ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನಪರಿಷತ್ ಚುನಾವಣೆ : ಕಾಂಗ್ರೆಸ್‌ ಟಿಕೆಟ್‌ಗಾಗಿ ಲಾಬಿ!

By Gururaj
|
Google Oneindia Kannada News

ವಿಜಯಪುರ, ಆಗಸ್ಟ್ 16 : ಬಾಗಲಕೋಟೆ-ವಿಜಯಪುರ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಸದಸ್ಯರ ಆಯ್ಕೆಗೆ ಸೆ.6ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್‌ ಟಿಕೆಟ್‌ಗಾಗಿ ಭಾರೀ ಪೈಪೋಟಿ ನಡೆಯುತ್ತಿದ್ದು, ಯಾರು ಅಭ್ಯರ್ಥಿ? ಎಂಬುದು ಇನ್ನೂ ಅಂತಿಮವಾಗಿಲ್ಲ.

ಬಸನಗೌಡ ಪಾಟೀಲ್ ಯತ್ನಾಳ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ನಾಮಪತ್ರವನ್ನು ಸಲ್ಲಿಸಲು ಆಗಸ್ಟ್ 20 ಕೊನೆಯ ದಿನವಾಗಿದೆ. ಕಾಂಗ್ರೆಸ್‌ ಟಿಕೆಟ್‌ಗಾಗಿ ಮೂವರು ಆಕಾಂಕ್ಷಿಗಳ ನಡುವೆ ಪೈಪೋಟಿ ನಡೆಯುತ್ತಿದೆ.

ಯತ್ನಾಳ ರಾಜಿನಾಮೆ ನೀಡಿದ್ದ ಸ್ಥಾನಕ್ಕೆ ಜಿದ್ದಾಜಿದ್ದಿ: ಸೆ.6ಕ್ಕೆ ಮತದಾನಯತ್ನಾಳ ರಾಜಿನಾಮೆ ನೀಡಿದ್ದ ಸ್ಥಾನಕ್ಕೆ ಜಿದ್ದಾಜಿದ್ದಿ: ಸೆ.6ಕ್ಕೆ ಮತದಾನ

Legislative Council election : Lobbying for Congress ticket hots up in Vijayapura

ಮಾಜಿ ಸಚಿವ ಎಂ.ಬಿ.ಪಾಟೀಲ್ ಸಹೋದರ ಸುನಿಲ್ ಗೌಡ ಬಿ.ಪಾಟೀಲ, ಮಾಜಿ ಶಾಸಕ ಶರಣಪ್ಪ ಸುಣಗಾರ ಮತ್ತು ಮಲ್ಲಿಕಾರ್ಜುನ ಲೋಣಿ ಅವರ ನಡುವೆ ಪ್ರಬಲ ಪೈಪೋಟಿ ನಡೆಯುತ್ತಿದೆ. ಸಿ.ಎಸ್.ನಾಡಗೌಡ ಅವರ ಹೆಸರು ಕೇಳಿಬರುತ್ತಿದೆ.

ಎಂ.ಬಿ.ಪಾಟೀಲ್ ಅವರು ಬಾಗಲಕೋಟೆ-ವಿಜಯಪುರ ಜಿಲ್ಲೆಯಲ್ಲಿ ಒಂದು ಸುತ್ತಿನ ಪ್ರಚಾರ ನಡೆಸಿದ್ದಾರೆ, ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದಾರೆ. ಸ್ಥಳೀಯ ಸಂಘ ಸಂಸ್ಥೆಗಳಲ್ಲಿಯೂ ಉತ್ತಮ ಬೆಂಬಲವನ್ನು ಅವರು ಹೊಂದಿದ್ದಾರೆ.

ಆರೋಗ್ಯ ಸಚಿವ ಶಿವಾನಂದ ಎಸ್.ಪಾಟೀಲ್ ಮತ್ತು ಇಂಡಿ ಶಾಸಕ ಯಶವಂತರಾಯಗೌಡ ವಿ.ಪಾಟೀಲ್ ಅವರು ಸುನಿಲ್ ಗೌಡ. ಬಿ.ಪಾಟೀಲ್ ಅವರಿಗೆ ಟಿಕೆಟ್ ನೀಡಲು ವಿರೋಧ ವ್ಯಕ್ತಪಡಿಸುವ ಸಾಧ್ಯತೆ ಇದೆ. ಇಂದು ಸಂಜೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಾಗುವ ನಿರೀಕ್ಷೆ ಇದೆ.

English summary
Lobbying for tickets in the Congress is getting intense in Vijayapura district for the Legislative Council election. Election will be held on September 6, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X