ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಣೇಶ ಚತುರ್ಥಿ ರಜೆ; ಖಾಸಗಿ ಬಸ್‌ ಮಾಲೀಕರಿಗೆ ಎಚ್ಚರಿಕೆ ಕೊಟ್ಟ ಸಚಿವರು

|
Google Oneindia Kannada News

ಬೆಂಗಳೂರು, ಆಗಸ್ಟ್ 28: ಹಬ್ಬ ಬಂತೆಂದರೆ ಸಾಕು ರಾಜಧಾನಿ ಬೆಂಗಳೂರಿನಿಂದ ಊರಿಗೆ ಹೋಗುವವರ ಸಂಖ್ಯೆ ಏನು ಕಡಿಮೆ ಇರುವುದಿಲ್ಲ, ಹೋಗಿ ಹಬ್ಬ ಮುಗಿಸಿ ವಾಪಸ್ ಆದರೆ ಏನೋ ಸಮಾಧಾನ. ಆದ್ದರಿಂದಲೇ ಪ್ರತಿ ಬಾರಿ ಹಬ್ಬ ಬಂದಾಗಲೂ ಜನ ಊರಿಗೆ ದೌಡಾಯಿಸುತ್ತಾರೆ, ಬಸ್ಸು, ರೈಲುಗಳು ಕಿಕ್ಕಿರಿದು ತುಂಬುತ್ತವೆ. ಆದರೆ ಇದನ್ನೇ ಬಂಡವಾಳ ಮಾಡಿಕೊಳ್ಳುವ ಕೆಲವು ಖಾಸಗಿ ಬಸ್ ಕಂಪನಿಗಳು ಗ್ರಾಹಕರ ಸುಲಿಗೆಗೆ ಇಳಿಯುತ್ತವೆ. ಹಬ್ಬದ ಸಂಭ್ರಮಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಂದ ಒಂದಕ್ಕೆ ಎರಡರಷ್ಟು ವಸೂಲಿಗೆ ಮುಂದಾಗುತ್ತವೆ.

ಗೌರಿ ಗಣೇಶ ಹಬ್ಬದ ಸಂದರ್ಭದಲ್ಲೂ ಖಾಸಗಿ ಬಸ್ ಮಾಲೀಕರು ನಿಗದಿಪಡಿಸಿದ್ದಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಹೆಚ್ಚಿನ ಹಣ ತೆಗೆದುಕೊಳ್ಳುವ ಬಸ್ ಮಾಲಿಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಾರಿಗೆ ಸಚಿವ ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.

ಗಣೇಶ ಹಬ್ಬ:ಕೆಎಸ್‌ಆರ್‌ಟಿಸಿಯಿಂದ ಪ್ರಯಾಣಿಕರಿಗಾಗಿ 500 ಹೆಚ್ಚುವರಿ ಬಸ್‌ಗಣೇಶ ಹಬ್ಬ:ಕೆಎಸ್‌ಆರ್‌ಟಿಸಿಯಿಂದ ಪ್ರಯಾಣಿಕರಿಗಾಗಿ 500 ಹೆಚ್ಚುವರಿ ಬಸ್‌

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಶ್ರೀರಾಮುಲು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಗೌರಿಗಣೇಶ ಹಬ್ಬದ ವೇಳೆ ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳುತ್ತಾರೆ. ಇದನ್ನು ಕೆಲವರು ದುರುಪಯೋಗ ಮಾಡಿಕೊಳ್ಳುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಆಯಾ ರೂಟ್‍ಗಳಲ್ಲಿ ಸರ್ಕಾರ ನಿಗದಿಪಡಿಸಿದ ದರವನ್ನಷ್ಟೇ ಪಡೆಯಬೇಕೆಂದು ಸೂಚನೆ ನೀಡಿದ್ದಾರೆ.

 ದುಪ್ಪಟ್ಟು ದರ ವಸೂಲಿ

ದುಪ್ಪಟ್ಟು ದರ ವಸೂಲಿ

ಕಳೆದ ಮೂರು ದಿನಗಳಿಂದ ಖಾಸಗಿ ಬಸ್ ಮಾಲೀಕರು ಪ್ರಯಾಣಿಕರಿಂದ ದುಪ್ಪಟ್ಟು ದರವನ್ನು ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಈ ಸಂಬಂಧ ಅಧಿಕಾರಿಗಳಿಗೆ ತಪಾಸಣೆ ನಡೆಸಿ ಸೂಕ್ತ ಕ್ರಮ ಜರುಗಿಸಲು ಸೂಚಿಸಿರುವುದಾಗಿ ಹೇಳಿದ್ದಾರೆ.

ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡುವುದು, ಇಲ್ಲವೇ ತೊಂದರೆ ಕೊಟ್ಟು ಹೆಚ್ಚಿನ ದರ ವಸೂಲಿ ಮಾಡಿದರೆ ಸಹಿಸುವುದಿಲ್ಲ. ಹಾಗೊಂದು ವೇಳೆ ನನ್ನ ಗಮನಕ್ಕೆ ಬಂದರೆ ಅಂತಹ ಬಸ್ ಮಾಲೀಕರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ.

ಓಣಂ ವಿಶೇಷ: ಕರ್ನಾಟಕದಿಂದ ಕೇರಳಕ್ಕೆ ಕೆಎಸ್‌ಆರ್‌ಟಿಸಿ ವಿಶೇಷ ಬಸ್‌ಗಳ ವ್ಯವಸ್ಥೆಓಣಂ ವಿಶೇಷ: ಕರ್ನಾಟಕದಿಂದ ಕೇರಳಕ್ಕೆ ಕೆಎಸ್‌ಆರ್‌ಟಿಸಿ ವಿಶೇಷ ಬಸ್‌ಗಳ ವ್ಯವಸ್ಥೆ

 ಕಾನೂನು ಕ್ರಮದ ಎಚ್ಚರಿಕೆ

ಕಾನೂನು ಕ್ರಮದ ಎಚ್ಚರಿಕೆ

ಲಾಭ-ನಷ್ಟದ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಪ್ರಯಾಣಿಕರಿಗೆ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸಿಕೊಡಿ. ಹಬ್ಬದ ಸಂದರ್ಭದಲ್ಲಿ ಕುಟುಂಬ ಸಮೇತ ತಮ್ಮ ಊರುಗಳಿಗೆ ಸಾರ್ವಜನಿಕರು ತೆರಳುತ್ತಾರೆ. ಅಕ್ರಮವಾಗಿ ಹಣ ಸಂಪಾದನೆ ಮಾಡುವುದೇ ನಮ್ಮ ಗುರಿ ಎಂದಾದರೆ ಕಾನೂನು ಕ್ರಮ ಅನುಭವಿಸಲು ಸಿದ್ದವಾಗಿರಿ ಎಂದು ಎಚ್ಚರಿಸಿದ್ದಾರೆ.

ನಾನು ಈಗಲೂ ಖಾಸಗಿ ಬಸ್ ಮಾಲೀಕರಲ್ಲಿ ಮನವಿ ಮಾಡುತ್ತೇನೆ. ದಯವಿಟ್ಟು ಪ್ರಯಾಣಿಕರಿಗೆ ತೊಂದರೆ ಕೊಡಬೇಡಿ. ಯಾವ ಯಾವ ರೂಟ್‍ಗಳಿಗೆ ಎಷ್ಟು ದರ ನಿಗದಪಡಿಸಿದೆಯೋ ಅಷ್ಟನ್ನು ಮಾತ್ರ ತೆಗೆದುಕೊಳ್ಳಬೇಕು. ಅದನ್ನು ಬಿಟ್ಟು ಹೆಚ್ಚಿನ ಹಣ ವಸೂಲಿ ಮಾಡಿದರೆ ಕಾನೂನು ಕ್ರಮ ಜರುಗಿಸುವುದು ಅನಿವಾರ್ಯ ಎಂದು ಅವರು ಹೇಳಿದ್ದಾರೆ.

 ಸಾರ್ವಜನಿಕ ಸಾರಿಗೆ ಬಳಸಲು ಶ್ರೀರಾಮುಲು ಮನವಿ

ಸಾರ್ವಜನಿಕ ಸಾರಿಗೆ ಬಳಸಲು ಶ್ರೀರಾಮುಲು ಮನವಿ

ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ತೆರಳಲು ಅನುಕೂಲವಾಗುವಂತೆ ಮುಂಗಡ ಆನ್‍ಲೈನ್ ಮೂಲಕ ಟಿಕೆಟ್ ಕಾಯ್ದಿರಿಸಲು ಅವಕಾಶ ಕಲ್ಪಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಸಚಿವ ಶ್ರೀರಾಮುಲು ಜನತೆಗೆ ಮನವಿ ಮಾಡಿದ್ದಾರೆ.

5ಕ್ಕೂ ಹೆಚ್ವು ಪ್ರಯಾಣಿಕರು ಮುಂಗಡ ಟಿಕೆಟ್ ಬುಕಿಂಗ್ ಮಾಡಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ಹಾಗೂ ಹೋಗುವ ಹಾಗೂ ಬರುವ ಟಿಕೆಟ್ ಒಟ್ಟಿಗೆ ಬುಕ್ ಮಾಡಿದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು. ಆಗಸ್ಟ್ 30 ಹಾಗೂ 31ರಂದು ಗೌರಿ ಗಣೇಶ ಹಬ್ಬದ ಹಿನ್ನಲೆ ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

 ಹಬ್ಬಕ್ಕಾಗಿ ವಿವಿಧ ಜಿಲ್ಲೆಗಳಿಗೆ ವಿಶೇಷ ಬಸ್ ವ್ಯವಸ್ಥೆ

ಹಬ್ಬಕ್ಕಾಗಿ ವಿವಿಧ ಜಿಲ್ಲೆಗಳಿಗೆ ವಿಶೇಷ ಬಸ್ ವ್ಯವಸ್ಥೆ

ಹಬ್ಬದ ಸಂದರ್ಭಕ್ಕಾಗಿ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದ್ದು, 500 ಹೆಚ್ಚುವರಿ ಬಸ್ ಗಳು ಸಂಚರಿಸಲಿವೆ. ಮೆಜೆಸ್ಟಿಕ್ ನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕುಂದಾಪುರ, ತಿರುಪತಿ, ಹೈದರಾಬಾದ್ ಸೇರಿದಂತೆ ಹಲವೆಡೆಗೆ ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಚಿವ ಶ್ರೀರಾಮುಲು ಮನವಿ ಮಾಡಿದರು.

ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ವಿರಾಜಪೇಟೆ, ಕುಶಾಲನಗರ ಹಾಗೂ ಶಾಂತಿನಗರ ನಿಲ್ದಾಣದಿಂದ ತಮಿಳುನಾಡು ಮತ್ತು ಕೇರಳ ಕಡೆಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ರಾಜ್ಯದ ಹಾಗೂ ಅಂತರಾಜ್ಯದ ವಿವಿಧ ಸ್ಥಳಗಳಿಂದ ಆಗಸ್ಟ್ 31ರಂದು ಆಗಮಿಸುವ ಪ್ರಯಾಣಿಕರಿಗೂ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಚಿವ ಶ್ರೀರಾಮುಲು ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದಾರೆ.

English summary
On the occasion of Gauri Ganesha festival, private bus owners have been accused of charging more than the stipulated amount and Transport Minister Sriramulu has warned that legal action will be taken against the bus owners who charge more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X