ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನ ಪರಿಷತ್ತಿಗೆ 7 ಅಭ್ಯರ್ಥಿಗಳು ಅವಿರೋಧ ಆಯ್ಕೆ ಖಚಿತ

|
Google Oneindia Kannada News

ಬೆಂಗಳೂರು, ಮೇ 27: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಏಳು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ನಾಮಪತ್ರ ಸಲ್ಲಿಸಲು ಮೇ 24 ಕೊನೆಯ ದಿನವಾಗಿತ್ತು. ಏಳು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಮೂರು ಪಕ್ಷಗಳಿಂದ ಏಳು ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಇದರಿಂದ ಚುನಾವಣೆ ನಡೆಸುವುದು ಅನುಮಾನವಾಗಿದೆ. ಅಲ್ಲದೆ, ಏಳೂ ನಾಮಪ್ರಗಳು ಕ್ರಮಬದ್ಧ ಇರುವುದರಿಂದ ಇಂದು ಅವಿರೋಧವಾಗಿ ಅಭ್ಯರ್ಥಿಗಳ ಆಯ್ಕೆಯನ್ನು ಘೋಷಿಸುವ ಸಾಧ್ಯತೆ ಇದೆ.

Karnataka Legislative Council: 7 Members Elected to Unanimously

ಅಭ್ಯರ್ಥಿಗಳ ವಿವರ:

ಬಿಜೆಪಿಯಿಂದ ಲಕ್ಷ್ಮಣ ಸವದಿ, ಛಲವಾದಿ ನಾರಾಯಣಸ್ವಾಮಿ, ಹೇಮಲತಾ ನಾಯಕ್ ಹಾಗೂ ಎಸ್. ಕೇಶವಪ್ರಸಾದ್ ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್‌ನಿಂದ ಎಂ. ನಾಗರಾಜು ಯಾದವ್ ಹಾಗೂ ಕೆ. ಅಬ್ದುಲ್ ಜಬ್ಬಾರ್ ಉಮೇದುವಾರಿಕೆ ಸಲ್ಲಿಸಿದ್ದರು. ಇನ್ನು ಜೆಡಿಎಸ್‌ನಿಂದ ಟಿ.ಎ. ಸರವಣ ಅಭ್ಯರ್ಥಿಯಾಗಿದ್ದರು. ಆಯಾ ಪಕ್ಷಗಳ ಶಾಸಕರ ಸಂಖ್ಯಾಬಲ ಅನುಸಾರ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

Recommended Video

KGF ಮತ್ತು ರಜತ್ ಕಟ್ಟಿಹಾಕೋಕೆ ರಾಜಸ್ತಾನ್ ರಣತಂತ್ರ:ಗೆದ್ದೋರು ಪೈನಲ್,ಸೋತೋರು ಮನೆಗೆ | Oneindia Kannada

English summary
It is almost certain that seven candidates will be unanimously elected in the Karnataka legislative council.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X