ಪರಿಷತ್ ಚುನಾವಣೆ; ನೋಟಾ ಚಲಾವಣೆಗೆ ಅವಕಾಶವಿಲ್ಲ
ಮಡಿಕೇರಿ, ಮೇ 21: ಕರ್ನಾಟಕ ವಿಧಾನ ಪರಿಷತ್‌ನ 6 ಸ್ಥಾನಗಳಿಗೆ ಜೂನ್ 3ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಕೆ, ವಾಪಸ್ ಪಡೆಯುವ ಕಾರ್ಯ ಮುಕ್ತಾಯಗೊಂಡಿದ್ದು, ಒಟ್ಟು ಅಭ್ಯರ್ಥಿಗಳು, ಮತದಾರರ ಅಂತಿಮ ಚಿತ್ರಣ ಲಭ್ಯವಾಗಿದೆ.
ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರರ ಕ್ಷೇತ್ರಗಳ ಚುನಾವಣಾ ಕಣ ಅಂತಿಮಗೊಂಡಿದೆ. ಮತದಾನ ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4ಗಂಟೆಯವರೆಗೆ ನಡೆಯಲಿದೆ. ಜೂನ್ 6ರಂದು ಮತ ಎಣಿಕೆ ನಡೆಯಲಿದೆ.

ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರರ ಕ್ಷೇತ್ರಗಳಲ್ಲಿ ನಾಮಪತ್ರ ವಾಪಸ್ ಪಡೆಯಲು ಮೇ 20 ಅಂತಿಮ ದಿನವಾಗಿತ್ತು. ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ 2, ನೈಋತ್ಯ ಶಿಕ್ಷಕರ ಕ್ಷೇತ್ರದಿಂದ 1 ಹಾಗೂ ನೈಋತ್ಯ ಪದವೀಧರರ ಕ್ಷೇತ್ರದಿಂದ ಒಬ್ಬ ಅಭ್ಯರ್ಥಿ ನಾಮಪತ್ರಗಳನ್ನು ಹಿಂಪಡೆದಿದ್ದಾರೆ.
ಚುನಾವಣಾ ಅಂತಿಮ ಕಣ: ಅಂತಿಮವಾಗಿ ಕಣದಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳು, ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ 8 ಅಭ್ಯರ್ಥಿಗಳು ಹಾಗೂ ನೈಋತ್ಯ ಪದವೀಧರರ ಕ್ಷೇತ್ರದಲ್ಲಿ 10 ಅಭ್ಯರ್ಥಿಗಳಿದ್ದಾರೆ.
ಚುನಾವಣಾ ಆಯೋಗದ ಸೂಚನೆಯಂತೆ ಮತದಾರನ ಬೆರಳಿಗೆ ಅಳಿಸಲಾಗದ ಶಾಯಿಯನ್ನು ನೈಋತ್ಯ ಪದವೀಧರರ ಕ್ಷೇತ್ರಕ್ಕೆ ಬಲಗೈ ತೋರುಬೆರಳು, ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಬಲಗೈ ಮಧ್ಯದ ಬೆರಳು ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಬಲಗೈ ತೋರು ಬೆರಳಿಗೆ ಹಾಕಲಾಗುತ್ತದೆ. ಈ ಚುನಾವಣೆಯಲ್ಲಿ ನೋಟಾ ಆಯ್ಕೆಯು ಇರುವುದಿಲ್ಲ.
ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 21,549 ಮತದಾರರು ಇದ್ದಾರೆ. ಅದರಲ್ಲಿ 11,998 ಪುರುಷ ಮತದಾರರು, 9,550 ಮಹಿಳಾ ಮತದಾರರು ಮತ್ತು ಒಬ್ಬರು ಇತರೆ ಮತದಾರರು. ಒಟ್ಟು 44 ಮತಗಟ್ಟೆಗಳಿವೆ. ಚಾಮರಾಜನಗರ ಜಿಲ್ಲೆಯಲ್ಲಿ ಒಟ್ಟು ಮತಗಟ್ಟೆ 5, ಒಟ್ಟು ಮತದಾರರು 2181. ಹಾಸನ ಜಿಲ್ಲೆಯಲ್ಲಿ ಒಟ್ಟು ಮತಗಟ್ಟೆ 10. ಒಟ್ಟು ಮತದಾರರು 3526. ಮಂಡ್ಯ ಜಿಲ್ಲೆಯಲ್ಲಿ ಒಟ್ಟು 9 ಮತಗಟ್ಟೆಗಳಿದ್ದು, ಒಟ್ಟು 5403 ಮತದಾರರು ಇದ್ದಾರೆ. ಮೈಸೂರು ಜಿಲ್ಲೆಯಲ್ಲಿ ಒಟ್ಟು 20 ಮತಗಟ್ಟೆಗಳಿದ್ದು, ಒಟ್ಟು 10439 ಮತದಾರರು ಇದ್ದಾರೆ.
ಇನ್ನು ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ (ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಕೊಡಗು, ಶಿವಮೊಗ್ಗ ಮತ್ತು ಉಡುಪಿ) ಒಟ್ಟು 79 ಮತಗಟ್ಟೆಗಳಿದ್ದು, 23402 ಮತದಾರರು ಇದ್ದಾರೆ. ಅದರಲ್ಲಿ 10,487 ಪುರುಷರು ಮತ್ತು 12,915 ಮಹಿಳಾ ಮತದಾರರು.
ನೈಋತ್ಯ ಪದವೀಧರರ ಕ್ಷೇತ್ರದಲ್ಲಿ (ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಕೊಡಗು, ಶಿವಮೊಗ್ಗ ಮತ್ತು ಉಡುಪಿ) ಒಟ್ಟು 108 ಮತಗಟ್ಟೆಗಳಿದ್ದು, ಒಟ್ಟು 85,089 ಮತದಾರರು ಇದ್ದಾರೆ. ಅದರಲ್ಲಿ 43,720 ಪುರುಷ ಮತದಾರರು, 41,368 ಮಹಿಳಾ ಮತದಾರರು ಹಾಗೂ 1 ಇತರೆ ಮತದಾರರು ಇದ್ದಾರೆ.
ಚುನಾವಣಾ ಮಾದರಿ ನೀತಿ ಸಂಹಿತೆ ಈಗಾಗಲೇ ಜಾರಿಯಲ್ಲಿದೆ. ಮತದಾರರಿಗೆ ಯಾವುದೇ ವಿಧವಾದ ಆಮಿಷಗಳನ್ನು ಒಡ್ಡುವುದು ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಲಿದ್ದು, ಆಮಿಷ ಒಡ್ಡುತ್ತಿರುವ ಬಗ್ಗೆ ದೂರನ್ನು ಸಂಬಂಧಿಸಿದ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಿಗೆ ಮತ್ತು ಚುನಾವಣಾ ವೀಕ್ಷಕರಿಗೆ ಸಲ್ಲಿಸಬಹುದು.
ಮೂರು ಕ್ಷೇತ್ರಗಳಿಗೆ ಚುನಾವಣಾ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರರ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು https://rcmysore.karnataka.gov.in ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
-
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications