ಪರಿಷತ್ ಚುನಾವಣೆ; ಸೋಮವಾರ ಬಿಜೆಪಿ ಕೋರ್ ಕಮಿಟಿ ಸಭೆ
ಬೆಂಗಳೂರು, ಜೂನ್ 14 : ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಬಿಜೆಪಿ ಸೋಮವಾರ ಸಭೆ ನಡೆಸಲಿದೆ. ಪಕ್ಷ ಒಟ್ಟು 4 ಸ್ಥಾನದಲ್ಲಿ ಜಯಗಳಿಸಬಹುದಾಗಿದ್ದು, ಟಿಕೆಟ್‌ಗಾಗಿ ಆಕಾಂಕ್ಷಿಗಳು ಹೆಚ್ಚಿದ್ದಾರೆ.
Recommended Video
ಸಚಿವ ಕೆ. ಎಸ್. ಈಶ್ವರಪ್ಪ ಈ ಕುರಿತು ಮಾಹಿತಿ ನೀಡಿದ್ದಾರೆ. "ಸೋಮವಾರ ಸಂಜೆ 4ಗಂಟೆ ಕೋರ್ ಕಮಿಟಿ ಸಭೆ ನಡೆಯಲಿದೆ. ಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ" ಎಂದು ಹೇಳಿದ್ದಾರೆ.
"ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ ಪಕ್ಷಕ್ಕೆ ಬಂದು ಬಿಜೆಪಿ ಅಧಿಕಾರಕ್ಕೆ ಬರಲು ಸಹಾಯ ಮಾಡಿದವರಿಗೆ ಟಿಕೆಟ್ ನೀಡಬೇಕು. ಪಕ್ಷಕ್ಕಾಗಿ ದುಡಿದವರಿಗೂ ಆದ್ಯತೆ ನೀಡಬೇಕಾಗುತ್ತದೆ" ಎಂದು ಈಶ್ವರಪ್ಪ ಹೇಳಿದರು.

"ಅಭ್ಯರ್ಥಿಗಳ ಆಯ್ಕೆ ಪಕ್ಷಕ್ಕಾಗಿ ದುಡಿದವರಿಗೆ, ಸರ್ಕಾರ ಬರಲು ಸಹಕಾರ ನೀಡಿದವರಿಗೆ ಸಮಾಧಾನ ತರಲಿದೆ ಎಂದು ಅಂದುಕೊಂಡಿದ್ದೇವೆ. ಎಲ್ಲರಿಗೂ ಆದ್ಯತೆ ನೀಡಲಾಗುತ್ತದೆ ಮುಂದಿನ ಮೂರು ವರ್ಷವನ್ನು ಸರ್ಕಾರ ಪೂರ್ಣಗೊಳಿಸಲಿದೆ" ಎಂದು ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕ ವಿಧಾನಸಭೆಯಿಂದ ಒಟ್ಟು 7 ಸದಸ್ಯರನ್ನು ವಿಧಾನ ಪರಿಷತ್‌ಗೆ ಆಯ್ಕೆ ಮಾಡಲು ಜೂನ್ 29ರಂದು ಚುನಾವಣೆ ನಡೆಯಲಿದೆ. ವಿಧಾನಸಭೆಯಲ್ಲಿ ಬಿಜೆಪಿ 116 ಸದಸ್ಯ ಬಲವನ್ನು ಹೊಂದಿದ್ದು, ನಾಲ್ವರು ಸದಸ್ಯರು ಆಯ್ಕೆಯಾಗಲಿದ್ದಾರೆ.












Click it and Unblock the Notifications