Leelavati : ಸರ್ಕಾರಿ ಗೌರವಗಳೊಂದಿಗೆ ಡಾ. ಎಂ. ಲೀಲಾವತಿ ಅವರ ಅಂತ್ಯಕ್ರಿಯೆ

ಬೆಂಗಳೂರು,ಡಿಸೆಂಬರ್‌ 09: ಎಲ್ಲವೂ ಭಗವಂತನ ಲೀಲೆ. ಮನುಷ್ಯ ಹುಟ್ಟಿದ ಮೇಲೆ ಸಾವನ್ನಪ್ಪಲೇ ಬೇಕು. ಹುಟ್ಟು, ಸಾವಿನ ನಡುವೆ ಸಾಧನೆ ಮಾಡಬೇಕು. ಹಿರಿಯರಾದ ಲೀಲಾವತಿ ಅವರ ಸಾಧನೆ ಮತ್ತು ಸಾರ್ಥಕ ಜೀವನ ನಮಗೆಲ್ಲ ಆದರ್ಶ. ಸರ್ಕಾರ ಎಲ್ಲ ತರಹದ ಗೌರವದಿಂದ ಲೀಲಾವತಿ ಅಮ್ಮನವರನ್ನು ಕಳಿಸಿಕೊಡುವ ಕೆಲಸ ಮಾಡುತ್ತದೆ. ಸಕಲ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಮತ್ತು ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಲೀಲಾವತಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಡಿ ಕೆ ಶಿವಕುಮಾರ್‌, ಹಿರಿಯ ನಟಿ ಲೀಲಾವತಿ ಅವರು ಕಟ್ಟಿಸಿದ ಪಶುವೈದ್ಯಕೀಯ ಆಸ್ಪತ್ರೆ ಉದ್ಘಾಟಿಸಿದ್ದು ನನ್ನ ಮನಸ್ಸಿಗೆ ನೆಮ್ಮದಿ ಕೊಟ್ಟ ಕೆಲಸ ಎಂದು ಹೇಳಿದರು.

Leelavati Funeral With State Honors Says DK Shivakumar

ಲೀಲಾವತಿ ಅವರ ಹೆಸರಿನಲ್ಲಿ ಕಲಾಸೇವೆ, ಸಮಾಜಮುಖಿ ಕೆಲಸಗಳು ಉಳಿಸುವಂತಹ ಕೆಲಸವನ್ನು ಸರ್ಕಾರದಿಂದ ಮಾಡಲಾಗುವುದೇ ಎಂದು ಮಾಧ್ಯಮಗಳ ಪ್ರಶ್ನಗೆ ಉತ್ತರಿಸಿದ ಅವರು, ಸರ್ಕಾರ ಎಂದರೆ ನಾನೊಬ್ಬನೆ ಅಲ್ಲ. ಈ ಬಗ್ಗೆ ಲೀಲಾವತಿ ಅವರ ಪಾರ್ಥಿವ ಶರೀರದ ಎಲ್ಲ ಅಂತಿಮ ಕಾರ್ಯಗಳು ಮುಗಿದ ನಂತರ, ಪ್ರಮುಖರ ಬಳಿ ಚರ್ಚೆ ಮಾಡಿ ತೀರ್ಮಾನಿಸುತ್ತೇವೆ ಎಂದು ಹೇಳಿದರು.

ಕೊನೆಯ ಬಾರಿಗೆ ನನ್ನ ಮನೆಯ ಬಳಿ ಬಂದು ಸ್ವತಃ ಲೀಲಾವತಿ ಅವರೇ ಆಸ್ಪತ್ರೆ ಉದ್ಘಾಟನೆಗೆ ಆಹ್ವಾನ ಪತ್ರಿಕೆ ನೀಡಿದ್ದರು. ಆ ವೇಳೆ ಎಲ್ಲರನ್ನು ಗುರುತು ಹಿಡಿಯುತ್ತಿದ್ದರು, ಕೊಂಚ ಪ್ರಜ್ಞೆಯಿತ್ತು. ನೀವು ಬಂದು ಪಶು ವೈದ್ಯಕೀಯ ಆಸ್ಪತ್ರೆ ಉದ್ಘಾಟನೆ ಮಾಡಬೇಕು ಎಂಬುದು ನನ್ನ ಜೀವನದ ಕೊನೆಯ ಆಸೆ. ನೀವು ಉದ್ಘಾಟನೆಗೆ ಬರಬೇಕು ಎಂದು ಮನವಿ ಮಾಡಿಕೊಂಡಿದ್ದರು.

Leelavati Funeral With State Honors Says DK Shivakumar

ನನ್ನ ಸಾಕಷ್ಟು ಕೆಲಸಗಳ ಒತ್ತಡದ ನಡುವೆಯೂ ಆಸ್ಪತ್ರೆ ಉದ್ಘಾಟನೆ ಮಾಡಿದ್ದೆ. ಯಾರೂ ಕೇಳದೆ ಇದ್ದರೂ ಅವರಾಗಿಯೇ ಪಶುವೈದ್ಯಕೀಯ ಆಸ್ಪತ್ರೆ ಕಟ್ಟಿಸಿದ್ದರು. ಇದು ಅವರ ಹೃದಯ ವೈಶಾಲ್ಯತೆಗೆ ಒಂದು ಸಾಕ್ಷಿ" ಎಂದು ಶಿವಕುಮಾರ್ ಅವರು ಬಣ್ಣಿಸಿದರು.

ನನ್ನ ಮತ್ತು ಲೀಲಾವತಿ ಅವರ ಪರಿಚಯ ನಲವತ್ತು ವರ್ಷಗಳಷ್ಟು ಹಳೆಯದು. ದುಡ್ಡಿರುವ ಮನುಷ್ಯ ದಾನ- ಧರ್ಮ ಮಾಡಬಹುದು, ಆದರೆ ಆರ್ಥಿಕವಾಗಿ ಶಕ್ತಿ ಇಲ್ಲದ ಅವರು ಸಮಾಜಕ್ಕೆ ಮತ್ತು ಮೂಕ ಪ್ರಾಣಿಗಳಿಗೆ ಸಹಾಯ ಮಾಡಬೇಕೆಂದು ಪ್ರಾಥಮಿಕ ಆಸ್ಪತ್ರೆ ಮತ್ತು ಪಶು ವೈದ್ಯಕೀಯ ಆಸ್ಪತ್ರೆ ನಿರ್ಮಿಸಿದ್ದು ದೊಡ್ಡ ವಿಷಯ ಮತ್ತು ಸಮಾಜಕ್ಕೆ ದೊಡ್ಡ ಸಂದೇಶ ಎಂದು ತಿಳಿಸಿದರು.

ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ : ಸಿದ್ದರಾಮಯ್ಯ

ಕನ್ನಡ ಚಿತ್ರರಂಗ ಕಂಡಂತಹ ಬಹುಮುಖ ಪ್ರತಿಭೆಯಾಗಿದ್ದ ನಟಿ ಲೀಲಾವತಿಯವರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರವನ್ನು ನೆರವೇರಿಸಲು ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ನಟಿ ಶ್ರೀಮತಿ ಲೀಲಾವತಿಯವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವವನ್ನು ಸಲ್ಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೀಲಾವತಿಯವರು ಅನಾರೋಗ್ಯದಿಂದ ಬಳಲುತ್ತಿದ್ದಾಗ ಅವರ ನಿವಾಸಕ್ಕೆ ತೆರಳಿ ಅವರ ಯೋಗಕ್ಷೇಮ ವಿಚಾರಿಸಿದ್ದೆ. ಆಗ ಅವರ ಮಗ ವಿನೋದರಾಜ್ ರನ್ನು ಭೇಟಿಯಾಗಿ, ಅವರಿಗೆ ಯಾವುದೇ ರೀತಿಯ ಸಹಾಯ ಮಾಡಲು ಸರ್ಕಾರ ಸಿದ್ಧವಿದೆ ಎಂದು ಧೈರ್ಯ ತುಂಬಲಾಗಿತ್ತು. ಲೀಲಾವತಿ ಹಾಗೂ ವಿನೋದರಾಜ್ ಅವರ ತಾಯಿಮಗನ ಸಂಬಂಧ ಆದರ್ಶಮಯವಾದದ್ದು ಎಂದರು.

ರಂಗಭೂಮಿಯಿಂದ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ಲೀಲಾವತಿಯವರು 600ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ನೈಜ್ಯ ನಟನೆಗೆ ಹೆಸರಾಗಿದ್ದ ಅವರು ದಕ್ಷಿಣ ಭಾರತದ ಎಲ್ಲ ಭಾಷಾ ಚಿತ್ರರಂಗದಲ್ಲಿ ನಟಿಸಿದ್ದಾರೆ. ಬಹುಭಾಷಾ ಕಲಾವಿದರಾಗಿದ್ದ ಲೀಲಾವತಿಯವರು ನಾಯಕಿ, ಪೋಷಕ ನಟಿಯಾಗಿ ಪಾತ್ರಗಳಿಗೆ ಜೀವ ತುಂಬುತ್ತಿದ್ದರು. ಡಾ. ರಾಜ್ ಕುಮಾರ್ ಹಾಗೂ ಲೀಲಾವತಿಯವರದು ಜನಪ್ರಿಯ ಜೋಡಿಯಾಗಿದ್ದು, ತನ್ನ ವಿದ್ಯಾರ್ಥಿ ದೆಸೆಯಲ್ಲಿ ಗೆಜ್ಜೆಪೂಜೆ, ಕುಲವಧು, ಭಕ್ತ ಕುಂಬಾರ ಸೇರಿದಂತೆ ಅನೇಕ ಚಲನಚಿತ್ರಗಳನ್ನು ವೀಕ್ಷಿಸಿರುವುದಾಗಿ ಮುಖ್ಯಮಂತ್ರಿಗಳು ಸ್ಮರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+