65 ವರ್ಷ ಮೇಲ್ಪಟ್ಟವರು ಪರಿಷತ್ ಚುನಾವಣೆಗೆ ಸ್ಪರ್ಧಿಸಬಹುದು

ಬೆಂಗಳೂರು, ಜೂನ್ 14 : ವಿಧಾನ ಪರಿಷತ್ ಚುನಾವಣೆಗೆ 65 ವರ್ಷ ಮೇಲ್ಪಟ್ಟವರು ಸ್ಪರ್ಧಿಸಬಹುದು ಎಂದು ಸ್ಪಷ್ಟಪಡಿಸಲಾಗಿದೆ. ಕೊರೊನಾ ವೈರಸ್ ಸೋಂಕಿನ ಹಿನ್ನಲೆಯಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಸರ್ಕಾರ ಪ್ರಕಟಿಸಿದೆ.

ಒಟ್ಟು 7 ಸದಸ್ಯರನ್ನು ಕರ್ನಾಟಕ ವಿಧಾನಸಭೆಯಿಂದ ಪರಿಷತ್‌ಗೆ ಆಯ್ಕೆ ಮಾಡಲು ಜೂನ್ 29ರಂದು ಚುನಾವಣೆ ನಡೆಯಲಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯ ಭಾಸ್ಕರ್ ಚುನಾವಣೆ ವೇಳೆ ಅನುಸರಿಸಬೇಕಾದ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.

ಪರಿಷತ್ ಚುನಾವಣಾ ಪ್ರಕ್ರಿಯೆಯಲ್ಲಿ 65 ವರ್ಷದ ದಾಟಿದ ಅಭ್ಯರ್ಥಿ, ಸಿಬ್ಬಂದಿ ಮತ್ತು ಮತದಾರರು ಪಾಲ್ಗೊಳ್ಳಬಹುದು ಎಂದು ಸ್ಪಷ್ಟಪಡಿಸಲಾಗಿದೆ. ಕೊರೊನಾ ವೈರಸ್ ಸೋಂಕಿನ ಹಿನ್ನಲೆಯಲ್ಲಿ 60 ವರ್ಷ ಮೇಲ್ಪಟ್ಟವರ ಸಂಚಾರಕ್ಕೆ ನಿರ್ಬಂಧವಿದೆ.

Legislative Council

ಒಂದು ವೇಳೆ ಯಾವುದೇ ಶಾಸಕರು ಕ್ವಾರಂಟೈನ್‌ನಲ್ಲಿದ್ದರೆ ಜಿಲ್ಲಾಧಿಕಾರಿಗಳು ಮಾಹಿತಿ ನೀಡಬೇಕು. ಅವರ ಪ್ರಯಾಣದ ವೇಳಾಪಟ್ಟಿ ಕೊಡಬೇಕು. ಅಭ್ಯರ್ಥಿಗಳು, ಮತದಾರರಿಗೆ ಪ್ರಯಾಣದ ವ್ಯವಸ್ಥೆ ಮಾಡಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಚುನಾವಣಾಧಿಕಾರಿಗಳಿಂದ ಅನುಮತಿ ಪಡೆದವರು ಕಂಟ್ಮೈನ್‌ಮೆಂಟ್ ಝೋನ್‌ಗಳಲ್ಲಿ ಇದ್ದರೆ ಚುನಾವಣೆ ಉದ್ದೇಶಕ್ಕೆ ಮಾತ್ರ ಸಂಚಾರ ನಡೆಸಲು ಅನುಮತಿ ನೀಡಬೇಕು ಎಂದು ಮಾರ್ಗಸೂಚಿಯಲ್ಲಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+