ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನ ಪರಿಷತ್ ಚುನಾವಣೆ; ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

|
Google Oneindia Kannada News

ಬೆಂಗಳೂರು, ಜೂನ್ 12 : ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಾಲ್ವರು ಸದಸ್ಯರನ್ನು ಆಯ್ಕೆ ಮಾಡಲು ಜೂನ್ 29ರಂದು ಚುನಾವಣೆ ನಡೆಯಲಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಬಿಜೆಪಿ ಎಚ್ಚರಿಕೆಯ ಹೆಜ್ಜೆ ಇಡಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಮಾತೇ ಅಂತಿಮ ಎಂಬ ಸುದ್ದಿಗಳು ಹಬ್ಬಿವೆ.

Recommended Video

ಅವಿರೋಧವಾಗಿ ದಾವಣಗೆರೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆಯಾಗಿ ಆಯ್ಕೆಯಾದ ದೀಪಾ ಜಗದೀಶ್|Renukacharya|Oneindia Kannada

ಒಟ್ಟು 7 ಸದಸ್ಯರನ್ನು ವಿಧಾನಪರಿಷತ್‌ಗೆ ಆಯ್ಕೆ ಮಾಡಬೇಕು. ಬಿಜೆಪಿ 4 ಸ್ಥಾನಗಳಲ್ಲಿ ಸುಲಭವಾಗಿ ಜಯಗಳಿಸಲಿದೆ. ಇದರ ಜೊತೆಗೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 5 ಗಣ್ಯರನ್ನು ಪರಿಷತ್‌ಗೆ ನಾಮ ನಿರ್ದೇಶನ ಮಾಡಲು ಬಿಜೆಪಿಗೆ ಅವಕಾಶ ಸಿಕ್ಕಿದೆ.

ವಿಧಾನ ಪರಿಷತ್ ಚುನಾವಣೆ; ಯಡಿಯೂರಪ್ಪ ಮಾತೇ ಅಂತಿಮ! ವಿಧಾನ ಪರಿಷತ್ ಚುನಾವಣೆ; ಯಡಿಯೂರಪ್ಪ ಮಾತೇ ಅಂತಿಮ!

ಒಟ್ಟು 9 ಸದಸ್ಯರು ಬಿಜೆಪಿ ಮೂಲಕ ಪರಿಷತ್ ಪ್ರವೇಶ ಮಾಡಲಿದ್ದಾರೆ. ಆದ್ದರಿಂದ, ಬಿಜೆಪಿಯಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ರಾಜ್ಯಸಭೆ ಚುನಾವಣೆಯಲ್ಲಿ ಆದಂತೆ ಕೊನೆ ಕ್ಷಣದಲ್ಲಿ ಅಭ್ಯರ್ಥಿ ಬದಲಾಗಿ ಅಚ್ಚರಿಯ ಹೆಸರು ಘೋಷಣೆಯಾಗಲಿದೆಯೇ? ಎಂಬ ಭಯ ಕೂಡ ಟಿಕೆಟ್ ಆಕಾಂಕ್ಷಿಗಳಲ್ಲಿ ಇದೆ.

ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದ ಈರಣ್ಣ ಕಡಾಡಿ ರಾಜ್ಯಸಭೆಗೆ! ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದ ಈರಣ್ಣ ಕಡಾಡಿ ರಾಜ್ಯಸಭೆಗೆ!

ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಜೂನ್ 18 ಕೊನೆಯ ದಿನವಾಗಿದೆ. ಆದ್ದರಿಂದ ಬಿಜೆಪಿ ಮುಂದಿನ ವಾರ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದೆ. ಯಾರಿಗೆ ಟಿಕೆಟ್ ಸಿಗಬಹುದು ಎಂಬ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ.

 ವಿಶ್ವನಾಥ್ ಗೆ ವಿಧಾನ ಪರಿಷತ್ ಸ್ಥಾನ‌ ನೀಡಲು ಶ್ರೀನಿವಾಸ ಪ್ರಸಾದ್ ಮನವಿ ವಿಶ್ವನಾಥ್ ಗೆ ವಿಧಾನ ಪರಿಷತ್ ಸ್ಥಾನ‌ ನೀಡಲು ಶ್ರೀನಿವಾಸ ಪ್ರಸಾದ್ ಮನವಿ

ಉಪ ಚುನಾವಣೆಯಲ್ಲಿ ಸೋತವರು

ಉಪ ಚುನಾವಣೆಯಲ್ಲಿ ಸೋತವರು

ವಿಧಾನಪರಿಷತ್‌ ಪ್ರವೇಶಿಸಲು ಹೊಸಕೋಟೆ ಉಪ ಚುನಾವಣೆಯಲ್ಲಿ ಸೋತ ಎಂಟಿಬಿ ನಾಗರಾಜ್, ಹುಣಸೂರು ಉಪ ಚುನಾವಣೆಯಲ್ಲಿ ಸೋತ ಎಚ್. ವಿಶ್ವನಾಥ್ ಆಕಾಂಕ್ಷಿಗಳು. ಇದರ ಜೊತೆಗೆ ರಾಣೆಬೆನ್ನೂರು ಕ್ಷೇತ್ರದಲ್ಲಿ ಟಿಕೆಟ್ ಬಿಟ್ಟುಕೊಟ್ಟ ಆರ್. ಶಂಕರ್ ಕೂಡಾ ಆಕಾಂಕ್ಷಿಗಳು.

ಸಿ. ಪಿ. ಯೋಗೇಶ್ವರ

ಸಿ. ಪಿ. ಯೋಗೇಶ್ವರ

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಆಪರೇಷನ್ ಕಮಲ ಕಾರಣ ಎಂಬುದು ಗುಟ್ಟಾಗಿ ಉಳಿದಿಲ್ಲ. ಇದರಲ್ಲಿ ಪ್ರಮುಖ ಪಾತ್ರ ವಹಿಸಿದ ಚನ್ನಪಟ್ಟಣ ಕ್ಷೇತ್ರದ ಮಾಜಿ ಶಾಸಕ ಸಿ. ಪಿ. ಯೋಗೇಶ್ವರ ಅವರ ಹೆಸರು ಸಹ ಪರಿಷತ್‌ಗೆ ಕೇಳಿ ಬರುತ್ತಿದೆ. ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಲೇ ಯೋಗೇಶ್ವರಗೆ ಸ್ಥಾನ-ಮಾನ ನೀಡಬೇಕು ಎಂಬ ಕೂಗು ಕೇಳಿ ಬಂದಿತ್ತು.

ಟಿಕೆಟ್ ಆಕಾಂಕ್ಷಿಗಳು

ಟಿಕೆಟ್ ಆಕಾಂಕ್ಷಿಗಳು

ರಾಜ್ಯಸಭೆ ಟಿಕೆಟ್ ಅಕಾಂಕ್ಷಿಯಾಗಿದ್ದ ರಮೇಶ್ ಕತ್ತಿ, ನಿರ್ಮಲ್ ಕುಮಾರ್ ಸುರಾನ, ಭಾನು ಪ್ರಕಾಶ್, ಎಂ. ನಾಗರಾಜ್, ಹಾವೇರಿಯ ಪಾಲಾಕ್ಷಗೌಡ ಹನುಂತಗೌಡ ಪಾಟೀಲ್ ಮುಂತಾದವರ ಹೆಸರು ಸಹ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಕೇಳಿ ಬರುತ್ತಿದೆ.

ಹೈಕಮಾಂಡ್ ಹಸ್ತಕ್ಷೇಪ ಅನಿವಾರ್ಯ

ಹೈಕಮಾಂಡ್ ಹಸ್ತಕ್ಷೇಪ ಅನಿವಾರ್ಯ

ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮಾತೇ ಅಂತಿಮ ಎಂಬ ಸುದ್ದಿಗಳು ಹಬ್ಬಿವೆ. ಆದರೆ, ಟಿಕೆಟ್ ಹಂಚಿಕೆ ಅಸಮಧಾನಕ್ಕೆ ಕಾರಣವಾದರೆ ಹೈಕಮಾಂಡ್ ಹಸ್ತಕ್ಷೇಪ ಮಾಡುವುದು ಅನಿವಾರ್ಯವಾಗಲಿದೆ.

English summary
On June 29th election will be held to elect 4 members from Karnataka assembly to legislative council. Here are the list of BJP probable candidates.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X