ಪರಿಷತ್ ಚುನಾವಣೆ : ಕಾಂಗ್ರೆಸ್‌ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು, ಮೇ 31 : ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್‌ನ ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಜೂನ್ 11ರಂದು ವಿಧಾನಸಭೆಯಿಂದ ಪರಿಷತ್ತಿಗೆ 11 ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಡೆಯಲಿದೆ.

ಗುರುವಾರ ಕಾಂಗ್ರೆಸ್ ಅಭ್ಯರ್ಥಿಗಳಾದ ಕೆ.ಗೋವಿಂದರಾಜು, ಸಿ.ಎಂ.ಇಬ್ರಾಹಿಂ, ಅರವಿಂದ ಕುಮಾರ್ ಅರಳಿ, ಕೆ.ಹರೀಶ್ ಕುಮಾರ್ ಅವರು ನಾಮಪತ್ರ ಸಲ್ಲಿಸಿದರು. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Legislative Council elections : Congress candidates files nominations

ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ವಿಧಾನಸಭೆಯಿಂದ ಪರಿಷತ್ತಿಗೆ 11 ಸದಸ್ಯರನ್ನು ಆಯ್ಕೆ ಮಾಡಲು ಜೂನ್ 11ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್ ವಿಧಾನಸಭೆಯಲ್ಲಿ 78 ಸದಸ್ಯ ಬಲವನ್ನು ಹೊಂದಿದ್ದು, ನಾಲ್ವರನ್ನು ಆಯ್ಕೆ ಮಾಡಬಹುದಾಗಿದೆ.

ಕಾಂಗ್ರೆಸ್ ವಿಧಾನಪರಿಷತ್ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಹೊಸ ಮುಖಗಳಿಗೆ ಆದ್ಯತೆ ನೀಡಿದೆ. ಸಿದ್ದರಾಮಯ್ಯ ಅವರ ಆಪ್ತರಾದ ಸಿ.ಎಂ.ಇಬ್ರಾಹಿಂ ಮತ್ತು ಕೆ.ಗೋವಿಂದರಾಜ್ ಅವರಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯದರ್ಶಿ ಅರವಿಂದ ಕುಮಾರ್ ಅರಳಿ ಅವರನ್ನು ಮೂರನೇ ಮತ್ತು ನಾಲ್ಕನೇ ಅಭ್ಯರ್ಥಿಗಳಾಗಿ ಆಯ್ಕೆ ಮಾಡಲಾಗಿದೆ. ಒಟ್ಟು 11 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆಯುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+