Get Updates
Get notified of breaking news, exclusive insights, and must-see stories!

Muda Case: ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌ : ಮಹತ್ವದ ಹೆಜ್ಜೆ ಇಟ್ಟ ಬಿಜೆಪಿ, ನಿಲುವೇನು?

ಬೆಂಗಳೂರು, ಫೆಬ್ರವರಿ 7: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಮುಡಾ ಪ್ರಕರಣದ ವಿಚಾರಣೆ ನಡೆಸಿದ ರಾಜ್ಯ ಹೈಕೋರ್ಟ್ ಇಂದು ಬಿಗ್ ರಿಲೀಫ್ ನೀಡಿದೆ. ‌ ಸಿದ್ದರಾಮಯ್ಯ ಕಾನೂನು ಹೋರಾಟದಲ್ಲಿ ಸಾಮಾಜಿಕ ಹೋರಾಟಗಾರ ಮತ್ತು ದೂರುದಾರ ಸ್ನೇಹಮಯಿ ಕೃಷ್ಣಗೆ ಹಿನ್ನೆಡೆಯಾಗಿದ್ದು, ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.

ಈ ಕುರಿತು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಾಯುಕ್ತ ಮತ್ತು ಇಡಿ ತನಿಖೆ ನಡೆಯುತ್ತಿದ್ದು, ಸದ್ಯಕ್ಕೆ ಸಿದ್ದರಾಮಯ್ಯನವರಿಗೂ ಸ್ವಲ್ಪ ರಿಲೀಫ್ ಸಿಕ್ಕಿದೆ. ಅಲ್ಲದೇ ಲೂಟಿಯಾಗಿರುವ ರಾಜ್ಯದ ಜನತೆಯ ದುಡ್ಡು ಮತ್ತೆ ಖಜಾನೆಗೆ ವಾಪಸ್ ಬರುತ್ತದೆ ಎಂಬ ವಿಶ್ವಾಸ ಇದೆ. ಹೈಕೋರ್ಟ್ ಆದೇಶವನ್ನು ನಾವು ಒಪ್ಪಲೇಬೇಕಾಗುತ್ತದೆ. ಸಿದ್ದರಾಮಯ್ಯ ವಿಚಾರದಲ್ಲಿ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ತಿಳಿಸಿದರು.

Legal fight against CM Siddaramaiah in connection with Muda scam R Ashoka

ಕಾಂಗ್ರೆಸ್‌ ಆಡಳಿತದ 20 ತಿಂಗಳಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಇದನ್ನು ಕಾಂಗ್ರೆಸ್ ಶಾಸಕರೇ ಒಪ್ಪಿಕೊಂಡಿದ್ದಾರೆ. ರಾಜ್ಯ ಸುಭದ್ರವಾಗಿರಬೇಕಾದರೆ ಕಾನೂನು ಸುವ್ಯವಸ್ಥೆ ಸರಿಯಾಗಿರಬೇಕು. ಆದರೆ ರಾಜ್ಯದಲ್ಲಿ ಬ್ಯಾಂಕ್ ದರೋಡೆಗಳು, ಗೋವುಗಳ ಕೆಚ್ಚಲು ಕೊಯ್ಯುವುದು, ಹೊಟ್ಟೆ ಸೀಳುವುದು, ಅತ್ಯಾಚಾರ ಪ್ರಕರಣ ಹೆಚ್ಚಾಗುತ್ತಿವೆ. ಕಾನೂನು ಸುವವ್ಯಸ್ಥೆ ಹದಗೆಟ್ಟು ಹೋಗಿದೆ. ಬೆಳಗಾವಿಯಲ್ಲಿ ಅಷ್ಟು ದೊಡ್ಡ ಅಧಿವೇಶನ ಮಾಡಲು ದುಡ್ಡು ಎಲ್ಲಿಂದ ಬಂತು? ಬ್ಯಾನರ್‌, ಬಸ್‌, ಊಟಕ್ಕೆ ದುಡ್ಡು ಎಲ್ಲಿಂದ? 60 ಪರ್ಸೆಂಟ್ ಕಮಿಷನ್ ಪಡೆದಿರುವುದನ್ನು ಸರ್ಕಾರ ಅಧಿವೇಶನಕ್ಕೆ ಬಳಕೆ ಮಾಡಿದೆ. ಆರು ತಿಂಗಳಿಗೊಮ್ಮೆ ಬಜೆಟ್ ಮಾಡಿ ಮತ್ತೆ ಬೆಲೆ ಏರಿಕೆ ಮಾಡುತ್ತಾರೆ ಎಂದು ದೂರಿದರು.

ಬಿಜೆಪಿ ಅವಧಿಯಲ್ಲಿ 25 ಸಾವಿರ ಕೋಟಿಯಷ್ಟು ಸಾಲ ಪಡೆಯಲು ಅವಕಾಶ ಇದ್ದರೂ ಜನರ ಮೇಲೆ ಹೊರೆ ಬರಬಾರದು ಎಂದು ಸಾಲ ತೆಗೆದುಕೊಂಡಿಲ್ಲ. ಆದರೆ ಇವರು ಸಾಲಗಾರರ ರಾಜ್ಯ ಮಾಡಲು ಹೊರಟಿದ್ದಾರೆ. ಹೀಗೆ ಮಾಡಿದರೆ ಕೇರಳದಂತೆ ಭಿಕ್ಷೆ ಬೇಡುವ ಸ್ಥಿತಿ ರಾಜ್ಯಕ್ಕೆ ಬರಲಿದೆ. ಸಿಎಂ ಸಿದ್ದರಾಮಯ್ಯ ನವೆಂಬರ್‌ನಲ್ಲಿ ಸಿಎಂ ಸ್ಥಾನ ಬಿಡಬೇಕಾಗಬಹುದು. ಹಾಗಾಗಿ ಅವರಿಗೂ ಆಸಕ್ತಿ ಇಲ್ಲ. ಆಡಳಿತ ಪಕ್ಷ ಅಧ್ವಾನವಾದರೆ ಅಭಿವೃದ್ಧಿ ಕುಂಠಿತವಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಹೇಳಿದರು.

ಪಕ್ಷದ ಆಂತರಿಕ ವಿಚಾರವನ್ನು ನಾಲ್ಕು ಗೋಡೆಗಳ ಮಧ್ಯೆ ಮಾತಾಡಬೇಕು. ನಾವೆಲ್ಲರೂ ಒಟ್ಟಿಗೆ ಹೋರಾಟ ಮಾಡಿದರೆ ಕಾಂಗ್ರೆಸ್ ಸರ್ಕಾರವನ್ನು ಬಗ್ಗು ಬಡಿಯಬಹುದಾಗಿತ್ತು. ಹದಿನೈದು-ಇಪ್ಪತ್ತು ದಿನಗಳಲ್ಲಿ ಇದಕ್ಕೆ ಅಂತಿಮ ತೀರ್ಮಾನವನ್ನು ಕೇಂದ್ರದ ನಾಯಕರು ಕೊಡುತ್ತಾರೆ. ಒಟ್ಟಾಗಿ ಹೋಗಬೇಕು ಎನ್ನುವುದು ನನ್ನ ಅಭಿಪ್ರಾಯ. ಕೆಲವು ಸಲ ಪ್ರಜಾಪ್ರಭುತ್ವದ ಮಾತಿನ ಸ್ವಾತಂತ್ರ್ಯದಲ್ಲಿ ಎಲ್ಲರೂ ಮಾತಾಡಲು ಶುರು ಮಾಡುತ್ತಾರೆ. ಪ್ರಾರಂಭದಲ್ಲೇ ಇದು ಕಡಿಮೆ ಆಗಿರುತ್ತಿದ್ದರೆ ಒಳ್ಳೆಯದಿತ್ತು. ಸರಿ ಪಡಿಸಿಕೊಂಡು ಹೋಗುವುದೇ ದೊಡ್ಡ ಗುಣ ಎಂದರು.

ಕಾಂಗ್ರೆಸ್ಸಿನ ಭ್ರಷ್ಟಾಚಾರ, ಹಗರಣಗಳು, ಲೂಟಿ, ಅಧಿಕಾರ ದುರುಪಯೋಗ, ಶೇ 60 ಕಮಿಷನ್, ಬಾಣಂತಿಯರ ಸಾವು, ಮೈಕ್ರೋ ಫೈನಾನ್ಸ್‍ನಿಂದ ಸಾವು ಸಂಭವಿಸುತ್ತಿದೆ. ಲವ್ ಜಿಹಾದ್, ಮುಡಾ, ವಾಲ್ಮೀಕಿ ನಿಗಮದ ಹಗರಣ ಸೇರಿ ಎಷ್ಟೊಂದು ಹಗರಣಗಳಲ್ಲಿ ಈ ಸರಕಾರ ಸಿಲುಕಿದೆ. ಇದು ಬಿಜೆಪಿಗೆ ಸುವರ್ಣಾವಕಾಶ ಎಂದು ನುಡಿದರು. ನಾವೆಲ್ಲರೂ ಜೊತೆಗೂಡಿ ಹೋರಾಡಿದರೆ ಕಾಂಗ್ರೆಸ್ಸನ್ನು ಬಗ್ಗು ಬಡಿಯಬಹುದು ಎಂದು ತಿಳಿಸಿದರು

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+