CM Post Fight: ಡಿ ಕೆ ಶಿವಕುಮಾರ್‌ಗೆ ಸಿಎಂ ಸ್ಥಾನ ಬಿಟ್ಟು ಕೊಡಿ; ವೇದಿಕೆ ಮೇಲೆಯೇ ಸಿದ್ದರಾಮಯ್ಯ ಗೆ ಮನವಿ ಮಾಡಿದ ಸ್ವಾಮೀಜಿ

ಬೆಂಗಳೂರು, ಜೂನ್‌ 27: ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯ ಕಾಂಗ್ರೆಸ್ ನಲ್ಲಿ ಕಳೆದ ನಾಲ್ಕು ದಿನಗಳಿಂದಲೂ ಹೆಚ್ಚುವರಿ ಡಿಸಿಎಂ ಹುದ್ದೆಗಳ ಸೃಷ್ಟಿ ಕುರಿತು ಸಾಕಷ್ಟು ನಡೆಯುತ್ತಿದ್ದು, ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ನಡುವೆ ಸಿಎಂ ಸ್ಥಾನಕ್ಕಾಗಿ ಹಗ್ಗಜಗ್ಗಾಟ ಏರ್ಪಡುವ ಸಾಧ್ಯತೆ ಇದೆ.

ಕೈ ಪಾಳಯದಲ್ಲಿ ಡಿಸಿಎಂ ಸ್ಥಾನದ ಕುರಿತು ಚರ್ಚೆಯಾಗುತ್ತಿದ್ದು, ಶೀಘ್ರದಲ್ಲಿಯೇ ರಾಜಕೀಯದಲ್ಲಿ ಬದಲಾವಣೆಯಾಗಲಿದೆಯೇ? ಅಥವಾ ಸಿಎಂ ಬದಲಾವಣೆಯಾಗಲಿದ್ದಾರಾ? ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇದಿಕೆಯಲ್ಲಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಅವರು ಸಿಎಂ ಬದಲಾವಣೆ ಕುರಿತು ನೇರವಾಗಿಯೇ ಮಾತನಾಡಿದ್ದಾರೆ.

Leave the post of CM to DK Shivakumar Says Chandrasekhara Swamiji

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿಯೊಬ್ಬರು ವೇದಿಕೆ ಮೇಲೆಯೇ ನೇರವಾಗಿ ಸಿಎಂ ಸಿದ್ದರಾಮಯ್ಯನವರಿಗೆ ನಿಮ್ಮ ಸ್ನಾನವನ್ನು ಡಿ.ಕೆ.ಶಿವಕುಮಾರ್ ಅವರಿಗೆ ಬಿಟ್ಟುಕೊಡಿ ಎಂದು ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಹಲವರು ಮುಖ್ಯಮಂತ್ರಿಗಳಾಗಿದ್ದಾರೆ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರ ಇನ್ನೂ ಆ ಭಾಗ್ಯ ಸಿಕ್ಕಿಲ್ಲ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಮನವಿ ಮಾಡಿದ್ದಾರೆ.

ನಿಮಗೆ ಅನುಭವವಿದೆ, ಈಗ ಡಿ.ಕೆ.ಶಿವಕುಮಾರ್ ಅವರಿಗೆ ಅವಕಾಶ ಕೊಡಿ. ಸಿದ್ದರಾಮಯ್ಯ ಮನಸ್ಸು ಮಾಡಿದರೆ ಮಾತ್ರ ಇದು ಸಾಧ್ಯ. ಹಾಗಾಗಿ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಮನವಿ ಮಾಡಿದ್ದಾರೆ. ಇನ್ನೂ ವೇದಿಕೆ ಮೇಲೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರಿದ್ದು, ವೇದಿಕೆ ಮೇಲೆಯೇ ಸ್ವಾಮೀಜಿಯೊಬ್ಬರ ಈ ಬೇಡಿಕೆ ಸರ್ಕಾರದಲ್ಲಿ ಸಂಚಲನ ಸೃಷ್ಟಿಯಾಗುವಂತೆ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+