ಬಹಿರಂಗ ಪ್ರಚಾರ 5 ಗಂಟೆಗೆ ಅಂತ್ಯ; ಸಮೀಕ್ಷೆ ಮಾಡುವಂತಿಲ್ಲ
ಬೆಂಗಳೂರು, ಅಕ್ಟೋಬರ್ 26 : ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಪ್ರಚಾರ ಕಾರ್ಯ ಸೋಮವಾರ ಸಂಜೆ ಅಂತ್ಯವಾಗಲಿದೆ. ಅಕ್ಟೋಬರ್ 28ರಂದು ಮತದಾನ ನಡೆಯಲಿದ್ದು, ನವೆಂಬರ್ 2ರಂದು ಫಲಿತಾಂಶ ಪ್ರಕಟವಾಗಲಿದೆ.
ಆಗ್ನೇಯ ಪದವೀಧರ ಕ್ಷೇತ್ರ, ಪಶ್ಚಿಮ ಪದವೀಧರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ಮೂರು ಪಕ್ಷಗಳು ಸಹ ಬಿರುಸಿನ ಪ್ರಚಾರ ನಡೆಸಿದ್ದು, ಸಂಜೆ 5 ಗಂಟೆಗೆ ಪ್ರಚಾರ ಕಾರ್ಯ ಅಂತ್ಯಗೊಳ್ಳಲಿದೆ.
ಅಕ್ಟೋಬರ್ 28ರಂದು ಬೆಳಗ್ಗೆ 8 ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಮತಗಟ್ಟೆಗೆ ಬರುವಾಗ ಪ್ರತಿಯೊಬ್ಬರೂ ಮಾಸ್ಕ್ ಧರಿಸಿ ಬರಬೇಕು ಎಂದು ಮತದಾನ ನಡೆಯುವ ಜಿಲ್ಲೆಗಳ ವ್ಯಾಪ್ತಿಯ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಬಹಿರಂಗ ಪ್ರಚಾರ ಅಂತ್ಯಗೊಳ್ಳುವುದರಿಂದ ಸಂಜೆಯಿಂದ ಮಾಧ್ಯಮಗಳು ಮತದಾರರನ್ನು ಓಲೈಕೆ ಮಾಡುವ ವರದಿಗಳನ್ನು ಪ್ರಸಾರ ಮಾಡುವಂತಿಲ್ಲ. ಅಭ್ಯರ್ಥಿಗಳ ಸಂದರ್ಶನ, ಸಮೀಕ್ಷೆಗಳನ್ನು ಮಾಡುವಂತಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.
ಮತದಾನ ನಡೆಯುವ ಜಿಲ್ಲೆಗಳಲ್ಲಿ ಶಾಂತಿ ಹಾಗೂ ಸುವ್ಯವಸ್ಥಿತ ಚುನಾವಣೆ ನಡೆಸುವ ಉದ್ದೇಶದಿಂದ ಆಯೋಗ ಅ. 27ರ ಸಂಜೆ 5 ಗಂಟೆಯಿಂದ ಅಕ್ಟೋಬರ್ 28ರ ಸಂಜೆ 5 ಗಂಟೆ ತನಕ ಎಲ್ಲಾ ಸ್ಕ್ಯಾನಿಂಗ್, ಝರಾಕ್ಸ್ ಹಾಗೂ ಕಂಪ್ಯೂಟರ್ ಸೆಂಟರ್‌ಗಳನ್ನು ಮುಚ್ಚುವಂತೆ ಆದೇಶ ನೀಡಿದೆ.
9 ದಾಖಲೆಗಳು: ಅಕ್ಟೋಬರ್ 28ರಂದು ಮತದಾನ ಮಾಡುವವರು ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ ಇತರೆ 9 ದಾಖಲೆಗಳನ್ನು ತೋರಿಸಿ ಮತದಾನ ಮಾಡಬಹುದಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.
ಆಧಾರ್ ಕಾರ್ಡ್, ವಾಹನ ಚಾಲನಾ ಪರವಾನಿಗೆ, ಆದಾಯ ತೆರಿಗೆ ಗುರುತಿನ ಚೀಟಿ, ಭಾರತೀಯ ಪಾಸ್‍ಪೋರ್ಟ್, ರಾಜ್ಯ, ಕೇಂದ್ರ ಸರಕಾರ ಹಾಗೂ ಸಾರ್ವಜನಿಕ ಉದ್ದಿಮೆಗಳು ಅಥವಾ ಇತರೆ ಖಾಸಗಿ ಔದ್ಯಮಿಕ ಸಂಸ್ಥೆಗಳು ಅವರ ಕೆಲಸಗಾರರಿಗೆ ನೀಡಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳನ್ನು ತೋರಿಸಬಹುದು.
ಲೋಕಸಭಾ ಸದಸ್ಯರು, ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರಿಗೆ ನೀಡಲಾದ ಅಧಿಕೃತ ಗುರುತಿನ ಚೀಟಿ, ಸಂಬಂಧಪಟ್ಟ ಶಿಕ್ಷಕರ ಕ್ಷೇತ್ರ, ಪದವೀಧರರ ಕ್ಷೇತ್ರಗಳ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮತದಾರರಿಗೆ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳು ನೀಡಲಾದ ಸೇವಾ ಗುರುತಿನ ಚೀಟಿಗಳು, ವಿಶ್ವ ವಿದ್ಯಾಲಯದಿಂದ ನೀಡಲಾದ ಪದವಿ, ಡಿಪ್ಲೊಮಾ ಪ್ರಮಾಣ ಪತ್ರದ ಮೂಲ ಪ್ರತಿ, ಅಂಗವಿಕಲರಿಗೆ ಸಕ್ಷಮ ಪ್ರಾಧಿಕಾರ ನೀಡಿರುವ ಭಾವಚಿತ್ರವಿರುವ ಪ್ರಮಾಣ ಪತ್ರದ ಮೂಲಪ್ರತಿಯನ್ನು ತೋರಿಸಿ ಮತದಾನ ಮಾಡಬಹುದಾಗಿದೆ.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications