ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನ ಪರಿಷತ್ ಚುನಾವಣೆ; ಮತ ಎಣಿಕೆ ದಿನಾಂಕ ಮುಂದೂಡಿಕೆ

|
Google Oneindia Kannada News

ಬೆಂಗಳೂರು, ನವೆಂಬರ್ 01 : ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆಯನ್ನು ಚುನಾವಣಾ ಆಯೋಗ ಮುಂದೂಡಿ ಆದೇಶ ಹೊರಡಿಸಿದೆ. ಅಕ್ಟೋಬರ್ 28ರಂದು ನಡೆದಿದ್ದ ಚುನಾವಣೆ ಮತ ಎಣಿಕೆ ನವೆಂಬರ್ 10ರಂದು ನಡೆಯಲಿದೆ.

ಶನಿವಾರ ಚುನಾವಣಾ ಆಯೋಗ ಈ ಕುರಿತು ಆದೇಶ ಹೊರಡಿಸಿದೆ. ಕಾಂಗ್ರೆಸ್ ಪಕ್ಷ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿರುವ ಆಯೋಗ ನವೆಂಬರ್ 2ರ ಬದಲು ನವೆಂಬರ್ 10ರಂದು ಮತ ಎಣಿಕೆ ನಡೆಸಲಾಗುತ್ತದೆ ಎಂದು ಹೇಳಿದೆ.

ಪರಿಷತ್ ಚುನಾವಣೆ; ಮತದಾನ ಮಾಡಿದ ಕೋವಿಡ್ ಸೋಂಕಿತರು ಪರಿಷತ್ ಚುನಾವಣೆ; ಮತದಾನ ಮಾಡಿದ ಕೋವಿಡ್ ಸೋಂಕಿತರು

ಆಗ್ನೇಯ ಪದವೀಧರ ಕ್ಷೇತ್ರ, ಪಶ್ಚಿಮ ಪದವೀಧರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಅಕ್ಟೋಬರ್ 28ರಂದು ಚುನಾವಣೆ ನಡೆದಿತ್ತು. ಮೊದಲು ಪ್ರಕಟಿಸಿದ ವೇಳಾಪಟ್ಟಿಯಂತೆ ನವೆಂಬರ್ 2ರಂದು ಮತ ಎಣಿಕೆ ನಿಗದಿಯಾಗಿತ್ತು.

ಚುನಾವಣೆ; ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ. 73.32ರಷ್ಟು ಮತದಾನ ಚುನಾವಣೆ; ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ. 73.32ರಷ್ಟು ಮತದಾನ

Legislative Council

ನವೆಂಬರ್ 3ರಂದು ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಆದ್ದರಿಂದ, ಮತ ಎಣಿಕೆ ದಿನಾಂಕವನ್ನು ಮುಂದೂಡಬೇಕು ಎಂದು ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ಪತ್ರ ಬರೆದಿತ್ತು.

ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಶೇ 62ರಷ್ಟು ಮತದಾನ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಶೇ 62ರಷ್ಟು ಮತದಾನ

ಮಾನ್ಯತೆ ಪಡೆದ ರಾಷ್ಟ್ರೀಯ ಪಕ್ಷದ ಮನವಿ ಹಿನ್ನಲೆಯಲ್ಲಿ ಚುನಾವಣಾ ಆಯೋಗ ನವೆಂಬರ್ 2ರ ಬದಲು 10ರಂದು ಮತ ಎಣಿಕೆ ಮಾಡಲು ತೀರ್ಮಾನಿಸಿದೆ. ಆರ್. ಆರ್. ನಗರ ಮತ್ತು ಶಿರಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಸಹ ನವೆಂಬರ್ 10ರಂದೇ ಪ್ರಕಟವಾಗುತ್ತಿದೆ.

English summary
Election commission postponed counting of 4 seat legislative council seat election from November 2nd to 10. Voting held on October 28, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X