ಸಿಎಂ ಎದುರೇ ಮಂಡ್ಯ ಕಾಂಗ್ರೆಸ್ ಬಣ ರಾಜಕೀಯ ಸ್ಫೋಟ

ಮಂಡ್ಯ, ಡಿಸೆಂಬರ್, 25: ಮಂಡ್ಯದ ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೆ ಸಾಬೀತಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರೇ ಬಣ ರಾಜಕೀಯದ ಕಿಚ್ಚು ಬಹಿರಂಗವಾಗಿ ಹೊತ್ತಿ ಉರಿದಿದೆ.

ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕಿನಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಬಹಿರಂಗ ಸಭೆಯಲ್ಲಿ ಜಿಲ್ಲಾಧ್ಯಕ್ಷ ಎಂ.ಎಸ್. ಆತ್ಮಾನಂದ ಅವರು ಶ್ರೀರಂಗಪಟ್ಟಣ ಕ್ಷೇತ್ರದ ಕೆಪಿಸಿಸಿ ಸದಸ್ಯ ರವೀಂದ್ರ ಶ್ರೀಕಂಠಯ್ಯ ಅವರಿಗೆ ಸ್ವಾಗತ ಕೋರಲಿಲ್ಲ ಎಂದು ರವೀಂದ್ರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದರು.[ಪರಿಷತ್ ಚುನಾವಣೆ : ಕಣದಲ್ಲಿರುವ ಅಭ್ಯರ್ಥಿಗಳ ಪಟ್ಟಿ]

mandya

ಈ ಸಂದರ್ಭ ರವೀಂದ್ರ ಶ್ರೀಕಂಠಯ್ಯ ಅವರು ಎದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರು ಬಂದು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಮೇಲುಕೋಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಮಂಜುನಾಥ್ ಕೂಡ ರವೀಂದ್ರ ಶ್ರೀಕಂಠಯ್ಯ ಅವರ ಬೆಂಬಲಕ್ಕೆ ನಿಂತರು.

ಈ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಡಿ.ಕೆ.ಶಿವಕುಮಾರ್, ಶಾಸಕ ನರೇಂದ್ರಸ್ವಾಮಿ, ಅಭ್ಯರ್ಥಿ ಎಲ್.ಆರ್. ಶಿವರಾಮೇಗೌಡ ಅವರು ಮಧ್ಯೆ ಪ್ರವೇಶಿಸಿ ಸಮಾಧಾನಪಡಿಸಿದರು.[ಡಿಸೆಂಬರ್ 27ರ ವಿಧಾನಪರಿಷತ್ ಚುನಾವಣೆ ಬಗ್ಗೆ ತಿಳಿಯಿರಿ]

ನಂತರ ಚುನಾವಣೆಯ ಉಸ್ತುವಾರಿ ಹೊತ್ತಿರುವ ಜಿಲ್ಲಾ ಉಸ್ತುವಾರಿ ಸಚಿವ ಅಂಬರೀಶ್ ಅವರು ಸಹ ತಮ್ಮ ಭಾಷಣ ಆರಂಭಿಸುವ ಮುನ್ನ ಎಂ.ಎಸ್. ಆತ್ಮಾನಂದ ಅವರ ಪರವಾಗಿ ರವೀಂದ್ರ ಶ್ರೀಕಂಠಯ್ಯ ಅವರಲ್ಲಿ ಕ್ಷಮೆ ಕೋರುವುದಾಗಿ ತಿಳಿಸಿದರು.

ಆದರೆ, ಆತ್ಮಾನಂದ ಅವರು ತಮ್ಮ ಸ್ವಾಗತ ಭಾಷಣದಲ್ಲಿ ಎಲ್ಲ ಕೆಪಿಸಿಸಿ ಸದಸ್ಯರಿಗೂ ಸ್ವಾಗತ ಕೋರುವುದಾಗಿ ತಿಳಿಸಿದರಾದರೂ, ಇದನ್ನು ಕೇಳಿಸಿಕೊಳ್ಳದ ರವೀಂದ್ರ ಶ್ರೀಕಂಠಯ್ಯ ಹಾಗೂ ಅವರ ಬೆಂಬಲಿಗರು ಈರೀತಿ ಅಸಭ್ಯವಾಗಿ ವರ್ತಿಸಿದ್ದು ಕಾಂಗ್ರೆಸ್‍ನಲ್ಲಿ ಎರಡು ಬಣಗಳು ಇವೆ ಎಂಬುದನ್ನು ಬಹಿರಂಗಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+