ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನ ಪರಿಷತ್ ಚುನಾವಣೆ; ಸಮಿತಿ ರಚನೆ ಮಾಡಿದ ಬಿಜೆಪಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 10; ವಿಧಾನ ಪರಿಷತ್ ಚುನಾವಣೆಗೆ ಕರ್ನಾಟಕ ಬಿಜೆಪಿ ಸಿದ್ಧತೆ ಆರಂಭಿಸಿದೆ. ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಗಳು ಸೇರಿ ಒಟ್ಟು 25 ಸ್ಥಾನಗಳಿಗೆ 2022ರಲ್ಲಿ ಚುನಾವಣೆ ನಡೆಯಲಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ಪರಿಷತ್‌ಗೆ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ.

ಕರ್ನಾಟಕ ಬಿಜೆಪಿ ವಿಧಾನ ಪರಿಷತ್ ಚುನಾವಣೆಗೆ ಅಭಿಪ್ರಾಯ ಸಂಗ್ರಹ ಪ್ರಮುಖರ ಸಮಿತಿಯನ್ನು ರಚನೆ ಮಾಡಿ ಆದೇಶ ಹೊರಡಿಸಿದೆ. ಪಕ್ಷ ರಚಿಸಿದ ಸಮಿತಿಯ ಮುಖಂಡರು ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ.

ಜೆಡಿಎಸ್ ತೊರೆಯುವುದಾಗಿ ಘೋಷಣೆ ಮಾಡಿದ ವಿಧಾನ ಪರಿಷತ್ ಸದಸ್ಯ! ಜೆಡಿಎಸ್ ತೊರೆಯುವುದಾಗಿ ಘೋಷಣೆ ಮಾಡಿದ ವಿಧಾನ ಪರಿಷತ್ ಸದಸ್ಯ!

ಮೇಲ್ಮನೆಯ ಸದಸ್ಯ ಬಲ 75. ಪ್ರಸ್ತುತ ಬಿಜೆಪಿಯ 32, ಕಾಂಗ್ರೆಸ್‌ನ 29 ಮತ್ತು ಜೆಡಿಎಸ್‌ನ 12 ಶಾಸಕರು ಇದ್ದಾರೆ. ಆಡಳಿತಾರೂಢ ಬಿಜೆಪಿ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಿಸಿದರೆ ವಿಧಾನ ಪರಿಷತ್‌ನಲ್ಲಿ ಮಸೂದೆಗಳನ್ನು ಪಾಸು ಮಾಡಿಕೊಳ್ಳಲು ಸಹಾಯಕವಾಗಲಿದೆ ಎಂಬ ಲೆಕ್ಕಾಚಾರದಲ್ಲಿದೆ.

ವಿಧಾನ ಪರಿಷತ್ ಚುನಾವಣೆ; ಕಾಂಗ್ರೆಸ್ ಪಕ್ಷದ ಟಿಕೆಟ್ ಪಡೆಯಲು ಇದೆಂಥಾ ನಿಯಮ? ವಿಧಾನ ಪರಿಷತ್ ಚುನಾವಣೆ; ಕಾಂಗ್ರೆಸ್ ಪಕ್ಷದ ಟಿಕೆಟ್ ಪಡೆಯಲು ಇದೆಂಥಾ ನಿಯಮ?

ಈಗ ವಿಧಾನ ಪರಿಷತ್‌ನಲ್ಲಿ ಬಿಜೆಪಿಗೆ ಪೂರ್ಣ ಬಹುಮತವಿಲ್ಲ. ಆದ್ದರಿಂದ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಪರಿಷತ್ ಸಭಾಪತಿ ಸ್ಥಾನವನ್ನು ಜೆಡಿಎಸ್‌ನ ಬಸವರಾಜ ಹೊರಟ್ಟಿಗೆ ಬಿಟ್ಟುಕೊಟ್ಟಿದೆ. ಪ್ರತಿಪಕ್ಷ ಕಾಂಗ್ರೆಸ್ ಸಹ ಇರುವ ಸ್ಥಾನಗಳನ್ನು ಉಳಿಸಿಕೊಳ್ಳಲು ತಂತ್ರ ರೂಪಿಸುತ್ತಿದೆ. ಬಿಜೆಪಿ ಚುನಾವಣೆಯಲ್ಲಿ ಬಹುಮತ ಪಡೆದರೆ ಸಭಾಪತಿ ಸ್ಥಾನವನ್ನು ತಮ್ಮ ನಾಯಕರಿಗೆ ಕೊಡಬಹುದು ಎಂಬ ಲೆಕ್ಕಾಚಾರವೂ ಇದೆ.

ಎಂಎಲ್‌ಸಿ ಚುನಾವಣೆ: ಬಿಜೆಪಿಯಿಂದ ಅಭ್ಯರ್ಥಿ ಆಯ್ಕೆ ಕಸರತ್ತು ಶುರು! ಎಂಎಲ್‌ಸಿ ಚುನಾವಣೆ: ಬಿಜೆಪಿಯಿಂದ ಅಭ್ಯರ್ಥಿ ಆಯ್ಕೆ ಕಸರತ್ತು ಶುರು!

ಸದಸ್ಯರ ನಿವೃತ್ತಿಯಿಂದ ಚುನಾವಣೆ

ಸದಸ್ಯರ ನಿವೃತ್ತಿಯಿಂದ ಚುನಾವಣೆ

ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸೇರಿದಂತೆ ಬಿಜೆಪಿಯ ಆರು ಸದಸ್ಯರು ನಿವೃತ್ತರಾಗಲಿದ್ದಾರೆ. 2022ರಲ್ಲಿ ಒಟ್ಟು 25 ಸ್ಥಾನಗಳನ್ನು ಭರ್ತಿ ಮಾಡಲು ವಿಧಾನ ಪರಿಷತ್ ಚುನಾವಣೆ ನಡೆಯಲಿದೆ. ಇದರಲ್ಲಿ ಜೆಡಿಎಸ್ ನಾಲ್ಕು ಸ್ಥಾನಗಳಲ್ಲಿ ಗೆಲ್ಲುವ ಲೆಕ್ಕಾಚಾರ ಹೊಂದಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಈಗಾಗಲೇ ಪರಿಷತ್ ಚುನಾವಣೆ ತಯಾರಿಯಲ್ಲಿ ತೊಡಗಿವೆ. ಯಾರನ್ನು ಪುನಃ ಆಯ್ಕೆ ಮಾಡಬೇಕು ಎಂದು ತಂತ್ರವನ್ನು ರೂಪಿಸುತ್ತಿವೆ.

ಬಿಜೆಪಿಯ ಅಭಿಪ್ರಾಯ ಸಂಗ್ರಹ ಪ್ರಮುಖರು

ಬಿಜೆಪಿಯ ಅಭಿಪ್ರಾಯ ಸಂಗ್ರಹ ಪ್ರಮುಖರು

ವಾಯುವ್ಯ ಶಿಕ್ಷಕರ ಕ್ಷೇತ್ರ, ವಾಯುವ್ಯ ಪದವೀಧರ ಕ್ಷೇತ್ರದ ವ್ಯಾಪ್ತಿಗೆ ಬೆಳಗಾವಿ, ಚಿಕ್ಕೋಡಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳು ಸೇರುತ್ತವೆ. ಈ ಜಿಲ್ಲೆಗಳಿಗೆ ಉಮೇಶ್ ಕತ್ತಿ, ಶಶಿಲ್ ನಮೋಶಿ, ಅ. ದೇವೇಗೌಡ, ಪುಟ್ಟಣ್ಣ, ಪಿ. ಎಂ. ಮುನಿರಾಜು ಗೌಡ ಅಭಿಪ್ರಾಯ ಸಂಗ್ರಹ ಪ್ರಮುಖರಾಗಿದ್ದಾರೆ.

ಪಶ್ಚಿಮ ಶಿಕ್ಷಕರ ಕ್ಷೇತ್ರದ ವಿವರ

ಪಶ್ಚಿಮ ಶಿಕ್ಷಕರ ಕ್ಷೇತ್ರದ ವಿವರ

ಪಶ್ಚಿಮ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಗೆ ಹುಬ್ಬಳ್ಳಿ-ಧಾರವಾಡ, ಧಾರವಾಡ ಗ್ರಾಮಾಂತರ, ಹಾವೇರಿ, ಗದಗ, ಉತ್ತರ ಕನ್ನಡ ಜಿಲ್ಲೆಗಳು ಸೇರುತ್ತವೆ. ಶಂಕರ್ ಪಾಟೀಲ್ ಮುನೇನಕೊಪ್ಪ, ಅರುಣ್ ಶಹಾಪುರ, ಡಾ. ಎ. ಹೆಚ್. ಶಿವಯೋಗಿ ಸ್ವಾಮಿ, ಮೈ. ವಿ. ರವಿಶಂಕರ್ ಈ ಕ್ಷೇತ್ರಗಳಿಗೆ ಅಭಿಪ್ರಾಯ ಸಂಗ್ರಹ ಪ್ರಮುಖರಾಗಿದ್ದಾರೆ.

ದಕ್ಷಿಣ ಪದವೀಧರ ಕ್ಷೇತ್ರ

ದಕ್ಷಿಣ ಪದವೀಧರ ಕ್ಷೇತ್ರ

ದಕ್ಷಿಣ ಪದವೀಧರ ಕ್ಷೇತ್ರದ ವ್ಯಾಪ್ತಿಗೆ ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ ಜಿಲ್ಲೆಗಳು ಒಳಪಡುತ್ತವೆ. ಈ ಕ್ಷೇತ್ರಗಳ ಅಭಿಪ್ರಾಯ ಸಂಗ್ರಹಕಾರರಾಗಿ ಎಸ್. ಟಿ. ಸೋಮಶೇಖರ್, ಕೆ. ನಾರಾಯಣ ಗೌಡ, ಅಶ್ವಥ್ ನಾರಾಯಣ, ಎಸ್. ವಿ. ಸಂಕನೂರು, ವೈ. ಎ. ನಾರಾಯಣಸ್ವಾಮಿ, ಹನುಮಂತ ನಿರಾಣಿ ನೇಮಕಗೊಂಡಿದ್ದಾರೆ.

ಅರ್ಜಿ ಆಹ್ವಾನಿಸಿದ್ದ ಕಾಂಗ್ರೆಸ್

ಅರ್ಜಿ ಆಹ್ವಾನಿಸಿದ್ದ ಕಾಂಗ್ರೆಸ್

ಪ್ರತಿಪಕ್ಷ ಕಾಂಗ್ರೆಸ್ ಸಹ ವಿಧಾನ ಪರಿಷತ್ತಿನ 25 ಸ್ಥಾನಗಳ ಚುನಾವಣೆಗೆ ತಯಾರಿ ಆರಂಭಿಸಿದೆ. ಈಗಾಗಕೇ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೆಲವು ಸಭೆಗಳನ್ನು ಮಾಡಿದ್ದಾರೆ. ಚುನಾವಣೆಗೆ ಟಿಕೆಟ್ ಬಯಸುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಲಾಗಿತ್ತು. ಬಿಜೆಪಿಯಿಂತೆ ಕಾಂಗ್ರೆಸ್ ಪಕ್ಷದಲ್ಲಿಯೂ ಟಿಕೆಟ್‌ಗಾಗಿ ನೂರಾರು ಆಕಾಂಕ್ಷಿಗಳಿದ್ದು, ಟಿಕೆಟ್ ಆಕಾಂಕ್ಷಿಗಳು ಅರ್ಜಿಗಳನ್ನು ಸಲ್ಲಿಸಿದ್ದಾರೆ.

English summary
Karnataka BJP constituted committee for legislative council elections in 2022. Election will be held for 25 seats.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X