ಸಿದ್ದರಾಮಯ್ಯ ಆಪ್ತ ಸಿ.ಎಂ.ಇಬ್ರಾಹಿಂ ಜೆಡಿಎಸ್ ಸೇರ್ಪಡೆ?

Posted By: Gururaj
Subscribe to Oneindia Kannada
   ಸಿದ್ದರಾಮಯ್ಯನವರ ಪರಮಾಪ್ತ ಸಿ ಎಂ ಇಬ್ರಾಹಿಂ ಜೆಡಿಎಸ್ ಗೆ ಸೇರ್ಪಡೆ | Oneindia Kannada

   ಬೆಂಗಳೂರು, ನವೆಂಬರ್ 3 : ವಿಧಾನಪರಿಷತ್ ಸದಸ್ಯ, ಕಾಂಗ್ರೆಸ್ ನಾಯಕ ಸಿ.ಎಂ.ಇಬ್ರಾಹಿಂ ಜೆಡಿಎಸ್ ಸೇರಲಿದ್ದಾರೆ?. ಹೌದು, ಇಂತಹ ಒಂದು ಸುದ್ದಿ ಜೆಡಿಎಸ್ ಪಾಳಯದಲ್ಲಿ ಹರಿದಾಡುತ್ತಿದೆ. ಕಳೆದ ವಾರ ಸಿ.ಎಂ.ಇಬ್ರಾಹಿಂ ಅವರು ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.

   ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತರಾದ ಸಿ.ಎಂ.ಇಬ್ರಾಹಿಂ ಆಗಸ್ಟ್ 24ರಂದು ವಿಧಾನಪರಿಷತ್ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪರಿಷತ್ ಸದಸ್ಯರಾಗಿದ್ದ ವಿಮಲಾ ಗೌಡ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಬೇಕಿತ್ತು.

   ಶಿವಮೊಗ್ಗದಲ್ಲಿ ಬೃಹತ್ ಪಾದಯಾತ್ರೆ ಆರಂಭಿಸಲಿದೆ ಜೆಡಿಎಸ್

   ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಎಂ.ಇಬ್ರಾಹಿಂ ನಾಮಪತ್ರ ಸಲ್ಲಿಸಿದ್ದರು. ವಿಧಾನಸಭೆಯಿಂದ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ನಡೆಯಬೇಕಿದ್ದ ಚುನಾವಣೆಗೆ ಬೇರೆ ಯಾವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿರಲಿಲ್ಲ. ಆದ್ದರಿಂದ, ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು.

   ಊಟ ಪಂಕ್ತಿಯಲ್ಲಿ ನಮ್ಮವರಿಗೇ ಕಡಿಮೆ ಬಡಿಸ್ತೀವಿ: ಇಬ್ರಾಹಿಂ ಸಂದರ್ಶನ

   2014ರಲ್ಲಿ ಸಿ.ಎಂ.ಇಬ್ರಾಹಿಂ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. 'ನಾನು ಬಿಜೆಪಿ ಸೇರುತ್ತೇನೆ ಎನ್ನುವುದು ವದಂತಿ. ಕಾಂಗ್ರೆಸ್ ಪಕ್ಷ ಬಿಡುವ ಯಾವುದೇ ಆಲೋಚನೆ ನನಗಿಲ್ಲ. ಈ ಬಗ್ಗೆ ಗೊಂದಲ ಬೇಡ' ಎಂದು ಸಿ.ಎಂ.ಇಬ್ರಾಹಿಂ ಸ್ಪಷ್ಟನೆ ನೀಡಿದ್ದರು.

   ಪರಿಷತ್ ಸದಸ್ಯರು

   ಪರಿಷತ್ ಸದಸ್ಯರು

   ಆಗಸ್ಟ್ 24ರಂದು ಕಾಂಗ್ರೆಸ್ ಪಕ್ಷದಿಂದ ವಿಧಾನಪರಿಷತ್ ಸದಸ್ಯರಾಗಿ ಸಿ.ಎಂ.ಇಬ್ರಾಹಿಂ ಆಯ್ಕೆಯಾಗಿದ್ದಾರೆ. 2018ರ ಜೂನ್ ತನಕ ಅವರ ಅವಧಿ ಇದೆ. ಅವಧಿ ಮುಗಿಯುವ ಮುನ್ನವೇ ಅವರು ಜೆಡಿಎಸ್ ಸೇರುವ ಸಾಧ್ಯತೆ ಇದೆ.

   ಕುಮಾರಸ್ವಾಮಿ, ದೇವೇಗೌಡ ಭೇಟಿ

   ಕುಮಾರಸ್ವಾಮಿ, ದೇವೇಗೌಡ ಭೇಟಿ

   ಕಳೆದ ವಾರ ಸಿ.ಎಂ.ಇಬ್ರಾಹಿಂ ಅವರು ಎಚ್.ಡಿ.ಕುಮಾರಸ್ವಾಮಿ ಮತ್ತು ಎಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಪಕ್ಷ ಸೇರುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಪಕ್ಷ ಸೇರುವ ಕುರಿತು ಅವರು ಒಲವು ವ್ಯಕ್ತಪಡಿಸಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ಮಾಹಿತಿ ನೀಡಿವೆ.

   ಕೇರಳದಲ್ಲಿರುವ ಸಿ.ಎಂ.ಇಬ್ರಾಹಿಂ

   ಕೇರಳದಲ್ಲಿರುವ ಸಿ.ಎಂ.ಇಬ್ರಾಹಿಂ

   ಸಿ.ಎಂ.ಇಬ್ರಾಹಿಂ ಅವರು ಕೇರಳದಲ್ಲಿದ್ದಾರೆ. ಮುಂದಿನ ವಾರ ಅವರು ವಾಪಸ್ ಆಗಲಿದ್ದು, ನಂತರ ಅಂತಿಮ ಸುತ್ತಿನ ಮಾತುಕತೆಯನ್ನು ನಡೆಸಿ, ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. ಅವರ ಪರಿಷತ್ ಸದಸ್ಯತ್ವ ಮುಗಿಯುವ ಹೊತ್ತಿಗೆ ಕರ್ನಾಟಕದಲ್ಲಿ ಚುನಾವಣೆ ನಡೆದಿರುತ್ತದೆ. ಆದ್ದರಿಂದ, ಅವರು ಜೆಡಿಎಸ್ ಸೇರಲು ಮುಂದಾಗಿದ್ದಾರೆ.

   ಯೋಜನಾ ಮಂಡಳಿ ಅಧ್ಯಕ್ಷ ಸ್ಥಾನ

   ಯೋಜನಾ ಮಂಡಳಿ ಅಧ್ಯಕ್ಷ ಸ್ಥಾನ

   ಸಿ.ಎಂ.ಇಬ್ರಾಹಿಂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತರು. ಅವರನ್ನು ಯೋಜನಾ ಮಂಡಳಿ ಉಪಾಧ್ಯಕ್ಷರನ್ನಾಗಿ ಮಾಡಲಾಗಿತ್ತು. ಅವರು ಆ ಸ್ಥಾನಕ್ಕೆ ರಾಜೀನಾಮೆ ನೀಡಿ, ಪರಿಷತ್ ಉಪ ಚುನಾವಣೆಗೆ ಸ್ಪರ್ಧಿಸಿದ್ದರು. ಅವಿರೋಧವಾಗಿ ಆಯ್ಕೆಯಾಗಿದ್ದರು.

   2013ರಲ್ಲಿವಿಧಾನಸಭೆಗೆ ಸ್ಪರ್ಧೆ

   2013ರಲ್ಲಿವಿಧಾನಸಭೆಗೆ ಸ್ಪರ್ಧೆ

   2013ರ ಚುನಾವಣೆಯಲ್ಲಿ ಕ್ಷೇತ್ರದ ಹಾಲಿ ಶಾಸಕ ಸಂಗಮೇಶ್ ಅವರನ್ನು ಕಡೆಗಣಿಸಿ ಭದ್ರಾವತಿಯಲ್ಲಿ ಇಬ್ರಾಹಿಂ ಅವರಿಗೆ ಟಿಕೆಟ್ ನೀಡಲಾಗಿತ್ತು. ಆದರೆ, ಇಬ್ರಾಹಿಂ ಸೋಲು ಕಂಡಿದ್ದರು.

   ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

   English summary
   Congress leader and Legislative council member C.M.Ibrahim may join JDS soon. Recently C.M.Ibrahim met H.D.Kumaraswamy in Bengaluru.

   Oneindia ಬ್ರೇಕಿಂಗ್ ನ್ಯೂಸ್,
   ತಾಜಾ ಸುದ್ದಿ ತಕ್ಷಣವೇ ಪಡೆಯಿರಿ