ಬಿಜೆಪಿಯಲ್ಲಿ ನವೆಂಬರ್‌ ಕ್ರಾಂತಿ; ವಿಜಯೇಂದ್ರ, ಆರ್. ಅಶೋಕ್ ಸ್ಥಾನಕ್ಕೆ ಕುತ್ತು? ರೇಸ್‌ನಲ್ಲಿ ಯಾರೆಲ್ಲ ಇದ್ದಾರೆ?

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ನವೆಂಬರ್‌ನಲ್ಲಿ ವಿಧಾನ ಪರಿಷತ್ ಚುನಾವಣೆ ಮುಗಿದ ಬಳಿಕ ರಾಜ್ಯ ಬಿಜೆಪಿಯ ಸಂಘಟನಾತ್ಮಕ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳಾಗುವ ಸಾಧ್ಯತೆ ಇದೆ. ಹೀಗಾಗಿ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಹೊಸಬರ ಅವಕಾಶ ನೀಡುವ ಕುರಿತು ಕಮಲ ಪಾಳಯದಲ್ಲಿ ಚರ್ಚೆ ನಡೆಯುತ್ತಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಘಟಕದ ಉಸ್ತುವಾರಿಯಾಗಿ ಹರೀಶ್ ದ್ವಿವೇದಿ ನೇಮಕಗೊಂಡಿದ್ದು, ಈ ಹಿಂದೆ ಉಸ್ತುವಾರಿಯಾಗಿದ್ದ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರ ಬದಲಿಗೆ ಅವರು ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ ಘಟಕದ ಪ್ರಮುಖ ಹುದ್ದೆಗಳಲ್ಲಿ ಬದಲಾವಣೆ ಆಗಬಹುದು ಎಂಬ ನಿರೀಕ್ಷೆ ಹೆಚ್ಚಾಗಿದೆ.

Leadership change November Shake-Up in Karnataka BJP Are BY Vijayendra amp amp R Ashoka Set to Lose Their Posts

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ನವೆಂಬರ್‌ನಲ್ಲಿ ತಮ್ಮ ತಮ್ಮ ಹುದ್ದೆಗಳಲ್ಲಿ ಮೂರು ವರ್ಷ ಪೂರ್ಣಗೊಳಿಸಲಿದ್ದಾರೆ. ಹೀಗಾಗಿ, ಪಕ್ಷದ ವರಿಷ್ಠರು ಮುಂದಿನ ನಾಯಕತ್ವದ ಬಗ್ಗೆ ನಿರ್ಧಾರ ಕೈಗೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.

Leadership change: ವಿಜಯೇಂದ್ರ ನಾಯಕತ್ವ ಬದಲಾವಣೆಗೆ ಚರ್ಚೆ?

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕುರಿತು ಕಳೆದ ನಾಲ್ಕು ತಿಂಗಳಿಂದ ಚರ್ಚೆಗಳು ನಡೆಯುತ್ತಿವೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಗೆ ತಿಳಿಸಿದ್ದಾರೆ. ವಿಜಯೇಂದ್ರ ನೇತೃತ್ವದಲ್ಲಿ ಪಕ್ಷ ನಿರೀಕ್ಷಿತ ಫಲಿತಾಂಶಗಳನ್ನು ಸಾಧಿಸಿಲ್ಲ ಎಂಬ ಅಭಿಪ್ರಾಯವನ್ನು ಕೆಲವು ನಾಯಕರು ವ್ಯಕ್ತಪಡಿಸುತ್ತಿದ್ದಾರೆ. ಉಪಚುನಾವಣೆಗಳಲ್ಲಿನ ಹಿನ್ನಡೆ ಹಾಗೂ ಆಡಳಿತಾರೂಢ ಕಾಂಗ್ರೆಸ್ ವಿರುದ್ಧದ ಹೋರಾಟದ ವಿಚಾರವೂ ಚರ್ಚೆಯಲ್ಲಿ ಪ್ರಸ್ತಾಪವಾಗಿದೆ ಎನ್ನಲಾಗಿದೆ.

ಅಕ್ಟೋಬರ್ 23ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆ ಬಳಿಕ ನಾಯಕತ್ವ ಬದಲಾವಣೆ ಕುರಿತು ಸ್ಪಷ್ಟತೆ ಸಿಗಬಹುದು ಎಂಬ ನಿರೀಕ್ಷೆಯನ್ನು ಪಕ್ಷದ ಕೆಲವು ನಾಯಕರು ವ್ಯಕ್ತಪಡಿಸಿದ್ದಾರೆ. ಆದರೆ, ಈ ಬಗ್ಗೆ ಬಿಜೆಪಿ ಹೈಕಮಾಂಡ್‌ನಿಂದ ಅಧಿಕೃತ ಘೋಷಣೆ ಹೊರಬಿದ್ದಿಲ್ಲ.

ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರ ಹೆಸರು ಚಾಲ್ತಿಯಲ್ಲಿದೆ?

ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಮುರುಗೇಶ್ ನಿರಾಣಿ, ಕೇಂದ್ರ ಸಚಿವರಾದ ವಿ. ಸೋಮಣ್ಣ ಮತ್ತು ಶೋಭಾ ಕರಂದ್ಲಾಜೆ ಹಾಗೂ ಶಾಸಕ ಮಹೇಶ್ ತೆಂಗಿನಕಾಯಿ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷರಾಗಿರುವ ಮುರುಗೇಶ್ ನಿರಾಣಿ ಅವರ ಹೆಸರು ಮುಂಚೂಣಿಯಲ್ಲಿದೆ ಎನ್ನಲಾಗಿದೆ. ಕೇಂದ್ರ ನಾಯಕರೊಂದಿಗೆ ಉತ್ತಮ ಸಂಬಂಧ ಹೊಂದಿರುವುದು ಅವರ ಪರವಾಗಿ ಕೆಲಸ ಮಾಡಬಹುದು ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಸೇರಿದ ನಿರಾಣಿ ಅವರಿಗೆ ಉತ್ತರ ಮತ್ತು ಮಧ್ಯ ಕರ್ನಾಟಕದ ರಾಜಕೀಯ ಸಮೀಕರಣಗಳು ಅನುಕೂಲವಾಗಬಹುದು ಎಂಬ ಲೆಕ್ಕಾಚಾರವೂ ಇದೆ.

ಆದರೆ, ರಾಜ್ಯ ಬಿಜೆಪಿಯ ಸಂಘಟನೆಯಲ್ಲಿ ಯಡಿಯೂರಪ್ಪ ಕುಟುಂಬದ ಪ್ರಭಾವವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂಬ ಅಭಿಪ್ರಾಯವೂ ಪಕ್ಷದೊಳಗಿದೆ. ಶಿವಮೊಗ್ಗ ಸಂಸದ ಹಾಗೂ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ರಾಘವೇಂದ್ರ ಅವರನ್ನು ಕೇಂದ್ರ ಸಚಿವ ಸಂಪುಟಕ್ಕೆ ಸೇರಿಸುವ ಸಾಧ್ಯತೆ ಕುರಿತು ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ. ಅಂತಹ ಬೆಳವಣಿಗೆ ನಡೆದರೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮತ್ತೊಬ್ಬ ನಾಯಕನನ್ನು ಆಯ್ಕೆ ಮಾಡಬಹುದು ಎಂಬ ಮಾತುಗಳೂ ಕೇಳಿಬರುತ್ತಿವೆ.

ವಿಪಕ್ಷ ನಾಯಕ ಸ್ಥಾನಕ್ಕೂ ಹೊಸ ಹೆಸರುಗಳ ಚರ್ಚೆ

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸ್ಥಾನಕ್ಕೂ ಬದಲಾವಣೆಯ ಸಾಧ್ಯತೆ ಕುರಿತು ಚರ್ಚೆ ನಡೆಯುತ್ತಿದೆ. ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರ ಹೆಸರನ್ನು ಈ ಹುದ್ದೆಗೆ ಪರಿಗಣಿಸಬಹುದು ಎನ್ನಲಾಗಿದೆ. ಜಾತಿ ಸಮೀಕರಣಗಳ ಆಧಾರದ ಮೇಲೆ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯ ಬಗ್ಗೆಯೂ ಚರ್ಚೆ ನಡೆದಿದೆ.

ಇದೇ ವೇಳೆ, ಮಲ್ಲೇಶ್ವರಂ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರ ಹೆಸರು ಕೂಡ ಚರ್ಚೆಗೆ ಬಂದಿದೆ ಎಂದು ಮೂಲಗಳು ತಿಳಿಸಿವೆ. ಒಬಿಸಿ ಮತ್ತು ಒಕ್ಕಲಿಗ ಸಮುದಾಯಗಳಿಗೆ ಸೂಕ್ತ ಪ್ರಾತಿನಿಧ್ಯ ನೀಡುವ ಮೂಲಕ ಪಕ್ಷದ ಸಂಘಟನೆಯನ್ನು ಬಲಪಡಿಸುವ ಲೆಕ್ಕಾಚಾರವೂ ಇದೆ ಎನ್ನಲಾಗಿದೆ. ಆದರೆ, ಅಂತಿಮ ನಿರ್ಧಾರ ಬಿಜೆಪಿ ಹೈಕಮಾಂಡ್ ಕೈಯಲ್ಲಿದೆ.

2028ರ ಚುನಾವಣೆಗೂ ಮುನ್ನ ಸಂಘಟನೆ ಬಲಪಡಿಸುವ ತಂತ್ರ

ಮುಂದಿನ ಕೆಲವು ತಿಂಗಳಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳ ಜೊತೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೂ ಚುನಾವಣೆ ನಡೆಯುವ ನಿರೀಕ್ಷೆಯಿದೆ. ಈ ಚುನಾವಣೆಗಳು 2028ರ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿಯ ಸಂಘಟನಾ ಸಾಮರ್ಥ್ಯವನ್ನು ಪರೀಕ್ಷಿಸುವ ಪ್ರಮುಖ ಸಂದರ್ಭಗಳಾಗಲಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+