4 ಕ್ಷೇತ್ರಗಳ ವಿಧಾನಪರಿಷತ್ ಚುನಾವಣೆ ಘೋಷಣೆ

Posted By:
Subscribe to Oneindia Kannada

ಬೆಂಗಳೂರು, ಮೇ 10 : ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ನಡೆಯುವ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದೆ. ಜೂನ್ 9ರಂದು ಮತದಾನ ನಡೆಯಲಿದೆ.

ಮೇ 16ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರಗಳನ್ನು ಸಲ್ಲಿಸಲು ಮೇ 23 ಕೊನೆಯ ದಿನ. ಮೇ 26 ನಾಮಪತ್ರಗಳನ್ನು ವಾಪಸ್ ಪಡೆಯಲು ಕೊನೆಯ ದಿನ. ಜೂನ್ 9ರಂದು ಮತದಾನ ನಡೆಯಲಿದೆ. ಜೂನ್ 13ರಂದು ಮತ ಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. [ಪರಿಷತ್ ಚುನಾವಣೆ : ಹೊರಟ್ಟಿ ಸೋಲು ಖಚಿತ]

vidhana soudha

4 ಸ್ಥಾನಗಳಿಗೆ ಚುನಾವಣೆ : ದಕ್ಷಿಣ ಪದವೀಧರ, ಪಶ್ಚಿಮ ಶಿಕ್ಷಕ, ವಾಯುವ್ಯ ಪದವೀಧರ, ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ನಾಲ್ವರು ವಿಧಾನಪರಿಷತ್ ಸದಸ್ಯರ ಅವಧಿ ಜುಲೈ 4ಕ್ಕೆ ಅಂತ್ಯಗೊಳ್ಳಲಿದೆ, ಅವರಿಂದ ತೆರವಾಗುವ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ನಿವೃತ್ತರಾಗಲಿರುವ ಸದಸ್ಯರು
* ಮಹಾಂತೇಶ ಶಿವಾನಂದ ಕೌಜಲಗಿ (ಕಾಂಗ್ರೆಸ್)
* ಗೊ.ಮಧುಸೂದನ (ಬಿಜೆಪಿ)
* ಬಸವರಾಜ ಹೊರಟ್ಟಿ (ಜೆಡಿಎಸ್)
* ಅರುಣ ಶಹಾಪುರ (ಬಿಜೆಪಿ)

2 ಸ್ಥಾನಗಳು ಖಾಲಿ ಇವೆ : ವಿಧಾನಪರಿಷತ್‌ ಸದಸ್ಯರಾಗಿದ್ದ ಜಗ್ಗೇಶ್ ಮತ್ತು ಕೃಷ್ಣಭಟ್ ಅವರ ಅವಧಿ ಫೆಬ್ರವರಿ ಮೊದಲ ವಾರಕ್ಕೆ ಪೂರ್ಣಗೊಂಡಿದ್ದು, ಅವರು ನಿವೃತ್ತರಾಗಿದ್ದಾರೆ. ಆ ಎರಡು ನಾಮನಿರ್ದೇಶಿತ ಸದಸ್ಯ ಸ್ಥಾನವೂ ಖಾಲಿ ಇದೆ. [ಪರಿಷತ್ ನಾಮ ನಿರ್ದೇಶನ, ಸಿದ್ದರಾಮಯ್ಯಗೆ ಹೊಸ ಸವಾಲು]

ಕಳೆದ ವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಖಾಲಿ ಇರುವ ಎರಡು ಸ್ಥಾನಗಳಿಗೆ ನಾಮ ನಿರ್ದೇಶನ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿವೇಚನೆಗೆ ಬಿಡಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Election commission announced schedule for Legislative council election form graduates, teachers constituencies. Election will be held for 4 seats on June 9, 2016.
Please Wait while comments are loading...