ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪಿಯುಸಿ ಮೌಲ್ಯಮಾಪನ ಬಹಿಷ್ಕಾರ
ಬೆಂಗಳೂರು, ಜನವರಿ 29: ಪಿಯುಸಿ ಉಪನ್ಯಾಸಕರು ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಹಿಷ್ಕಾರಕ್ಕೆ ನಿಶ್ಚಯಿಸಿದ್ದಾರೆ.
ರಾಜ್ಯ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಈ ಬಗ್ಗೆ ಮಾತನಾಡಿ, 'ಪದವಿ ಪೂರ್ವ ಉಪನ್ಯಾಕರಿಗೆ ವೇತನ ತಾರತಮ್ಯ ಸರಿಪಡಿಸಿ, ವೇತನ ಬಡ್ತಿ ಮಂಜೂರು ಮಾಡುವುದು ಸೇರಿ ಇನ್ನೂ ಕೆಲವು ಬೇಡಿಕೆಗಳ ಈಡೇರಿಕೆಗಾಗಿ ಪಿಯುಸಿ ಉತ್ತರ ಪತ್ರಿಕೆ ಮೌಲ್ಯಮಾಪನ ಬಹಿಷ್ಕಾರ ಮಾಡುತ್ತಿದ್ದೇವೆ' ಎಂದು ಹೇಳಿದ್ದಾರೆ.
ಬೇಡಿಕೆ ಈಡೇರಿಕೆಗಾಗಿ ಈಗಾಗಲೇ ಒಂದು ಪ್ರತಿಭಟನೆ ಮಾಡಿದ್ದೇವೆ, ಆದರೂ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿಲ್ಲ, ಹಾಗಾಗಿ ಎರಡನೇ ಪ್ರತಿಭಟನೆಯನ್ನು ಜನವರಿ 30 ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಮಾಡಲಾಗುವುದು, ಅದಕ್ಕೂ ಸ್ಪಂದಿಸದಿದ್ದರೆ ಉತ್ತರ ಪತ್ರಿಕೆ ಮೌಲ್ಯ ಮಾಪನ ಬಹಿಷ್ಕರಿಸಲಾಗುವುದು ಎಂದಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗಿದ್ದು, ಪರೀಕ್ಷೆಯು ಮಾರ್ಚ್ 4 ರಂದು ಆರಂಭವಾಗಿ ಮಾರ್ಚ್ 22 ರಂದು ಕೊನೆಯಾಗಲಿದೆ. ಈಗಾಗಲೇ ಕರಡು ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದ್ದು, ತಿದ್ದಪಡಿ ಕಾರ್ಯ ಪ್ರಗತಿಯಲ್ಲಿದೆ.












Click it and Unblock the Notifications