Get Updates
Get notified of breaking news, exclusive insights, and must-see stories!

Legislative Council Election Voting: ಇಂದು ಮೇಲ್ಮನೆ ಆರು ಸ್ಥಾನಕ್ಕೆ ಚುನಾವಣೆ: 3 ಪದವೀಧರ, 3 ಶಿಕ್ಷಕರ ಕ್ಷೇತ್ರಕ್ಕೆ ಮತ

ಬೆಂಗಳೂರು ಜೂನ್ 3: ಇಂದು ಮೇಲ್ಮನೆಯ ಆರು ಸ್ಥಾನಕ್ಕೆ ಚುನಾವಣೆ ನಡೆಯಲಿದೆ. 3 ಪದವೀಧರ, 3 ಶಿಕ್ಷಕರ ಕ್ಷೇತ್ರಕ್ಕೆ ಮತದಾನ ನಡೆಯಲಿದ್ದು ಒಟ್ಟು 78 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ಜೂನ್ 6ಕ್ಕೆ ಇದರ ಫಲಿತಾಂಶ ಹೊರ ಬೀಳಲಿದೆ.

ಹೌದು.. ವಿಧಾನಪರಿಷತ್ತಿನ ಮೂರು ಪದವೀಧರ ಮತ್ತು ಮೂರು ಶಿಕ್ಷಕರ ಕ್ಷೇತ್ರಗಳಿಗೆ ಇಂದು (ಜೂನ್ 3) ಮತದಾನ ನಡೆಯಲಿದ್ದು ಸಕಲ ಸಿದ್ಧತೆ ಮಾಡಿಕೊಳ್ಳಗಿದೆ. ಈಶಾನ್ಯ ಪದವೀಧರ, ಬೆಂಗಳೂರು ಪದವೀಧರ, ನೈಋತ್ಯ ಪದವೀಧರ ಮತ್ತು ಅಗ್ನೇಯ ಶಿಕ್ಷಕರ, ನೈಋತ್ಯ ಶಿಕ್ಷಕರ, ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಸೋಮವಾರ ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ.

legislative council election Voting today 3 graduate 3 vote for teacher constituencies

ಈ ಆರು ಕ್ಷೇತ್ರಗಳಲ್ಲಿ ಓರ್ವ ಮಹಿಳೆ ಸೇರಿ ಒಟ್ಟು 78 ಅಭ್ಯರ್ಥಿಗಳು ಅಂತಿಮ ಸ್ಪರ್ಧಾ ಕಣದಲ್ಲಿದ್ದಾರೆ. ಪ್ರಮುಖವಾಗಿ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ, ನೈಋತ್ಯ ಪದಿಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಘಿ ಡಾ. ಧನಂಜಯ ಸರ್ಜಿ, ನೈಋತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್ ಸ್ಪರ್ಧೆಯಲ್ಲಿದ್ದಾರೆ.

ಅಲ್ಲದೆ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ.ಕೆ.ಮಂಜುನಾಥ್, ನೈಋತ್ಯ ಪದವಿಧರ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕೆ. ರಘುಪತಿ ಭಟ್, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ವಿವೇಕಾನಂದ, ಅಗ್ನೇಯ ಶಿಕ್ಷಕರ ಕ್ಷೇತ್ರದಿಂದ ರುಪ್ಸಾ ಸಂಘಟನೆ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಸೇರಿ ಒಟ್ಟು 78 ಅಭ್ಯರ್ಥಿಗಳು ತಮ್ಮ ಗೆಲುವಿಗೆ ಸೆಣಸಲಿದ್ದಾರೆ.

legislative council election Voting today 3 graduate 3 vote for teacher constituencies

ಈಶಾನ್ಯ ಪದವೀಧರ ಕ್ಷೇತ್ರದಲ್ಲಿ 19 ಅಭ್ಯರ್ಥಿಗಳು ಕಣದಲ್ಲಿದ್ದು, ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 15 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ. ನೈಋತ್ಯ ಪದವೀಧರ ಕ್ಷೇತ್ರದಲ್ಲಿ 10 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಅಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 15 ಮಂದಿ ಸ್ಪರ್ಧಿಸುತ್ತಿದ್ದಾರೆ. ಇನ್ನೂ ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಎಮಟು ಅಭ್ಯರ್ಥಿಗಳು ಪೈಪೋಟಿಗಳಿದಿದ್ದಾರೆ.

ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳ ನಡುವೆ ಹೆಲುವಿಗೆ ಪೈಪೋಟಿ ನಡೆಯಲಿದೆ. ಪದವೀಧರ ಕ್ಷೇತ್ರದಲ್ಲಿ 2,01,632 ಪುರುಷರು, 161,907 ಮಹಿಳೆಯರು ಹಾಗೂ 34 ಇತರರು ಸೇರಿ ಒಟ್ಟು 3,63,573 ಮತದಾರರು ಇದ್ದಾರೆ. ಶಿಕ್ಷಕರ ಕ್ಷೇತ್ರದಲ್ಲಿ 38,305 ಪುರುಷರು, 31,954 ಮಹಿಳೆಯರು ಹಾಗೂ ಒಬ್ಬರು ಇತರರು ಸೇರಿ ಒಟ್ಟು 70,260 ಮತದಾರರಿದ್ದಾರೆ.

ಬಲಗೈ ತೋರು ಬೆರಳು, ಮಧ್ಯದ ಬೆರಳಿಗೆ ಶಾಯಿ:

ಶಿಕ್ಷಕರ ಕ್ಷೇತ್ರದಲ್ಲಿ 151 ಸಾಮಾಣ್ಯ ಮತಗಟ್ಟೆ ಮತ್ತು 19 ಉಪ ಮತಗಟ್ಟೆ ಸೇರಿ ಒಟ್ಟು 170 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಪದವೀಧರ ಕ್ಷೇತ್ರದಲ್ಲಿ 307 ಸಾಮಾನ್ಯ ಮತಗಟ್ಟೆ ಮತ್ತು 154 ಉಪ ಮತಗಟ್ಟೆ ಸೇರಿ ಒಟ್ಟು 461 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ನೈಋಉತ್ಯ ಶಿಕ್ಷಕರ ಕ್ಷೇತ್ರ ಹೊರತು ಪಡಿಸಿ ಇನ್ನುಳಿದ ಕ್ಷೇತ್ರದಲ್ಲಿ ಬಲಗೈ ತೋರುಬೆರಳಿಗೆ ಶಾಯಿ ಹಾಕಲಾಗುತ್ತದೆ. ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಲಗೈ ಮಧ್ಯದ ಬೆರಳಿಗೆ ಶಾಯಿ ಹಾಕಲಾಗುತ್ತದೆ.

ಅಭ್ಯರ್ಥಿಗಳಿಂದ ಮನೆ-ಮನೆ ಪ್ರಚಾರ:

ಆರು ಕ್ಷೇತ್ರಗಳ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಅಬ್ಬರದ ಬಹಿರಂಗ ಪ್ರಚಾರ ಶನಿವಾರ ಸಂಜೆ ಅಂತ್ಯವಾಗಿದೆ. ಭಾನುವಾರ ಸಂಜೆ ಆರು ಗಂಟೆಯವರೆಗೆ ಅಭ್ಯರ್ಥಿಗಳು ಮತದಾರರ ಮನೆ ಮನೆ ತೆರಳಿ ಮತಯಾಚನೆ ಮಾಡಿದರು. ತಮ್ಮ ಗೆಲುವಿಗೆ ಅಂತಿಮ ಕಸರತ್ತು ನಡೆಸಿದರು. ಸೋಮವಾರ ಅಂದರೆ ಇಂದು ಮತದಾನ ನಡೆಯಲಿದ್ದು, ಎಲ್ಲಾ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಜೂನ್ ಆರರಮದು ಮತ ಎಣಿಕೆ ಕಾರ್ಯ ನಡೆಯಲಿದ್ದು ಯಾರು ಗೆಲ್ಲುತ್ತಾರೆಮದು ಗೊತ್ತಾಗಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+