ಆಗಸ್ಟ್ 31ರಂದು ವಿಧಾನಪರಿಷತ್ ಉಪ ಚುನಾವಣೆ

Posted By: Gururaj
Subscribe to Oneindia Kannada

ಬೆಂಗಳೂರು, ಆ.09 : ವಿಧಾನಪರಿಷತ್ ಸದಸ್ಯೆ ವಿಮಲಾಗೌಡ ಅವರ ನಿಧನದಿಂದ ತೆರವಾಗಿರುವ ಒಂದು ಸ್ಥಾನಕ್ಕೆ ಆಗಸ್ಟ್ 31 ರಂದು ಚುನಾವಣೆ ನಡೆಯಲಿದೆ. ವಿಧಾನಸಭೆಯಿಂದ ಪರಿಷತ್ತಿಗೆ ಆಯ್ಕೆಯಾಗಿದ್ದ ವಿಮಲಾಗೌಡ ಅವರು ಏಪ್ರಿಲ್ ನಲ್ಲಿ ನಿಧನ ಹೊಂದಿದ್ದರು.

ಕೇಂದ್ರ ಚುನಾವಣಾ ಆಯೋಗ ಬುಧವಾರ ಚುನಾವಣೆ ವೇಳಾಪಟ್ಟಿ ಪ್ರಕಟಿಸಿದೆ. ಆಗಸ್ಟ್ 31ರಂದು ಚುನಾವಣೆ ನಡೆಯಲಿದ್ದು, ಅಂದು ಸಂಜೆಯೇ ಮತ ಎಣಿಕೆ ನಡೆಸಿ, ಫಲಿತಾಂಶ ಪ್ರಕಟಿಸಲಾಗುತ್ತದೆ.

Legislative council by-election on August 31, 2017

ಚುನಾವಣೆಗಾಗಿ ಆಗಸ್ಟ್ 14ರಿಂದ ನಾಮಪತ್ರ ಸಲ್ಲಿಸಬಹುದಾಗಿದೆ. ಆಗಸ್ಟ್ 24 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಆಗಸ್ಟ್ 31ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯ ತನಕ ಮತದಾನ ನಡೆಯಲಿದೆ.

ಉಸಿರಾಟ ಹಾಗೂ ಹೃದಯ ಸಂಬಂಧಿ ತೊಂದರೆಯಿಂದ ಬಳಲುತ್ತಿದ್ದ ವಿಮಲಾಗೌಡ ಅವರು ಏಪ್ರಿಲ್‌ನಲ್ಲಿ ನಿಧನ ಹೊಂದಿದ್ದರು. 2011ರಿಂದ 2014ರ ವರೆಗೂ ಉಪ ಸಭಾಪತಿಯಾಗಿ ವಿಮಲಾಗೌಡ ಜವಾಬ್ದಾರಿ ನಿರ್ವಹಿಸಿದ್ದರು. ಮೂರು ಬಾರಿ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Election commission of India announced shedule for Legislative council by election in Karnataka. There is one casual vacancy in council due to death of following sitting member Vimala Gowda. Election will be held on August 31, 2017.
Please Wait while comments are loading...