ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪರಿಷತ್; ಜಿಲ್ಲಾ, ತಾಲೂಕು ಪಂಚಾಯಿತಿ ಸದಸ್ಯರಿಗೆ ಮತದಾನದ ಹಕ್ಕಿಲ್ಲ

|
Google Oneindia Kannada News

ಬೆಂಗಳೂರು, ನವೆಂಬರ್ 14; ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ಘೋಷಣೆಯಾಗಿದೆ. 25 ಸ್ಥಾನಗಳಿಗೆ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 14ರಂದು ಮತ ಎಣಿಕೆ ನಡೆಯಲಿದೆ.

ಚುನಾವಣೆಗೆ ಈಗಾಗಲೇ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ನವೆಂಬರ್ 16ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. ನವೆಂಬರ್ 23ರ ತನಕ (ಸಾರ್ವಜನಿಕ ರಜೆ ದಿನಗಳನ್ನು ಹೊರತುಪಡಿಸಿ ) ಬೆಳಗ್ಗೆ 11 ರಿಂದ ಮಧ್ಯಾಹ್ನ 3ರ ವರೆಗೆ ನಾಮ ಪತ್ರಗಳನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ವೀಕರಿಸಲಾಗುತ್ತದೆ.

ವಿಧಾನ ಪರಿಷತ್ ಚುನಾವಣೆ; ಸ್ಪರ್ಧಿಸಲು ಅರ್ಹತೆಗಳು ವಿಧಾನ ಪರಿಷತ್ ಚುನಾವಣೆ; ಸ್ಪರ್ಧಿಸಲು ಅರ್ಹತೆಗಳು

ನವೆಂಬರ್ 24ರಂದು ನಾಮಪತ್ರಗಳ ಪರಿಶೀಲನೆ ನಡೆಸಲಾಗುತ್ತದೆ. ನವೆಂಬರ್ 26ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ಡಿಸೆಂಬರ್ 10ರಂದು ಬೆಳಗ್ಗೆ 8ರಿಂದ ಸಂಜೆ 4 ಯವರೆಗೆ ಮತದಾನ ನಡೆಯಲಿದೆ.

ಪರಿಷತ್ ಚುನಾವಣೆ; ಜಾರಕಿಹೊಳಿ ಕುಟುಂಬಕ್ಕೆ ಟಿಕೆಟ್? ಪರಿಷತ್ ಚುನಾವಣೆ; ಜಾರಕಿಹೊಳಿ ಕುಟುಂಬಕ್ಕೆ ಟಿಕೆಟ್?

 Legislative Council Election No Vote For Zilla And Taluk Panchayat Members

ಡಿಸೆಂಬರ್ 14ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು ಡಿಸೆಂಬರ್ 16ರಂದು ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ. 98,846 ಮತದಾರರು ಚುನಾವಣೆಯಲ್ಲಿ ಮತದಾನ ಮಾಡುವ ಹಕ್ಕನ್ನು ಹೊಂದಿದ್ದಾರೆ.

ಪರಿಷತ್ ಚುನಾವಣೆ; ದೇವೇಗೌಡರ ಮೊಮ್ಮಗ ಕಣಕ್ಕೆ? ಪರಿಷತ್ ಚುನಾವಣೆ; ದೇವೇಗೌಡರ ಮೊಮ್ಮಗ ಕಣಕ್ಕೆ?

ಲೋಕಸಭಾ, ರಾಜ್ಯಸಭಾ, ವಿಧಾನಸಭಾ, ವಿಧಾನ ಪರಿಷತ್, ಗ್ರಾಮ ಪಂಚಾಯತ್ ಸದಸ್ಯರು ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾನದ ಹಕ್ಕು ಹೊಂದಿರುತ್ತಾರೆ. ಆದರೆ ಈ ಬಾರಿ ಕೆಲವು ಸ್ಥಳೀಯ ಸಂಸ್ಥೆಗಳ ಸದಸ್ಯರು ಮತದಾನ ಮಾಡುವಂತಿಲ್ಲ.

ಮತದಾನದ ಹಕ್ಕಿಲ್ಲ; ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡುವಾಗ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸದಸ್ಯರು ಮತದಾನ ಮಾಡುವ ಹಕ್ಕು ಹೊಂದಿರುತ್ತಾರೆ. ಆದರೆ ಈಗ ಎರಡೂ ಪಂಚಾಯಿತಿಗಳಿಗೆ ಹೊಸದಾಗಿ ಚುನಾವಣೆ ಇನ್ನೂ ನಡೆಯದ ಕಾರಣ ಈ ಬಾರಿಯ ಪರಿಷತ್ ಚುನಾವಣೆಯಲ್ಲಿ ಸದಸ್ಯರು ಮತದಾನ ಮಾಡುವ ಹಕ್ಕನ್ನು ಕಳೆದುಕೊಂಡಿದ್ದಾರೆ.

ಪರಿಷತ್ ಚುನಾವಣೆಯಲ್ಲಿ 98,846 ಮತದಾರರು ತಮ್ಮ ಹಕ್ಕು ಚಲಾವಣೆ ಮಾಡಲಿದ್ದಾರೆ. ಇವರಲ್ಲಿ 47,368 ಪುರುಷ, 51,474 ಮಹಿಳಾ ಅಭ್ಯರ್ಥಿಗಳಿದ್ದಾರೆ. ಅತಿ ಹೆಚ್ಚು ಮತದಾರರು ಬೆಳಗಾವಿ (8,871) ಜಿಲ್ಲೆಯಲ್ಲಿದ್ದಾರೆ.

ಬಳ್ಳಾರಿ, ಮೈಸೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಸೇರಿ ಒಟ್ಟು ಮೂವರು ತೃತೀಯ ಲಿಂಗಿಗಳು ಮತದಾವನ್ನು ಮಾಡಲಿದ್ದಾರೆ. ಡಿಸೆಂಬರ್ 10ರಂದು ನಡೆಯುವ ಮತದಾನಕ್ಕಾಗಿ 6073 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗುತ್ತಿದೆ.

14 ಕಾಂಗ್ರೆಸ್, ಬಿಜೆಪಿಯ 7 ಮತ್ತು ಜೆಡಿಎಸ್‌ನ 4 ಸದಸ್ಯರ ಅವಧಿ ಪೂರ್ಣಗೊಳ್ಳಲಿದ್ದು, ಈ ಸ್ಥಾನಗಳಿಗೆ ಹೊಸ ಸದಸ್ಯರನ್ನು ನೇಮಕ ಮಾಡಲು ಚುನಾವಣೆ ನಡೆಯುತ್ತಿದೆ. ಚುನಾವಣೆ ಫಲಿತಾಂಶ ವಿಧಾನ ಪರಿಷತ್‌ನಲ್ಲಿ ಯಾವ ಪಕ್ಷದ ಬಲ ಹೆಚ್ಚಿಸಲಿದೆ? ಎಂದು ಕಾದು ನೋಡಬೇಕಿದೆ.

ಯಾರು ಸ್ಪರ್ಧಿಸಬಹುದು?; ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸ ಬಯಸುವ ಅಭ್ಯರ್ಥಿಗಳು ಭಾರತೀಯ ಪ್ರಜೆಯಾಗಿದ್ದು, 25 ವರ್ಷ ವಯಸ್ಸಿನವರಾಗಿರಬೇಕು. ಕ್ಷೇತ್ರದ ಮತದಾರ ಆಗಿದ್ದಲ್ಲಿ ಯಾವ ಕ್ಷೇತ್ರದ ಮತದಾರರಾಗಿರುವವರೋ ಆ ಕ್ಷೇತ್ರದ ಮತದಾರರ ಪಟ್ಟಿಯನ್ನು ನಾಮಪತ್ರದೊಂದಿಗೆ ಲಗತ್ತಿಸಬೇಕು.

ಅಭ್ಯರ್ಥಿಗಳು ಠೇವಣಿ ಮೊತ್ತವಾಗಿ 10,000 ರೂ. ಪಾವತಿಸಬೇಕು. ಅನುಸೂಚಿತ ಜಾತಿ ಮತ್ತು ಪಂಗಡದವರು ಆಗಿದ್ದಲ್ಲಿ ತಹಶೀಲ್ದಾರರಿಂದ ಪಡೆದ ಜಾತಿ ದೃಢೀಕರಣ ಪತ್ರ ಲಗತ್ತಿಸಿದ್ದಲ್ಲಿ ಇದರ ಅರ್ಧ ಮೊತ್ತವನ್ನು ಅಂದರೆ 5,000 ರೂ. ಗಳನ್ನು ಪಾವತಿಸಬೇಕು.

ಚುನಾವಣೆಯಲ್ಲಿ ಸ್ಪರ್ಧಿಸಬಯಸುವ ಅಭ್ಯರ್ಥಿಗಳು ನಾಮಪತ್ರಗಳನ್ನು ಜಿಲ್ಲಾಧಿಕಾರಿಗಳ ಕಚೇರಿಯಿಂದ ಪಡೆಯಬಹುದಾಗಿದೆ. ಈಗಾಗಲೇ ಚುನಾವಣೆ ವೇಳಾಪಟ್ಟಿ ಪ್ರಕಟವಾಗಿದ್ದು, ಮಾದರಿ ನೀತಿ ಸಂಹಿತೆಯು ನವೆಂಬರ್ 9ರಿಂದ ಡಿಸೆಂಬರ್ 16 ರ ತನಕ ಜಾರಿಯಲ್ಲಿರುತ್ತದೆ.

Recommended Video

ರೇಡಿಯೋದಿಂದ ರಾಜಕೀಯದ ವರೆಗೂ ಲಾವಣ್ಯ ನಡೆದು ಬಂದ ಹಾದಿ | Oneindia Kannada

ಯಾವ ಜಿಲ್ಲೆಯಲ್ಲಿ ಎಷ್ಟು ಸ್ಥಾನ?; ಪರಿಷತ್‌ನ ಒಟ್ಟು 25 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಇವುಗಳಲ್ಲಿ ಬೀದರ್ 1, ಕಲಬುರಗಿ 1, ವಿಜಯಪುರ 2, ಬೆಳಗಾವಿ 2, ಉತ್ತರ ಕನ್ನಡ 1, ಧಾರವಾಡ 2, ರಾಯಚೂರು 1, ಬಳ್ಳಾರಿ 1, ಚಿತ್ರದುರ್ಗ 1, ಶಿವಮೊಗ್ಗ 1, ದಕ್ಷಿಣ ಕನ್ನಡ 2, ಚಿಕ್ಕಮಗಳೂರು 1, ಹಾಸನ 1, ತುಮಕೂರು 1, ಮಂಡ್ಯ 1, ಬೆಂಗಳೂರು 1, ಬೆಂಗಳೂರು ಗ್ರಾಮಾಂತರ 1, ಕೋಲಾರ 1, ಕೊಡಗು 1, ಮೈಸೂರು 2 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

English summary
Chief Electoral Office Karnataka said that 98,846 voters will can cast their votes in legislative council election. Zilla panchayat and taluk panchayat members missing vote this time.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X