ಬೇಡಿಕೆ ಈಡೇರಿಕೆಗೆ ಒತ್ತಾಯ: ಪಿಯುಸಿ ಮೌಲ್ಯಮಾಪನ ಬಹಿಷ್ಕಾರ

ಬೆಂಗಳೂರು, ಮಾರ್ಚ್‌ 13: ಬೇಸಿಗೆ ರಜೆ ಕಡಿತ ಸೇರಿ ಇನ್ನೂ ಹಲವು ಭೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರು ಧರಣಿ ನಡೆಸಲು ಮುಂದಾಗಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ ಮೌಲ್ಯಮಾಪನ ಬಹಿಷ್ಕರಿಸುವ ಬೆದರಿಕೆ ಒಡ್ಡಿದ್ದಾರೆ.

ನಿನ್ನೆ ಕರ್ನಾಟಕ ರಾಜ್ಯ ಪದವಿ ಪೂರ್ಣ ಕಾಲೇಜುಗಳ ಉಪನ್ಯಾಸಕರ ಸಂಘದ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಅಲ್ಲದೆ ಇದೇ ತಿಂಗಳ 21 ರಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡಲು ಸಹ ನಿರ್ಣಯ ಮಾಡಲಾಗಿದೆ.

ಮೌಲ್ಯಮಾಪನಕ್ಕೆ ಹಾಜರಾಗದೆ ಸಾಮೂಹಿಕ ಗೈರಾಗುವ ಮೂಲಕ ಪ್ರತಿಭಟನೆ ಮಾಡಲಿದ್ದೇವೆ. ರಜೆ ದಿನಗಳಲ್ಲಿ ಮೌಲ್ಯಮಾಪನ ಇರುವುದರಿಂದ ಉಪನ್ಯಾಸಕರ ಮೇಲೆ ಯಾವುದೇ ಪರಿಣಾಮ ಆಗುವುದಿಲ್ಲ, ಒತ್ತಡ ಹೇರಿ ಮೌಲ್ಯಮಾಪನ ಮಾಡಿಸಿಕೊಳ್ಳಲು ಸರ್ಕಾರಕ್ಕೆ ಆಗುವುದಿಲ್ಲ ಎಂದು ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಹೇಳಿದ್ದಾರೆ.

Lecturers threaten they boycott puc exam paper evaluation

ನಮ್ಮ ಬೇಡಿಕೆಗಳನ್ನು ಈಡೇರಿಸಲು ಇದೇ ತಿಂಗಳು 20ರ ವರೆಗೆ ಸರ್ಕಾರಕ್ಕೆ ಗಡುವು ನೀಡಲಾಗಿತ್ತು. ಗಡುವು ಮುಗಿದ ನಂತರ, ಇದೇ ತಿಂಗಳ 21 ರಿಂದ ಫ್ರೀಡಂಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ಮಾಡಲಾಗುವುದು. ಧರಣಿಯಲ್ಲಿ ಸಂಘದ ಎಲ್ಲ ಪದಾಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಅವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+