ಪರಿಷತ್ ಫೈಟ್; ಕಾಂಗ್ರೆಸ್‌ ನಲ್ಲಿ 7 ಸ್ಥಾನಕ್ಕೆ 300ಕ್ಕೂ ಆಕಾಂಕ್ಷಿಗಳು: ಮಹತ್ವದ ಮಾಹಿತಿ ತಿಳಿಸಿದ ಡಿ ಕೆ ಶಿವಕುಮಾರ್

ಬೆಂಗಳೂರು, ಮೇ 28: ವಿಧಾನ ಪರಿಷತ್ ಚುನಾವಣೆ ಟಿಕೆಟ್ ಗೆ ಕಾಂಗ್ರೆಸ್ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ಹಂಚಿಕೆ ಮಾನದಂಡವನ್ನು ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನಿಸುತ್ತಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಈ ಕುರಿತು ಮಾಧ್ಯಮಗಳ ಜೊತೆಗೆ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಪರಿಷತ್ತಿನ 7 ಸ್ಥಾನಗಳಿಗೆ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಎಲ್ಲಾ ವರ್ಗದಲ್ಲೂ ಆಕಾಂಕ್ಷಿಗಳಿದ್ದಾರೆ. ಈ ಬಾರಿ ಎಲ್ಲಾ ವರ್ಗದವರಿಗೆ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ. ಎಲ್ಲರೂ ಬ್ಲಾಕ್, ಜಿಲ್ಲಾ, ರಾಜ್ಯಮಟ್ಟದಲ್ಲಿ ಪಕ್ಷಕ್ಕೆ ದುಡಿದಿದ್ದಾರೆ.

Legislative Council elections Know What DCM DK Shivakumar Says

ಕರಾವಳಿ ಕರ್ನಾಟಕ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ, ಹಳೇ ಮೈಸೂರು ಭಾಗ ಸೇರಿದಂತೆ ಎಲ್ಲಾ ಕಡೆಯಿಂದ ಅವಕಾಶ ನೀಡಬೇಕು ಎನ್ನುವ ಬೇಡಿಕೆ ಇದೆ. ಕೆಲವು ಸ್ಥಾನಗಳಲ್ಲಿ ಹಾಲಿ ಸದಸ್ಯರು ಇದ್ದಾರೆ. ಹೀಗಾಗಿ ಈ ಬಾರಿ ಕಷ್ಟಕರ ಪರಿಸ್ಥಿತಿ ಎದುರಾಗಿದೆ. ಹೈಕಮಾಂಡ್ ಯಾವ ತೀರ್ಮಾನ ಮಾಡಲಿದೆ ಎಂದು ನೋಡೋಣ ಎಂದು ಹೇಳಿದರು.

ಸಿಎಂ, ಡಿಸಿಎಂ ಅವರೇ ಎಲ್ಲಾ ತೀರ್ಮಾನ ಮಾಡಬಾರದು ಎನ್ನುವ ಪರಮೇಶ್ವರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, "ಖಂಡಿತ, ನಾವು ಅವರ ಅಭಿಪ್ರಾಯವನ್ನು ಕೇಳುತ್ತೇವೆ ಎಂದರು. ಇನ್ನೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಕುರಿತು ಮಾತನಾಡಿ, "ಈ ವಿಚಾರವನ್ನು ಪತ್ರಿಕೆಗಳಲ್ಲಿ ಓದಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿ ಪಡೆದು, ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ದೆಹಲಿ ಭೇಟಿ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಕಾಂಗ್ರೆಸ್‌ ಪಾಳಯದಲ್ಲಿ ಚರ್ಚೆ ಕುರಿತು ಮಾತನಾಡಿ, ಈ ಬಗ್ಗೆ ನಿಮಗೆ ಮಾತ್ರ ಮಾಹಿತಿ ಇರಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+