ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಹಿರಂಗ ಪ್ರಚಾರ 5 ಗಂಟೆಗೆ ಅಂತ್ಯ; ಸಮೀಕ್ಷೆ ಮಾಡುವಂತಿಲ್ಲ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 26 : ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಪ್ರಚಾರ ಕಾರ್ಯ ಸೋಮವಾರ ಸಂಜೆ ಅಂತ್ಯವಾಗಲಿದೆ. ಅಕ್ಟೋಬರ್ 28ರಂದು ಮತದಾನ ನಡೆಯಲಿದ್ದು, ನವೆಂಬರ್ 2ರಂದು ಫಲಿತಾಂಶ ಪ್ರಕಟವಾಗಲಿದೆ.

ಆಗ್ನೇಯ ಪದವೀಧರ ಕ್ಷೇತ್ರ, ಪಶ್ಚಿಮ ಪದವೀಧರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ಮೂರು ಪಕ್ಷಗಳು ಸಹ ಬಿರುಸಿನ ಪ್ರಚಾರ ನಡೆಸಿದ್ದು, ಸಂಜೆ 5 ಗಂಟೆಗೆ ಪ್ರಚಾರ ಕಾರ್ಯ ಅಂತ್ಯಗೊಳ್ಳಲಿದೆ.

ವಿಧಾನ ಪರಿಷತ್ ಚುನಾವಣೆ; ನೋಟಾ ಆಯ್ಕೆ ಲಭ್ಯವಿಲ್ಲ ವಿಧಾನ ಪರಿಷತ್ ಚುನಾವಣೆ; ನೋಟಾ ಆಯ್ಕೆ ಲಭ್ಯವಿಲ್ಲ

ಅಕ್ಟೋಬರ್ 28ರಂದು ಬೆಳಗ್ಗೆ 8 ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಮತಗಟ್ಟೆಗೆ ಬರುವಾಗ ಪ್ರತಿಯೊಬ್ಬರೂ ಮಾಸ್ಕ್‌ ಧರಿಸಿ ಬರಬೇಕು ಎಂದು ಮತದಾನ ನಡೆಯುವ ಜಿಲ್ಲೆಗಳ ವ್ಯಾಪ್ತಿಯ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಪರಿಷತ್ ಚುನಾವಣೆ; 30 ಅಭ್ಯರ್ಥಿಗಳು ಕಣದಲ್ಲಿ, ಬಿಜೆಪಿಗೆ ಬಂಡಾಯದ ಬಿಸಿ ಪರಿಷತ್ ಚುನಾವಣೆ; 30 ಅಭ್ಯರ್ಥಿಗಳು ಕಣದಲ್ಲಿ, ಬಿಜೆಪಿಗೆ ಬಂಡಾಯದ ಬಿಸಿ

Legislative Council Election Campaign Ends Today

ಬಹಿರಂಗ ಪ್ರಚಾರ ಅಂತ್ಯಗೊಳ್ಳುವುದರಿಂದ ಸಂಜೆಯಿಂದ ಮಾಧ್ಯಮಗಳು ಮತದಾರರನ್ನು ಓಲೈಕೆ ಮಾಡುವ ವರದಿಗಳನ್ನು ಪ್ರಸಾರ ಮಾಡುವಂತಿಲ್ಲ. ಅಭ್ಯರ್ಥಿಗಳ ಸಂದರ್ಶನ, ಸಮೀಕ್ಷೆಗಳನ್ನು ಮಾಡುವಂತಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.

ಕರ್ನಾಟಕ; ವಿಧಾನ ಪರಿಷತ್ 4 ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಕರ್ನಾಟಕ; ವಿಧಾನ ಪರಿಷತ್ 4 ಕ್ಷೇತ್ರಗಳಿಗೆ ಚುನಾವಣೆ ಘೋಷಣೆ

ಮತದಾನ ನಡೆಯುವ ಜಿಲ್ಲೆಗಳಲ್ಲಿ ಶಾಂತಿ ಹಾಗೂ ಸುವ್ಯವಸ್ಥಿತ ಚುನಾವಣೆ ನಡೆಸುವ ಉದ್ದೇಶದಿಂದ ಆಯೋಗ ಅ. 27ರ ಸಂಜೆ 5 ಗಂಟೆಯಿಂದ ಅಕ್ಟೋಬರ್ 28ರ ಸಂಜೆ 5 ಗಂಟೆ ತನಕ ಎಲ್ಲಾ ಸ್ಕ್ಯಾನಿಂಗ್, ಝರಾಕ್ಸ್ ಹಾಗೂ ಕಂಪ್ಯೂಟರ್ ಸೆಂಟರ್‌ಗಳನ್ನು ಮುಚ್ಚುವಂತೆ ಆದೇಶ ನೀಡಿದೆ.

9 ದಾಖಲೆಗಳು: ಅಕ್ಟೋಬರ್ 28ರಂದು ಮತದಾನ ಮಾಡುವವರು ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ ಇತರೆ 9 ದಾಖಲೆಗಳನ್ನು ತೋರಿಸಿ ಮತದಾನ ಮಾಡಬಹುದಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಆಧಾರ್ ಕಾರ್ಡ್‌, ವಾಹನ ಚಾಲನಾ ಪರವಾನಿಗೆ, ಆದಾಯ ತೆರಿಗೆ ಗುರುತಿನ ಚೀಟಿ, ಭಾರತೀಯ ಪಾಸ್‍ಪೋರ್ಟ್‌, ರಾಜ್ಯ, ಕೇಂದ್ರ ಸರಕಾರ ಹಾಗೂ ಸಾರ್ವಜನಿಕ ಉದ್ದಿಮೆಗಳು ಅಥವಾ ಇತರೆ ಖಾಸಗಿ ಔದ್ಯಮಿಕ ಸಂಸ್ಥೆಗಳು ಅವರ ಕೆಲಸಗಾರರಿಗೆ ನೀಡಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳನ್ನು ತೋರಿಸಬಹುದು.

Recommended Video

ಎಲ್ಲರೂ BJPಗೆ ಸೇರೋದು ಪಕ್ಕ!! | Oneindia Kannada

ಲೋಕಸಭಾ ಸದಸ್ಯರು, ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರಿಗೆ ನೀಡಲಾದ ಅಧಿಕೃತ ಗುರುತಿನ ಚೀಟಿ, ಸಂಬಂಧಪಟ್ಟ ಶಿಕ್ಷಕರ ಕ್ಷೇತ್ರ, ಪದವೀಧರರ ಕ್ಷೇತ್ರಗಳ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮತದಾರರಿಗೆ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳು ನೀಡಲಾದ ಸೇವಾ ಗುರುತಿನ ಚೀಟಿಗಳು, ವಿಶ್ವ ವಿದ್ಯಾಲಯದಿಂದ ನೀಡಲಾದ ಪದವಿ, ಡಿಪ್ಲೊಮಾ ಪ್ರಮಾಣ ಪತ್ರದ ಮೂಲ ಪ್ರತಿ, ಅಂಗವಿಕಲರಿಗೆ ಸಕ್ಷಮ ಪ್ರಾಧಿಕಾರ ನೀಡಿರುವ ಭಾವಚಿತ್ರವಿರುವ ಪ್ರಮಾಣ ಪತ್ರದ ಮೂಲಪ್ರತಿಯನ್ನು ತೋರಿಸಿ ಮತದಾನ ಮಾಡಬಹುದಾಗಿದೆ.

English summary
Campaigning for 4 legislative council seat elections, scheduled for October 28 comes to an end at 5 pm today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X