ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪರಿಷತ್ ಫೈಟ್ : ಬಿಜೆಪಿ ಸೋಲಿನ ಹೊಣೆ ಯಾರ ಹೆಗಲಿಗೆ?

By ರಾಮನಾಥ್
|
Google Oneindia Kannada News

ಬೆಂಗಳೂರು, ಡಿಸೆಂಬರ್ 30 : ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ 10 ಸ್ಥಾನಗಳಲ್ಲಿಯೂ ಜಯಗಳಿಸುವುದಿಲ್ಲ ಎಂದು ಹೇಳಿದ್ದ ಬಿಜೆಪಿ ನಾಯಕರಿಗೆ ಮುಜುಗರ ಉಂಟಾಗಿದೆ. ಚುನಾವಣೆಯಲ್ಲಿ 10 ಸ್ಥಾನಗಳಲ್ಲಿ ಜಯಗಳಿಸಲು ವಿಫಲವಾದ ಬಿಜೆಪಿಗೆ ಭಾರೀ ಮುಖಭಂಗವಾಗಿದ್ದು, ಪಕ್ಷದ ಸೋಲಿನ ಹೊಣೆಯನ್ನು ಯಾವ ನಾಯಕರು ಹೊರಬೇಕು? ಎಂಬುದು ಸದ್ಯದ ಪ್ರಶ್ನೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷದ ರಾಜ್ಯಾಧ್ಯಕ್ಷರಾಗಲು ವೇದಿಕೆ ಸಿದ್ಧವಾಗುತ್ತಿರುವಾಗಲೇ ಬಿಜೆಪಿಗೆ ಸೋಲಾಗಿದೆ. ಯಡಿಯೂರಪ್ಪ ಮತ್ತು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರ ತವರು ಕ್ಷೇತ್ರ ಶಿವಮೊಗ್ಗದಲ್ಲಿಯೇ ಬಿಜೆಪಿ ಅಭ್ಯರ್ಥಿ ಸೋಲು ಕಂಡಿದ್ದಾರೆ. [ಪರಿಷತ್ ಚುನಾವಣೆ ಗೆದ್ದವರು ಯಾರು?]

yeddyurappa

ಧಾರವಾಡ ಕ್ಷೇತ್ರದಲ್ಲಿ ಸಹೋದರ ಪ್ರದೀಪ್ ಶೆಟ್ಟರ್‌ಗೆ ಟಿಕೆಟ್ ಕೊಡಿಸಿದ್ದ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು, ಸಹೋದರನನ್ನು ಗೆಲ್ಲಿಸಿಕೊಂಡು ಬರುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರದೀಪ್ ಶೆಟ್ಟರ್ ಗೆಲುವಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರ ಶ್ರಮವೂ ಇದೆ ಎಂದು ಕೆಲವು ನಾಯಕರು ಹೇಳುತ್ತಿದ್ದಾರೆ. [ಪರಿಷತ್ ಫಲಿತಾಂಶ : ಕ್ಷಣ-ಕ್ಷಣದ ಮಾಹಿತಿ]

ಬಿಎಸ್‌ವೈ, ಈಶ್ವರಪ್ಪ ಮುನಿಸು? : ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಬಿ.ಎಸ್.ಯಡಿಯೂರಪ್ಪ ಮತ್ತು ಕೆ.ಎಸ್.ಈಶ್ವರಪ್ಪ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ ಎನ್ನುವ ಸುದ್ದಿ ರಾಜಕೀಯ ವಲಯದಲ್ಲಿ ಹಬ್ಬಿದೆ. ಯಡಿಯೂರಪ್ಪ ಅವರು ಚುನಾವಣೆಯಲ್ಲಿ ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್ ಅವರಿಗೆ ಟಿಕೆಟ್ ನೀಡುವಂತೆ ಪ್ರಸ್ತಾಪವಿಟ್ಟಿದ್ದರು. ಆದರೆ, ಕೆ.ಎಸ್.ಈಶ್ವರಪ್ಪ ಅವರು ಆರ್.ಕೆ.ಸಿದ್ದರಾಮಣ್ಣ ಅವರ ಬೆಂಬಲಕ್ಕೆ ನಿಂತಿದ್ದರು.

ಆಯನೂರು ಮಂಜುನಾಥ್ ಅವರ ರಾಜ್ಯಸಭಾ ಸದಸ್ಯತ್ವದ ಅವಧಿ 2016ರ ಜೂನ್ ತನಕವಿತ್ತು. ಆದ್ದರಿಂದ, ಅವರಿಗೆ ಟಿಕೆಟ್ ನೀಡುವುದು ಬೇಡ ಎಂದು ಈಶ್ವರಪ್ಪ ಅವರು ರಾಜ್ಯ ನಾಯಕರಿಗೆ ಸಲಹೆ ನೀಡಿದ್ದರು. ಇದರಿಂದಾಗಿ ಆಯನೂರು ಮಂಜುನಾಥ್ ಅವರಿಗೆ ಟಿಕೆಟ್ ಕೈ ತಪ್ಪಿತ್ತು.

ಇದರಿಂದ ಅಸಮಾಧಾನಗೊಂಡ ಯಡಿಯೂರಪ್ಪ ಅವರು ಆರ್.ಕೆ.ಸಿದ್ದರಾಮಣ್ಣ ಅವರ ಪರವಾಗಿ ಹೆಚ್ಚು ಪ್ರಚಾರ ಮಾಡಿರಲಿಲ್ಲ. ತಮ್ಮ ಸ್ವ ಕ್ಷೇತ್ರ ಶಿಕಾರಿಪುರದಲ್ಲಿಯೂ ಸಿದ್ದರಾಮಣ್ಣ ಅವರ ಪರವಾಗಿ ಅರ್ಧ ದಿನ ಪ್ರಚಾರ ಮಾಡಿದ್ದರು. ಮತದಾನ ನಡೆದು, ಫಲಿತಾಂಶ ಪ್ರಕಟಗೊಂಡಿದೆ ಬಿಜೆಪಿ ಅಭ್ಯರ್ಥಿಗೆ ಸೋಲಾಗಿದೆ.

ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯ ರಾಜಕಾರಣಕ್ಕೆ ಬರಲು ವೇದಿಕೆ ಸಿದ್ಧವಾಗುತ್ತಿರುವಾಗಲೇ ಬಿಜೆಪಿ ಸೋಲು ಅನುಭವಿಸಿದೆ. ಈ ಸೋಲಿನ ಹೊಣೆಯನ್ನು ಬಿಜೆಪಿಯ ಯಾವ ನಾಯಕರು ಹೊರುತ್ತಾರೆ? ಎಂದು ಕಾದು ನೋಡಬೇಕಾಗಿದೆ.

English summary
Will B.S.Yeddyurappa and K.S.Eshwarappa responsible for BJP defeat in Legislative council election results of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X