವಿಪಕ್ಷ ನಾಯಕರು ಆಯ್ಕೆಯಾಗಲಿದ್ದಾರೆ ಎಂದು ಬಿಜೆಪಿ ಹೇಳಿದ್ದು, ಇದೀಗ ಮತ್ತೆ ಕರ್ನಾಟಕ ಕಾಂಗ್ರೆಸ್‌, ನಮ್ಮ ಪ್ರಕಟಣೆಗೆ ಇನ್ನೂ ಸ್ಪಂದನೆ ಸಿಕ್ಕಿಲ್ಲ, ಬಿಜೆಪಿ ನಿಮ್ಮ ಹೈಕಮಾಂಡ್ ವರಿಷ್ಠರಿಗೆ ಇನ್ನೂ ಸೂಕ್ತ ಸಂದರ್ಭ, ಸೂಕ್ತ ಸಮಯ, ಸೂಕ್ತ ಮುಹೂರ್ತ ಕೂಡಿ ಬಂದಿಲ್ಲವೇ? ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ಹಿನಾಯ ಸೋಲಿನ ಬಳಿಕ ಕರ್ನಾಟಕದ ಬಿಜೆಪಿಯನ್ನು ದೆಹಲಿಯ ನಾಯಕರು ಕಾಲ ಕೆಳಗಿನ ಕಸದಂತೆ ಕಾಣುತ್ತಿದ್ದಾರೆಯೇ? ಅಥವಾ ಆಂತರಿಕ ಕಲಹ ಇನ್ನೂ ಮುಗಿದಿಲ್ಲವೇ ಎಂದು ವಿಪಕ್ಷದ ಸ್ಥಾನದ ಆಯ್ಕೆ ವಿಳಂಬದ ಕುರಿತು ರಾಜ್ಯ ಕಾಂಗ್ರೆಸ್‌ ಕುಟುಕಿದೆ.

ಚುನಾವಣೆ ಫಲಿತಾಂಶ ಬಂದು 2 ತಿಂಗಳಾಯ್ತು, ಅಧಿವೇಶನವೂ ಪ್ರಾರಂಭ ಆಯ್ತು, ಆದರೆ ಬಿಜೆಪಿಯ ವಿರೋಧ ಪಕ್ಷದ ನಾಯಕನೆಲ್ಲಿ? ಎಂದು ಕಾಂಗ್ರೆಸ್‌ ಪ್ರಶ್ನಿಸಿದ್ದು, ನಾವಿಕನಿಲ್ಲದ ನೌಕೆ, ನಾಯಕನಿಲ್ಲದ ಬಿಜೆಪಿ ಎರಡೂ ಮುಳುಗುವುದು ನಿಶ್ಚಿತ! ಎಂದು ರಾಜ್ಯ ಕಾಂಗ್ರೆಸ್‌ ಹೇಳಿದೆ.

ಹಿಂದೆ ಬಿ ಎಸ್‌ ಯಡಿಯೂರಪ್ಪ ಅವರು ಸಂಪುಟ ರಚನೆಗೆ ತಿಂಗಳುಗಟ್ಟಲೆ ಹೈಕಮಾಂಡ್ ಬಾಗಿಲು ಕಾದಿದ್ದರು, ನಂತರ ಬಸವರಾಜ ಬೊಮ್ಮಾಯಿ ಅವರು ಸಂಪುಟ ವಿಸ್ತರಣೆಗೆ 15ಕ್ಕೂ ಹೆಚ್ಚು ಬಾರಿ ದೆಹಲಿ ದಂಡಯಾತ್ರೆ ಮಾಡಿದ್ದರು, ಆದರೂ ಸಂಪುಟ ವಿಸ್ತರಣೆಯಾಗಲಿಲ್ಲ. ಈಗ ವಿಪಕ್ಷ ನಾಯಕನ ಆಯ್ಕೆಗೆ ಸತಾಯಿಸುತ್ತಿದ್ದಾರೆ. ಬಿಜೆಪಿ ಹೈಕಮಾಂಡಿಗೆ ಕರ್ನಾಟಕವನ್ನಷ್ಟೇ ಅಲ್ಲ, ಕರ್ನಾಟಕದ ಬಿಜೆಪಿಯನ್ನು ಕಂಡರೂ ತಾತ್ಸಾರವೇ? ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ಹಿಂದೆ ಬಿಜೆಪಿ ಅವಧಿಯಲ್ಲಿ ರಾಜ್ಯವಾಳುತ್ತಿದ್ದಿದ್ದು ಬೊಮ್ಮಾಯಿಯೂ ಅಲ್ಲ, ಬಿಜೆಪಿಯೂ ಅಲ್ಲ. ಕರ್ನಾಟಕವನ್ನು ಆಳುತ್ತಿದ್ದಿದ್ದು ಕೇಶವಕೃಪ ಎನ್ನುವುದು ಹಲವು ಬಾರಿ ಸಾಬೀತಾಗಿದೆ. RSS ಸಿದ್ಧಾಂತವನ್ನು ಪಠ್ಯಪುಸ್ತಕಗಳಲ್ಲಿ, ಸರ್ಕಾರದಲ್ಲಿ, ಸಮಾಜದಲ್ಲಿ ಮಾತ್ರವಲ್ಲ, ನ್ಯಾಯಾಂಗದಲ್ಲೂ ವ್ಯವಸ್ಥಿತವಾಗಿ ತೂರಿಸುವ ಪ್ರಯತ್ನ ಮಾಡಲಾಗಿತ್ತು ಎಂಬ ಸಂಗತಿ ಬೆಳಕಿಗೆ ಬಂದಿದೆ.

ಅಭಿಯೋಜನೆ ಇಲಾಖೆಯ ವಕೀಲರ ನೇಮಕಾತಿಯಲ್ಲಿ, ಕಾನೂನು ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ಸಂಘಪರಿವಾರದವರಿಗೆ ಮಣೆ ಹಾಕಿರುವುದರ ವಿರುದ್ಧ ಅಭಿಯೋಜನಾ ಇಲಾಖೆಯ ನೌಕರರೇ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದಾರೆ. ನಮ್ಮ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲಿದೆ. ವ್ಯವಸ್ಥೆಯ 'ಸಂಘಿ'ಕರಣಕ್ಕೆ ನಾವು ಎಂದಿಗೂ ಬಿಡುವುದಿಲ್ಲ ಎಂದು ಕಾಂಗ್ರೆಸ್‌ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+