ವಿಧಾನಪರಿಷತ್ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮ
ಬೆಂಗಳೂರು, ಡಿಸೆಂಬರ್ 02 : ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿದೆ. ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಒಪ್ಪಿಗೆ ಪಡೆದು ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬುಧವಾರ ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಸಭೆಯಲ್ಲಿ ಪಾಲ್ಗೊಂಡಿದ್ದರು. [ವಿಧಾನಪರಿಷತ್ ಚುನಾವಣೆ ಬಗ್ಗೆ ಓದಿ]

ಸಭೆಯ ಬಳಿಕ ಮಾತನಾಡಿದ ಸಿದ್ದರಾಮಯ್ಯ ಅವರು, 'ಪರಿಷತ್ ಚುನಾವಣೆಗೆ ಹೆಚ್ಚಿನ ಆಕಾಂಕ್ಷಿಗಳಿದ್ದಾರೆ. ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ' ಎಂದು ಸ್ಪಷ್ಟಪಡಿಸಿದರು. [ಪರಿಷತ್ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ]
'ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕಳಿಸುತ್ತೇವೆ. ಅವರ ಒಪ್ಪಿಗೆ ಪಡೆದ ಬಳಿಕ ಬಿಡುಗಡೆ ಮಾಡಲಾಗುತ್ತದೆ' ಎಂದು ತಿಳಿಸಿದರು. [ಪರಿಷತ್ ಚುನಾವಣೆ ವೇಳಾಪಟ್ಟಿ]
ಅಧಿಸೂಚನೆ ಪ್ರಕಟಗೊಂಡಿದೆ : ಶಿಕ್ಷಕರ, ಪದವೀಧರರ ಕ್ಷೇತ್ರಗಳು ಹಾಗೂ ಸ್ಥಳೀಯ ಸಂಸ್ಥೆಗಳಿಂದ 25 ವಿಧಾನಪರಿಷತ್ ಸದಸ್ಯರ ಆಯ್ಕೆಗೆ ಡಿಸೆಂಬರ್ 27ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 30ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
ಬಿಜೆಪಿ ಈಗಾಗಲೇ 12 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಜೆಡಿಎಸ್ ಇನ್ನೂ ಪಟ್ಟಿಯನ್ನು ಅಂತಿಮಗೊಳಿಸಿಲ್ಲ. ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 9.












Click it and Unblock the Notifications