ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

3 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 11 : ಚುನಾವಣಾ ಆಯೋಗ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಮೂವರು ಪರಿಷತ್ ಸದಸ್ಯರು ಶಾಸಕರಾಗಿ ಆಯ್ಕೆಯಾಗಿದ್ದು, ಪರಿಷತ್‌ನ ಮೂರು ಸ್ಥಾನ ತೆರವಾಗಿದೆ.

ಮಂಗಳವಾರ ಚುನಾವಣಾ ಆಯೋಗ ವಿಧಾನ ಪರಿಷತ್ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಿದೆ. ಅಕ್ಟೋಬರ್ 3ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯ ತನಕ ಮೂವರು ಸದಸ್ಯರನ್ನು ನೇಮಕ ಮಾಡಲು ಚುನಾವಣೆ ನಡೆಯಲಿದೆ.

ಪರಿಷತ್ ಚುನಾವಣೆ: ಎಂಬಿ ಪಾಟೀಲ್ ಸಹೋದರ ಸುನೀಲ್‌ಗೆ ಗೆಲುವುಪರಿಷತ್ ಚುನಾವಣೆ: ಎಂಬಿ ಪಾಟೀಲ್ ಸಹೋದರ ಸುನೀಲ್‌ಗೆ ಗೆಲುವು

ಕರ್ನಾಟಕ ವಿಧಾನಸಭೆಯ ಸದಸ್ಯರು ಮೂವರು ಸದಸ್ಯರನ್ನು ವಿಧಾನಪರಿಷತ್ತಿಗೆ ಆಯ್ಕೆ ಮಾಡಲಿದ್ದಾರೆ. ಸೆ.14ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಸೆ.22 ನಾಮಪತ್ರ ಸಲ್ಲಿಕೆಗೆ ಕೊನೆ ದಿನ. ಸೆ.26 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.

ರಾಜೀನಾಮೆ ವಾಪಸ್ ಪಡೆಯಲಿದ್ದಾರೆ ಯಡಿಯೂರಪ್ಪ ಆಪ್ತ!ರಾಜೀನಾಮೆ ವಾಪಸ್ ಪಡೆಯಲಿದ್ದಾರೆ ಯಡಿಯೂರಪ್ಪ ಆಪ್ತ!

ಸ್ಥಳೀಯ ಸಂಸ್ಥೆಗಳ ಚುನಾವಣೆ ಬಳಿಕ ರಾಜ್ಯದಲ್ಲಿ ಮತ್ತೊಂದು ಚುನಾವಣೆ ಎದುರಾಗಿದೆ. ವಿಧಾನಸಭೆಯಲ್ಲಿ ಬಿಜೆಪಿ 104 ಸದಸ್ಯರ ಬಲ ಹೊಂದಿದ್ದು, ಪರಿಷತ್ ಸದಸ್ಯರಾಗಲು ಪಕ್ಷದಲ್ಲಿ ಪೈಪೋಟಿ ನಿರೀಕ್ಷಿಸಲಾಗಿದೆ. ಯಾವ-ಯಾವ ಸ್ಥಾನ ತೆರವು ಇಲ್ಲಿದೆ ಮಾಹಿತಿ....

ವಿಧಾನ ಪರಿಷತ್ತಿನಲ್ಲಿ ತಾರಾ ಅನುರಾಧ ವಿದಾಯದ ಭಾಷಣವಿಧಾನ ಪರಿಷತ್ತಿನಲ್ಲಿ ತಾರಾ ಅನುರಾಧ ವಿದಾಯದ ಭಾಷಣ

ಕೆ.ಎಸ್.ಈಶ್ವರಪ್ಪ

ಕೆ.ಎಸ್.ಈಶ್ವರಪ್ಪ

ವಿಧಾನಪರಿಷತ್ ಸದಸ್ಯರಾಗಿದ್ದ ಕೆ.ಎಸ್.ಈಶ್ವರಪ್ಪ ಅವರು 2018ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಶಿವಮೊಗ್ಗ ನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

104027 ಮತಗಳನ್ನು ಪಡೆದು ಅವರು ಜಯಗಳಿಸಿದ್ದಾರೆ. ವಿಧಾನ ಪರಿಷತ್ ಸದಸ್ಯರು ವಿಧಾನಸಭೆ ಚುನಾವಣೆಯಲ್ಲಿ ಗೆದ್ದರೆ ಅವರ ಪರಿಷತ್ ಸದಸ್ಯತ್ವ ರದ್ದಾಗುತ್ತದೆ. ಆದ್ದರಿಂದ, ಸ್ಥಾನ ತೆರವಾಗಿದ್ದು ಚುನಾವಣೆ ನಡೆಯುತ್ತಿದೆ.

ಕೆ.ಎಸ್.ಈಶ್ವರಪ್ಪ ಅವರ ಅವಧಿ 2020ರ ಜೂನ್ 30ರ ತನಕ ಇತ್ತು.

ವಿ.ಸೋಮಣ್ಣ

ವಿ.ಸೋಮಣ್ಣ

ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದ ಬಿಜೆಪಿಯ ವಿ.ಸೋಮಣ್ಣ ಅವರು 2018ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದರು.

79,135 ಮತಗಳನ್ನು ಪಡೆದು ಅವರು ಗೆಲುವು ಸಾಧಿಸಿದ್ದಾರೆ. ಶಾಸಕರಾಗಿ ಆಯ್ಕೆಯಾಗಿದ್ದರಿಂದ ಅವರ ಪರಿಷತ್ ಸದಸ್ಯತ್ವ ರದ್ದಾಗಿದೆ. ಅವರ ಸ್ಥಾನ ತೆರವಾಗಿದ್ದು, ಚುನಾವಣೆ ಘೋಷಣೆಯಾಗಿದೆ.

ವಿ.ಸೋಮಣ್ಣ ಅವರ ಅವಧಿ 2022ರ ಜೂನ್ 14ರ ತನಕ ಇತ್ತು.

ಡಾ.ಜಿ.ಪರಮೇಶ್ವರ

ಡಾ.ಜಿ.ಪರಮೇಶ್ವರ

ವಿಧಾನ ಪರಿಷತ್ ಸದಸ್ಯರಾಗಿದ್ದ ಕಾಂಗ್ರೆಸ್‌ನ ಡಾ.ಜಿ.ಪರಮೇಶ್ವರ ಅವರು ತುಮಕೂರಿನ ಕೊರಟಗೆರೆ ಕ್ಷೇತ್ರದಿಂದ 2018ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರು.

ಚುನಾವಣೆಯಲ್ಲಿ 81,598 ಮತಗಳನ್ನು ಪಡೆದು ಅವರು ಜಯಗಳಿಸಿದ್ದಾರೆ. ಆದ್ದರಿಂದ, ಅವರ ಪರಿಷತ್ ಸದಸ್ಯತ್ವ ಸ್ಥಾನ ರದ್ದಾಗಿದ್ದು, ಈಗ ಚುನಾವಣೆ ನಿಗದಿಯಾಗಿದೆ.

ಡಾ.ಜಿ.ಪರಮೇಶ್ವರ ಅವರ ಅವಧಿ 2020ರ ಜೂನ್ 30ರ ತನಕ ಇತ್ತು.

ಕಾಂಗ್ರೆಸ್ ಪಕ್ಷಕ್ಕೆ ಜಯ

ಕಾಂಗ್ರೆಸ್ ಪಕ್ಷಕ್ಕೆ ಜಯ

ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದ ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು, ವಿಧಾನಸಭೆ ಚುನಾವಣೆಯಲ್ಲಿ ವಿಜಯಪುರ ನಗರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆದಿತ್ತು. ಸೆ.11ರಂದು ಫಲಿತಾಂಸ ಪ್ರಕಟವಾಗಿದ್ದು, ಜೆಡಿಎಸ್ ಬೆಂಬಲಿತ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಗೌಡ ಬಿ.ಪಾಟೀಲ್ ಜಯಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಗೂಳಪ್ಪ ಶೆಟಗಾರ್ ಸೋಲು ಅನುಭವಿಸಿದ್ದಾರೆ.

English summary
Election commission announced schedule for the Karnataka Legislative Council election. Election will be held on October 3, 2018 for 3 post that vacant after KS Eshwarappa, G.Parameshwara and V.Somanna won in Karnataka assembly elections 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X