AIADMK ಒಪಿಎಸ್ ಬಣದ ನಾಯಕರಿಂದ ಬಿಎಸ್‌ವೈ ಭೇಟಿ: ಕರ್ನಾಟಕ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ- ಮಾಹಿತಿ, ವಿವರ

ಬೆಂಗಳೂರು, ಏಪ್ರಿಲ್‌ 07: ಎಐಎಡಿಎಂಕೆ ( AIADMK ) ಉಚ್ಚಾಟಿತ ನಾಯಕ ಓ ಪನ್ನೀರಸೆಲ್ವಂ ಬಣದ ನಾಯಕರು ಶುಕ್ರವಾರ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ( BS Yediyurappa ) ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದರು. ಮೇ 10 ರಂದು ನಡೆಯಲಿರುವ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ( Karnataka Assembly Elections 2023 ) ಸ್ಪರ್ಧಿಸಲು ಆಸಕ್ತಿ ತೋರಿಸಿದ್ದಾರೆ.

'ಪನ್ನೀರಸೆಲ್ವಂ ನೇತೃತ್ವದ ಎಐಎಡಿಎಂಕೆ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದೆ. ಕರ್ನಾಟಕದಲ್ಲಿ ಎಐಎಡಿಎಂಕೆಯು ಬೆಂಗಳೂರಿನ ಗಾಂಧಿ ನಗರ ಮತ್ತು ಕೆಜಿಎಫ್ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆದ್ದ ಇತಿಹಾಸವಿದೆ. ಈ ಬಾಂಧವ್ಯ ಮತ್ತು ಗೆಲುವಿನ ಓಟ ಮುಂದುವರಿಯಬೇಕೆಂದು ನಾವು ಬಯಸುತ್ತೇವೆ' ಎಂದು ಒಪಿಎಸ್ ಬೆಂಬಲಿಗ ನಾಯಕ ಪುಗಜೆಂತಿ ಸುದ್ದಿಗಾರರಿಗೆ ತಿಳಿಸಿದರು.

Leaders of OPS faction of AIADMK meet Yediyurappa, show interest to contest Karnataka polls

ಪನ್ನರ್‌ಸೆಲ್ವಂ ಪರವಾಗಿ ಬಿಜೆಪಿ ನಾಯಕ ಬಿ ಎಸ್‌ ಯಡಿಯೂರಪ್ಪನವರಿಗೆ ಪತ್ರವನ್ನು ನೀಡಿದ್ದೇನೆ ಎಂದು ಅವರು ಹೇಳಿದರು.

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಮೈ ಅವರು ಕರ್ನಾಟಕ ಚುನಾವಣೆಗೆ ಸ್ಪರ್ಧಿಸುವ ಕುರಿತು ಚರ್ಚಿಸಲು ಏಪ್ರಿಲ್ 9 ರಂದು (ಭಾನುವಾರ) ತುರ್ತು ಸಭೆಯನ್ನು ಘೋಷಿಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ಗಮನಾರ್ಹ ತಮಿಳು ಮತದಾರರಿರುವ ಮೂರು ಕ್ಷೇತ್ರಗಳನ್ನು ಹಂಚಿಕೆ ಮಾಡುವಂತೆ ಈಗಾಗಲೇ ಬಿಜೆಪಿ ಹೈಕಮಾಂಡ್‌ಗೆ ಮನವಿ ಮಾಡಿರುವುದಾಗಿ ಇಪಿಎಸ್ ಬಣದ ಮೂಲಗಲು ತಿಳಿಸಿವೆ.

Leaders of OPS faction of AIADMK meet Yediyurappa, show interest to contest Karnataka polls

ರಾಜ್ಯದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ನಿರ್ಧರಿಸುವ ಅಂತಿಮ ಸಭೆಯಲ್ಲಿ ಭಾಗವಹಿಸಲು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಇಂದು ದೆಹಲಿಗೆ ತೆರಳಲಿದ್ದಾರೆ. ಇದುವರೆಗೆ ಕಾಂಗ್ರೆಸ್ 166 ಅಭ್ಯರ್ಥಿಗಳು ಮತ್ತು ಜೆಡಿಎಸ್ 93 ಅಭ್ಯರ್ಥಿಗಳನ್ನು ಘೋಷಿಸಿದ್ದರೆ, ಕರ್ನಾಟಕದಲ್ಲಿ 224 ಸ್ಥಾನಗಳ ವಿಧಾನಸಭಾ ಚುನಾವಣೆಗೆ ಬಿಜೆಪಿ ಇನ್ನೂ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿಲ್ಲ.

ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಎರಡನೇ ಪಟ್ಟಿಯಲ್ಲಿ ಕಾಂಗ್ರೆಸ್ ಗುರುವಾರ 42 ಅಭ್ಯರ್ಥಿಗಳನ್ನು ಪ್ರಕಟಿಸಿದೆ. 42 ಸ್ಥಾನಗಳ ಪೈಕಿ ಮೇಲುಕೋಟೆ ಕ್ಷೇತ್ರವನ್ನು ಸರ್ವೋದಯ ಕರ್ನಾಟಕ ಪಕ್ಷಕ್ಕೆ ಬಿಟ್ಟುಕೊಟ್ಟಿದೆ.

Leaders of OPS faction of AIADMK meet Yediyurappa, show interest to contest Karnataka polls

ಕಳೆದ ತಿಂಗಳು ಬಿಡುಗಡೆ ಮಾಡಿದ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿಯಲ್ಲಿ 124 ಹೆಸರುಗಳನ್ನು ಪಕ್ಷ ಘೋಷಿಸಿತ್ತು. ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಕಣಕ್ಕಿಳಿಯಲಿದ್ದು, ಕನಕಪುರ ಅಭ್ಯರ್ಥಿಯಾಗಿ ಡಿಕೆ ಶಿವಕುಮಾರ್ ಕಣಕ್ಕಿಳಿಯಲಿದ್ದಾರೆ. ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ್‌ ಅವರು ಕೊರಟಗೆರೆಯಿಂದ ಕಣಕ್ಕಿಳಿಯಲಿದ್ದಾರೆ. ಕಾಂಗ್ರೆಸ್‌ ಪ್ರಚಾರ ಸಮಿತಿಯ ಅಧ್ಯಕ್ಷರಾಗಿರುವ ಎಂ ಬಿ ಪಾಟೀಲ್‌ ಬಬಲೇಶ್ವರ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ( ಏಪ್ರಿಲ್ 9 ) ಕರ್ನಾಟಕದ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾಡಳಿತವು ಏಪ್ರಿಲ್ 6 ರಿಂದ 9 ರವರೆಗೆ ಹುಲಿ ಸಂರಕ್ಷಿತ ಪ್ರದೇಶಕ್ಕೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಿದೆ. ಇದು ಪ್ರಧಾನಿ ನರೇಂದ್ರ ಮೋದಿಯವರು ಇದೇ ವರ್ಷ ರಾಜ್ಯಕ್ಕೆ ಎಂಟನೇ ಭಾರಿ ಭೇಟಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+