ಅಲ್ಪಮತಕ್ಕೆ ಕುಸಿದ ಎಚ್ಡಿಕೆ ಸರ್ಕಾರ, ವಿಧಾನಸಭೆ ಸಂಖ್ಯಾಬಲ?
ಬೆಂಗಳೂರು, ಜುಲೈ 08: ಕರ್ನಾಟಕದಲ್ಲಿ ಶಾಸಕರ ಸರಣಿ ರಾಜೀನಾಮೆಯಿಂದಾಗಿ ರಾಜಕೀಯ ಅಸ್ಥಿರತೆ ಉಂಟಾಗಿದ್ದು, ಇದರ ಕ್ಲೈಮ್ಯಾಕ್ಸ್ ಮುಂಬರುವ ಬಜೆಟ್ ಅಧಿವೇಶನದಲ್ಲಿ ಕಾಣಬಹುದಾಗಿದೆ. ಎಚ್ ಡಿ ಕುಮಾರಸ್ವಾಮಿ ಸರ್ಕಾರದ 22 ಸಚಿವರು ರಾಜೀನಾಮೆ ಸಲ್ಲಿಸಿದ್ದು, ಸರಣಿ ರಾಜೀನಾಮೆಯಿಂದಾಗಿ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ.
ಕರ್ನಾಟಕದ ಬಜೆಟ್ ಅಧಿವೇಶನದಲ್ಲಿ ಬಿಜೆಪಿ ಜೆಡಿಎಸ್ -ಕಾಂಗ್ರೆಸ್ ಪಕ್ಷದ ವಿರುದ್ಧ ಯಡಿಯೂರಪ್ಪ ಅವರು ಅವಿಶ್ವಾಸ ನಿರ್ಣಯ ಮಂಡನೆ ಮಾಡುವ ನಿರೀಕ್ಷೆಯಿದೆ. ಈ ಹಿಂದೆ ಕೂಡಾ ಇದೇ ರೀತಿ ಪ್ರಯತ್ನ ಪಟ್ಟು ವಿಫಲರಾಗಿದ್ದರು. ಆದರೆ, ಈ ಬಾರಿ ತಾನಾಗೇ ಈ ಅವಕಾಶ ಒಲಿದು ಬರುವ ಸೂಚನೆ ಸಿಕ್ಕಿದೆ
ಶಾಸಕರ ರಾಜೀನಾಮೆ, ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡನೆಯಾದರೆ ಏನು ಮಾಡಬೇಕು ಎಂಬೆಲ್ಲ ತಲೆನೋವನ್ನು ಸ್ಪೀಕರ್ ರಮೇಶ್ ಕುಮಾರ್ ನಿಭಾಯಿಸುತ್ತಿದ್ದಾರೆ.
ಸರ್ಕಾರ ಬೀಳಿಸಬೇಕಾದರೆ ಬಿಜೆಪಿ ಕನಿಷ್ಠ 14 ಶಾಸಕರನ್ನು ತನ್ನತ್ತ ಸೆಳೆದುಕೊಳ್ಳಬೇಕು. ನಂತರ ನಡೆಯುವ ಉಪ ಚುನಾವಣೆಯಲ್ಲಿ ಕನಿಷ್ಠ 8-10 ಸ್ಥಾನ ಗೆಲ್ಲಬೇಕಾಗಿದೆ.
ಈಗ ಸರ್ಕಾರ ಉಳಿಸಲು 22 ಸಚಿವರುಗಳು ರಾಜೀನಾಮೆ ನೀಡಿ, ಅತೃಪ್ತರಿಗೆ ಸ್ಥಾನ ಕಲ್ಪಿಸಲು ಯೋಚನೆ ಹಾಕಿಕೊಂಡಿದ್ದಾರೆ. ಸಿಎಂ, ಡಿಸಿಎಂ ಕೂಡಾ ಬದಲಾಗಬಹುದು. ಆದರೆ, ಪಕ್ಷೇತರ ಶಾಸಕ, ಸಚಿವ ನಾಗೇಶ್ ರಾಜೀನಾಮೆ ನೀಡಿ, ಬಿಜೆಪಿ ಬೆಂಬಲಕ್ಕೆ ನಿಂತಿದ್ದಾರೆ.

13 ಶಾಸಕರ ರಾಜೀನಾಮೆಗೂ ಮುನ್ನ(ಜುಲೈ 05)
13 ಶಾಸಕರ ರಾಜೀನಾಮೆಗೂ ಮುನ್ನ(ಜುಲೈ 05)
ಒಟ್ಟು ಸದಸ್ಯ ಬಲ : 224
ಕಾಂಗ್ರೆಸ್ + ಜೆಡಿಎಸ್ : 118
ಮ್ಯಾಜಿಕ್ ನಂಬರ್ : 113
ಬಿಜೆಪಿ : 105
ಬಿಎಸ್ ಪಿ: 1 (ಎನ್ ಮಹೇಶ್)
ಕಾಂಗ್ರೆಸ್ : 79
ಜೆಡಿಎಸ್ : 37
ಪಕ್ಷೇತರ : 2 (ಎಚ್ ನಾಗೇಶ್, ಶಂಕರ್)
***

ಜುಲೈ 06ರಂದು 13 ಮಂದಿ ಶಾಸಕರ ಸರಣಿ ರಾಜೀನಾಮೆ ಬಳಿಕ
ಜುಲೈ 06ರಂದು 13 ಮಂದಿ ಶಾಸಕರ ಸರಣಿ ರಾಜೀನಾಮೆ ಬಳಿಕ
ಒಟ್ಟು ಸದಸ್ಯ ಬಲ : 211
ಕಾಂಗ್ರೆಸ್ + ಜೆಡಿಎಸ್ : 105
ಮ್ಯಾಜಿಕ್ ನಂಬರ್ : 106
ಬಿಜೆಪಿ : 105
ಬಿಎಸ್ ಪಿ: 1
ಕಾಂಗ್ರೆಸ್ : 69
ಜೆಡಿಎಸ್ : 34
ಪಕ್ಷೇತರ : 2

ಜುಲೈ 08 ರಂದು ವಿಧಾನಸಭೆಯಲ್ಲಿ ಪಕ್ಷಗಳ ಬಲಾಬಲ
ಜುಲೈ 08 ರಂದು ವಿಧಾನಸಭೆಯಲ್ಲಿ ಪಕ್ಷಗಳ ಬಲಾಬಲ
ಒಟ್ಟು ಸದಸ್ಯ ಬಲ : 211
ಕಾಂಗ್ರೆಸ್ + ಜೆಡಿಎಸ್ : 104
ಮ್ಯಾಜಿಕ್ ನಂಬರ್ : 106
ಬಿಜೆಪಿ : 105+1(ಪಕ್ಷೇತರ ಎಚ್ ನಾಗೇಶ್)
ಬಿಎಸ್ ಪಿ: 1
ಕಾಂಗ್ರೆಸ್ : 69
ಜೆಡಿಎಸ್ : 34
ಪಕ್ಷೇತರ : 1 (ಕಾಂಗ್ರೆಸ್ ಸೇರಿರುವ ಶಂಕರ್)

ಅಲ್ಪಮತಕ್ಕೆ ಕುಸಿತದ ಮೈತ್ರಿ ಸರ್ಕಾರ
ಅಲ್ಪಮತಕ್ಕೆ ಕುಸಿತದ ಮೈತ್ರಿ ಸರ್ಕಾರ: ಕಾಂಗ್ರೆಸ್ ಹಾಗೂ ಜೆಡಿಎಸ್ ನ 13 ಶಾಸಕರ ರಾಜೀನಾಮೆ ನಂತರ ಮೈತ್ರಿ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಎಲ್ಲಾ 22 ಸಚಿವರ ಸರಣಿ ರಾಜೀನಾಮೆ ನಂತರ ಸರ್ಕಾರ ಉಳಿಯುವುದೋ ಅಥವಾ ಸರ್ಕಾರ ಪತನವಾಗುವುದೋ ಎಂಬ ಆತಂಕ ಮನೆ ಮಾಡಿದೆ. ಮೈತ್ರಿ ಸರ್ಕಾರವನ್ನು ರಕ್ಷಣೆ ಮಾಡಲು 'ಕಾಮರಾಜ ಮಾರ್ಗ' ಅನುಸರಿಸಿ ಎಲ್ಲಾ ಸಚಿವರು ರಾಜೀನಾಮೆ ಪಡೆದು, ಅತೃಪ್ತರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಮತ್ತೊಮ್ಮೆ ಸಂಪುಟ ವಿಸ್ತರಣೆಗೆ ಕುಮಾರಸ್ವಾಮಿ ಮುಂದಾಗಿದ್ದಾರೆ.











Click it and Unblock the Notifications