ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪಿಯುಸಿ ಮೌಲ್ಯಮಾಪನ ಬಹಿಷ್ಕಾರ

|
Google Oneindia Kannada News

ಬೆಂಗಳೂರು, ಜನವರಿ 29: ಪಿಯುಸಿ ಉಪನ್ಯಾಸಕರು ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಹಿಷ್ಕಾರಕ್ಕೆ ನಿಶ್ಚಯಿಸಿದ್ದಾರೆ.

ರಾಜ್ಯ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಈ ಬಗ್ಗೆ ಮಾತನಾಡಿ, 'ಪದವಿ ಪೂರ್ವ ಉಪನ್ಯಾಕರಿಗೆ ವೇತನ ತಾರತಮ್ಯ ಸರಿಪಡಿಸಿ, ವೇತನ ಬಡ್ತಿ ಮಂಜೂರು ಮಾಡುವುದು ಸೇರಿ ಇನ್ನೂ ಕೆಲವು ಬೇಡಿಕೆಗಳ ಈಡೇರಿಕೆಗಾಗಿ ಪಿಯುಸಿ ಉತ್ತರ ಪತ್ರಿಕೆ ಮೌಲ್ಯಮಾಪನ ಬಹಿಷ್ಕಾರ ಮಾಡುತ್ತಿದ್ದೇವೆ' ಎಂದು ಹೇಳಿದ್ದಾರೆ.

ಪಿಯುಸಿ ಕರಡು ಪ್ರವೇಶ ಪತ್ರ ಬಿಡುಗಡೆ, ತಪ್ಪುಗಳಿದ್ದರೆ ತಿದ್ದಿಕೊಳ್ಳಿಪಿಯುಸಿ ಕರಡು ಪ್ರವೇಶ ಪತ್ರ ಬಿಡುಗಡೆ, ತಪ್ಪುಗಳಿದ್ದರೆ ತಿದ್ದಿಕೊಳ್ಳಿ

ಬೇಡಿಕೆ ಈಡೇರಿಕೆಗಾಗಿ ಈಗಾಗಲೇ ಒಂದು ಪ್ರತಿಭಟನೆ ಮಾಡಿದ್ದೇವೆ, ಆದರೂ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿಲ್ಲ, ಹಾಗಾಗಿ ಎರಡನೇ ಪ್ರತಿಭಟನೆಯನ್ನು ಜನವರಿ 30 ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಮಾಡಲಾಗುವುದು, ಅದಕ್ಕೂ ಸ್ಪಂದಿಸದಿದ್ದರೆ ಉತ್ತರ ಪತ್ರಿಕೆ ಮೌಲ್ಯ ಮಾಪನ ಬಹಿಷ್ಕರಿಸಲಾಗುವುದು ಎಂದಿದ್ದಾರೆ.

Lecturers Organization Decides To Boycott 2nd Puc Evaluation

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗಿದ್ದು, ಪರೀಕ್ಷೆಯು ಮಾರ್ಚ್‌ 4 ರಂದು ಆರಂಭವಾಗಿ ಮಾರ್ಚ್‌ 22 ರಂದು ಕೊನೆಯಾಗಲಿದೆ. ಈಗಾಗಲೇ ಕರಡು ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದ್ದು, ತಿದ್ದಪಡಿ ಕಾರ್ಯ ಪ್ರಗತಿಯಲ್ಲಿದೆ.

English summary
PUC lecturers organization decides to boycott 2nd puc exam answer sheet evaluation in demand of salary hike and many more things.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X