ವಿಧಾನ ಪರಿಷತ್ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ
ಬೆಂಗಳೂರು, ಫೆಬ್ರವರಿ 25 : ಕರ್ನಾಟಕ ಕಾಂಗ್ರೆಸ್ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಜೂನ್‌ನಲ್ಲಿ ನಾಲ್ಕು ವಿಧಾನ ಪರಿಷತ್ ಸ್ಥಾನಗಳನ್ನು ಭರ್ತಿ ಮಾಡಲು ಚುನಾವಣೆ ನಡೆಯಲಿದೆ.
ವಿಧಾನ ಪರಿಷತ್ ಚುನಾವಣೆಯ ದಿನಾಂಕವನ್ನು ಇನ್ನೂ ಘೋಷಣೆ ಮಾಡಿಲ್ಲ. ಆದರೆ, ಬಿಜೆಪಿ 2 ಕ್ಷೇತ್ರಗಳಿಗೆ ಜೆಡಿಎಸ್ ಮೂರು ಕ್ಷೇತ್ರಗಳಿಗೆ ಮತ್ತು ಕಾಂಗ್ರೆಸ್ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿವೆ.

2020ರ ಜೂನ್‌ಲ್ಲಿ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಡೆಯಲಿದೆ.
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ
* ಪಶ್ಚಿಮ ಪದವೀಧರ ಕ್ಷೇತ್ರ : ಡಾ. ಆರ್. ಎಂ.ಕುಬೇರಪ್ಪ
* ಈಶಾನ್ಯ ಶಿಕ್ಷಕರ ಕ್ಷೇತ್ರ : ಶರಣಪ್ಪ ಮಟ್ಟೂರು
* ಬೆಂಗಳೂರು ಶಿಕ್ಷಕರ ಕ್ಷೇತ್ರ : ಪ್ರವೀಣ್ ಪೀಟರ್
* ಆಗ್ನೇಯ ಪದವೀಧರ ಕ್ಷೇತ್ರ (ಅಭ್ಯರ್ಥಿ ಘೋಷಣೆ ಮಾಡಿಲ್ಲ)
ಜೆಡಿಎಸ್ ಪಟ್ಟಿ : ಜೆಡಿಎಸ್ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಆರ್. ಚೌಡರೆಡ್ಡಿ ತೂಪಲ್ಲಿ, ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಶಿವಶಂಕರ ಕಲ್ಲೂರ, ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ತಿಮ್ಮಯ್ಯ ಪುರ್ಲೆ ಅಭ್ಯರ್ಥಿಗಳು ಎಂದು ಘೋಷಣೆ ಮಾಡಿದೆ.












Click it and Unblock the Notifications