ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಪಿಸಿಸಿಯ ನೂತನ ಸಾರಥಿಗೆ ಅಭಿನಂದನೆಗಳ ಮಹಾಪೂರ

|
Google Oneindia Kannada News

ಬೆಂಗಳೂರು, ಮಾರ್ಚ್ 11 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ, ಕನಕಪುರ ಶಾಸಕ ಡಿ. ಕೆ. ಶಿವಕುಮಾರ್ ನೇಮಕವಾಗಿದ್ದಾರೆ. ವಿವಿಧ ಪಕ್ಷಗಳ ನಾಯಕರು ಡಿ. ಕೆ. ಶಿವಕುಮಾರ್ ಅಭಿನಂದಿಸಿದ್ದಾರೆ.

ಬುಧವಾರ ಎಐಸಿಸಿ ಕೆಪಿಸಿಸಿ ಅಧ್ಯಕ್ಷರಾಗಿ ಡಿ. ಕೆ. ಶಿವಕುಮಾರ್ ನೇಮಕ ಮಾಡಿದೆ. ಮೂವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ. "ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ" ಎಂದು ಡಿ. ಕೆ. ಶಿವಕುಮಾರ್ ಹೇಳಿದರು.

ಕೆಪಿಸಿಸಿ ಅಧ್ಯಕ್ಷರಾಗಿ ಡಿ. ಕೆ. ಶಿವಕುಮಾರ್ ನೇಮಕಕೆಪಿಸಿಸಿ ಅಧ್ಯಕ್ಷರಾಗಿ ಡಿ. ಕೆ. ಶಿವಕುಮಾರ್ ನೇಮಕ

ಡಿ. ಕೆ. ಶಿವಕುಮಾರ್ ತವರು ಕ್ಷೇತ್ರ ಕನಕಪುರದಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. "ಮುಂದಿನ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ಗೆ ಜೈ" ಎಂಬ ಜೈಕಾರ ಮುಗಿಲು ಮುಟ್ಟಿದೆ. "ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡುವೆ" ಎಂದು ಡಿ. ಕೆ. ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಸಾತನೂರು ಟು ಕೆಪಿಸಿಸಿ : ಡಿಕೆಶಿ ರಾಜಕಾರಣ & 'ಆನೆ ನಡಿಗೆ'ಸಾತನೂರು ಟು ಕೆಪಿಸಿಸಿ : ಡಿಕೆಶಿ ರಾಜಕಾರಣ & 'ಆನೆ ನಡಿಗೆ'

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಡಿ. ಕೆ. ಶಿವಕುಮಾರ್‌ಗೆ ಅಭಿನಂದನೆ ಸಲ್ಲಿಸಿದ್ದಾರೆ.

ಸಿದ್ದರಾಮಯ್ಯ ಅಭಿನಂದನೆ

ಸಿದ್ದರಾಮಯ್ಯ ಅಭಿನಂದನೆ

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು ಡಿ. ಕೆ. ಶಿವಕುಮಾರ್‌ಗೆ ಅಭಿನಂದನೆ ಸಲ್ಲಿಸಿದ್ದಾರೆ. "ಕೆಪಿಸಿಸಿಯ ನೂತನ ಅಧ್ಯಕ್ಷರಾದ ಡಿ.ಕೆ‌.ಶಿವಕುಮಾರ್ ಅವರಿಗೆ ಅಭಿನಂದನೆಗಳು. ನೂತನ ಅಧ್ಯಕ್ಷರನ್ನು ನೇಮಿಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಕೃತಜ್ಞತೆಗಳು. ಶಿವಕುಮಾರ್ ಅವರಿಗೆ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಸಹಕಾರ ನೀಡಿ, ಪಕ್ಷಕ್ಕೆ ಇನ್ನಷ್ಟು ಬಲತುಂಬಬೇಕೆಂದು ಕೋರುತ್ತಿದ್ದೇನೆ" ಎಂದು ಟ್ವೀಟ್ ಮಾಡಿದ್ದಾರೆ.

ಅಭಿನಂದನೆ ಸಲ್ಲಿಸಿದ ಎಚ್‌ಡಿಕೆ

ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದು, "ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಡಿ.ಕೆ.ಶಿವಕುಮಾರ್ ರವರಿಗೆ ಅಭಿನಂದನೆಗಳು" ಎಂದು ಹೇಳಿದ್ದಾರೆ.

ಕೃಷ್ಣ ಬೈರೇಗೌಡ ಅಭಿನಂದನೆ

ಮಾಜಿ ಸಚಿವ ಕೃಷ್ಣ ಬೈರೇಗೌಡ ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಮತ್ತು ಮೂವರು ಕಾರ್ಯಾಧ್ಯಕ್ಷರನ್ನು ಅಭಿನಂದನೆ ಸಲ್ಲಿಸಿದ್ದಾರೆ.

ಈಶ್ವರ ಖಂಡ್ರೆ ಅಭಿನಂದನೆ

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಕೆಪಿಸಿಸಿ ನೂತನ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮತ್ತು ಪ್ರತಿಪಕ್ಷ ನಾಯಕರಾಗಿ ಮುಂದುವರೆದ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.

English summary
AICC appointed D.K.Shivakumar as KPCC president. Various Congress leaders congratulate him.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X