ಪರಿಷತ್ ಚುನಾವಣೆ; ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಿ
ಬೆಂಗಳೂರು, ಅಕ್ಟೋಬರ್ 01: ಕರ್ನಾಟಕದ ವಿಧಾನ ಪರಿಷತ್‌ನ ಹಲವು ಸ್ಥಾನಗಳಿಗೆ 2021ರ ಜೂನ್‌ನಲ್ಲಿ ಚುನಾವಣೆ ನಡೆಯಲಿದೆ. ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯನ್ನು ನೂತನವಾಗಿ ಸಿದ್ದಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿದೆ. ಅರ್ಹ ಪದವೀಧರರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶ ನೀಡಲಾಗಿದೆ.
ಚುನಾವಣಾ ಆಯೋಗವು ಕರ್ನಾಟಕ ಈಶಾನ್ಯ ಪದವೀಧರ ಮತಕ್ಷೇತ್ರದ ಮತದಾರರ ಪಟ್ಟಿಯನ್ನು ಹೊಸದಾಗಿ ಸಿದ್ದಪಡಿಸುತ್ತಿದೆ. ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ-18ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.

ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅರ್ಜಿಯನ್ನು ಸ್ವೀಕಾರ ಮಾಡಲು ನವೆಂಬರ್ 6 ಕೊನೆಯ ದಿನ. ನವೆಂಬರ್ 23 ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ. ನವೆಂಬರ್ 23 ರಿಂದ ಡಿಸೆಂಬರ್ 12ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ಡಿಸೆಂಬರ್ 30ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.
ಮಾರ್ಗಸೂಚಿಗಳು; ಈಶಾನ್ಯ ಪದವೀಧರ ಮತಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. 2023ರ ನವೆಂಬರ್ 1ಕ್ಕೆ ಮೂರು ವರ್ಷಗಳ ಪೂರ್ವದಲ್ಲಿ ಅಂದರೆ 2020ರ ನವೆಂಬರ 1ರ ಹಿಂದೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವೀಧರರಾಗಿರಬೇಕು.
2020ರ ನವೆಂಬರ್ 1ಕ್ಕಿಂತ ಮೊದಲು ಪದವಿ ಪಡೆದಿರುವಂತಹ ಪದವೀಧರರು ನಿಗದಿಪಡಿಸಿದ ನಮೂನೆ-18 ರಲ್ಲಿ (ಭಾವ ಚಿತ್ರದೊಂದಿಗೆ) ಭರ್ತಿಮಾಡಿದ ಅರ್ಜಿಯೊಂದಿಗೆ ಕಡ್ಡಾಯವಾಗಿ ಉತ್ತೀರ್ಣರಾಗಿರುವ ಅಂಕಪಟ್ಟಿ, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಹಾಗೂ ತಾವು ವಾಸಿಸುತ್ತಿರುವ ವಾಸ್ಥಳದ ದಾಖಲೆಗಳನ್ನು ಸ್ವಯಂಧೃಡೀಕರಿಸಿ, ಪತ್ರಾಂಕಿತ ಅಧಿಕಾರಿಯಿಂದ ದೃಢೀಕರಿಸಿ ಅರ್ಜಿಯೊಂದಿಗೆ ನವೆಂಬರ್ 6ರ ಒಳಗಾಗಿ ಮತದಾರರ ನೋಂದಣಾಧಿಕಾರಿಗಳು/ ಸಹಾಯಕ ಮತದಾರರ ನೋಂದಣಾಧಿಕಾರಿಗಳು/ ಸಂಬಂಧಪಟ್ಟ ವಿಧಾನಸಭಾ ಮತಕೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಾರ್ಯಾಲಯದಲ್ಲಿ (ಮಹಾನಗರ ಪಾಲಿಕೆ ಹಾಗೂ ತಹಶೀಲ್ದಾರ್ ಕಾರ್ಯಾಲಯದಲ್ಲಿ) ಸಲ್ಲಿಸಬಹುದು.
ಈಶಾನ್ಯ ಪದವೀಧರರ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಇದ್ದಲ್ಲಿ ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮತ್ತು ಸಂಬಂಧಪಟ್ಟ ವಿಧಾನಸಭಾ ಮತಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಾರ್ಯಾಲಯದಲ್ಲಿ (ಮಹಾನಗರ ಪಾಲಿಕೆ ಹಾಗೂ ತಹಶೀಲ್ದಾರ್ ಕಾರ್ಯಾಲಯದಲ್ಲಿ) ನಿಗದಿಪಡಿಸಿದ ಕಾಲಮಿತಿಯೊಳಗೆ ಅರ್ಜಿಗಳನ್ನು ಸಲ್ಲಿಸಬೇಕು.
ಸೇವೆಯಲ್ಲಿರುವ ಸರ್ಕಾರಿ ನೌಕರರು ತಮ್ಮ ಇಲಾಖಾ ಮುಖ್ಯಸ್ಥರ ಮೂಲಕ ಇಲಾಖಾ ಮುಖ್ಯಸ್ಥರು ತಮ್ಮ ಅಧೀನದಲ್ಲಿ ಬರುವ ಸರ್ಕಾರಿ ನೌಕರರ ಸೇವಾ ದಾಖಲೆಗಳನ್ನು ಪರಿಶೀಲಿಸಿ, ಆಯೋಗವು ನಿಗದಿಪಡಿಸಿರುವ 3ನೇ ಅನುಸೂಚಿತ ನಮೂನೆಯಲ್ಲಿ ದೃಢೀಕರಣ ಪತ್ರವನ್ನು ನೀಡಿ ತಮ್ಮ ಕಚೇರಿಯ ಎಲ್ಲಾ ಅರ್ಹ ಸಿಬ್ಬಂದಿಗಳ ಅರ್ಜಿಗಳನ್ನು ಒಟ್ಟಾಗಿ ಗೊತ್ತುಪಡಿಸಿದ ಅಧಿಕಾರಿಗೆ ದಿನಾಂಕ 6/11/2023ರ ಒಳಗಾಗಿ ನೀಡಬಹುದು.
ವಕೀಲರು, ವೈದ್ಯರು, ಚಾರ್ಟರ್ಡ್ ಅಕೌಂಟೆಂಟರು ಹಾಗೂ ನೋಂದಾಯಿತ ಇಂಜಿನಿಯರ್ ಸಂಘದ ಸದಸ್ಯರು ದೃಢೀಕರಿಸಿದ ಪಟ್ಟಿಯೊಡನೆ ಅರ್ಜಿಯನ್ನು ಒಟ್ಟಾಗಿ ಗೊತ್ತುಪಡಿಸಿದ ಅಧಿಕಾರಿಗೆ ಸಲ್ಲಿಸಬಹುದು. ಪ್ರಮಾಣ ಪತ್ರದೊದಡನೆ ಕ್ಷೇಮೆಂಟುದಾರನು ತಾನು ಓದಿದ ಕಾಲೇಜಿನ ಪ್ರಾಂಶುಪಾಲರು ಅಥವಾ ಸಂಬಂಧಪಟ್ಟ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ಗಳ ಪ್ರಮಾಣ ಪತ್ರ ಪಡೆದು ಅರ್ಜಿ ಸಲ್ಲಿಸಬಹುದು.
ಫಾರಂ-18 ಈಗಾಗಲೇ ಎಲ್ಲಾ ಗೊತ್ತುಪಡಿಸಿದ ಅಧಿಕಾರಿಗಳಿಗೆ ಒದಗಿಸಲಾಗಿದೆ. ಫಾರಂ-18 ಅನ್ನು ಅರ್ಹ ಮತದಾರರು ಉಚಿತವಾಗಿ ಸಂಬಂಧಪಟ್ಟ ಕಚೇರಿಯಿಂದ ಪಡೆಯಬಹುದಾಗಿದೆ. ಅರ್ಹ ಪದವೀಧರರು ಸಂಬಂಧಪಟ್ಟ ಅಧಿಕಾರಿಗಳಿಗೆ ಚುನಾವಣಾ ಗುರುತಿನ ಚೀಟಿಯ ಎಪಿಕ್ ನಂಬರ್ ಮಾಹಿತಿಯನ್ನು ಒದಗಿಸಬೇಕು.
ಚುನಾವಣಾ ಆಯೋಗ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರನ್ನು ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯನ್ನಾಗಿ ಹಾಗೂ ಈ ಚುನಾವಣಾ ಕ್ಷೇತ್ರ ವ್ಯಾಪ್ತಿಗೊಳಪಡುವ ವಿಭಾಗದ ಎಲ್ಲಾ ಜಿಲ್ಲಾಧಿಕಾರಿಗಳನ್ನು, ಆಯುಕ್ತರು ಮಹಾನಗರ ಪಾಲಿಕೆ ಕಲಬುರಗಿ/ ಬಳ್ಳಾರಿ, ಕಲಬುರಗಿ ವಿಭಾಗದ ಆಯಾ ಉಪ ವಿಭಾಗಕ್ಕೆ ಸಂಬಂಧಪಟ್ಟ ಎಲ್ಲಾ ಸಹಾಯಕ ಆಯುಕ್ತರು, ವಿಭಾಗದ ಎಲ್ಲಾ ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರ್ ಅನ್ನು ಸಹಾಯಕ ಮತದಾರರ ನೋಂದಣಾಧಿಕಾರಿಯನ್ನಾಗಿ ನೇಮಿಸಿರುತ್ತದೆ.
-
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications