ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪರಿಷತ್ ಚುನಾವಣೆ; 30 ಅಭ್ಯರ್ಥಿಗಳು ಕಣದಲ್ಲಿ, ಬಿಜೆಪಿಗೆ ಬಂಡಾಯದ ಬಿಸಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 13 : ವಿಧಾನ ಪರಿಷತ್ತಿನ 4 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಒಟ್ಟು 30 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದ್ದು, ಇಬ್ಬರು ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ.

ವಿಧಾನ ಪರಿಷತ್ನಾಲ್ಕು ಸ್ಥಾನಗಳಿಗೆ ಅಕ್ಟೋಬರ್ 28ರಂದು ಮತದಾನ ನಡೆಯಲಿದೆ. ನಾಮಪತ್ರಗಳನ್ನು ವಾಪಸ್ ಪಡೆಯಲು ಅಕ್ಟೋಬರ್ 12 ಕೊನೆಯ ದಿನವಾಗಿತ್ತು. ನವೆಂಬರ್ 2ರಂದು ಮತ ಎಣಿಕೆ ನಡೆಯಲಿದೆ.

ಕರ್ನಾಟಕ; ವಿಧಾನ ಪರಿಷತ್ 4 ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಕರ್ನಾಟಕ; ವಿಧಾನ ಪರಿಷತ್ 4 ಕ್ಷೇತ್ರಗಳಿಗೆ ಚುನಾವಣೆ ಘೋಷಣೆ

ಆಗ್ನೇಯ ಪದವೀಧರ ಕ್ಷೇತ್ರ, ಪಶ್ಚಿಮ ಪದವೀಧರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರ ಸೇರಿ ಒಟ್ಟು 30 ಅಭ್ಯರ್ಥಿಗಳು ಕಣಲ್ಲಿದ್ದಾರೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಆರ್. ಆರ್. ನಗರ ಟಿಕೆಟ್ ಘೋಷಣೆ; ಕುಸುಮಾ ಫೇಸ್‌ ಬುಕ್ ಪೋಸ್ಟ್ ಆರ್. ಆರ್. ನಗರ ಟಿಕೆಟ್ ಘೋಷಣೆ; ಕುಸುಮಾ ಫೇಸ್‌ ಬುಕ್ ಪೋಸ್ಟ್

ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯಿಂದ ಚಿದಾನಂದ ಎಂ. ಬಿಜೆಪಿಯ ಅಧಿಕೃತ ಅಭ್ಯರ್ಥಿ. ಆದರೆ, ಹಿರಿಯೂರು ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಅವರ ಪತಿ ಡಿ. ಟಿ. ಶ್ರೀನಿವಾಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಶಿರಾ ಉಪ ಚುನಾವಣೆ; ಬಿಜೆಪಿ ಗೆಲುವು ಅಷ್ಟು ಸುಲಭವಲ್ಲ! ಶಿರಾ ಉಪ ಚುನಾವಣೆ; ಬಿಜೆಪಿ ಗೆಲುವು ಅಷ್ಟು ಸುಲಭವಲ್ಲ!

ಬಿಜೆಪಿಗೆ ಬಂಡಾಯದ ಬಿಸಿ

ಬಿಜೆಪಿಗೆ ಬಂಡಾಯದ ಬಿಸಿ

ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯವ ಬಿಸಿ ತಟ್ಟದೆ. ಡಿ. ಟಿ. ಶ್ರೀನಿವಾಸ್ ಮತ್ತು ತುಮಕೂರು ಬಿಜೆಪಿ ಮುಖಂಡ ಎಚ್. ಎಸ್. ಲೇಪಾಕ್ಷ್ ಬಂಡಾಯ ಅಭ್ಯರ್ಥಿಗಳು. ಪಕ್ಷದ ಅಧಿಕೃತ ಅಭ್ಯರ್ಥಿ ಚಿದಾನಂದ ಎಂ. ಆಗಿದ್ದಾರೆ. ಜೆಡಿಎಸ್‌ನಿಂದ ಆರ್. ಚೌಡರೆಡ್ಡಿ, ಕಾಂಗ್ರೆಸ್‌ನಿಂದ ರಮೇಶ್ ಬಾಬು ಅಭ್ಯರ್ಥಿಗಳು. ಕ್ಷೇತ್ರದಲ್ಲಿ 18 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು, ಮೂವರು ವಾಪಸ್ ಪಡೆದಿದ್ದು 15 ಅಭ್ಯರ್ಥಿಗಳಿದ್ದಾರೆ.

ಬೆಂಗಳೂರು ಶಿಕ್ಷಕರ ಕ್ಷೇತ್ರ

ಬೆಂಗಳೂರು ಶಿಕ್ಷಕರ ಕ್ಷೇತ್ರ

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ಪುಟ್ಟಣ್ಣ, ಕಾಂಗ್ರೆಸ್‌ನ ಆರ್. ಪ್ರವೀಣ್ ಕುಮಾರ್, ಜೆಡಿಎಸ್‌ನ ಎ. ಪಿ. ರಂಗನಾಥ್ ಸೇರಿ 9 ಮಂದಿ ಕಣದಲ್ಲಿದ್ದಾರೆ. 11 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರಗೊಂಡಿತ್ತು. ಇಬ್ಬರು ನಾಮಪತ್ರ ವಾಪಸ್ ಪಡೆದರು.

ಐವರು ಅಭ್ಯರ್ಥಿಗಳು ಕಣದಲ್ಲಿ

ಐವರು ಅಭ್ಯರ್ಥಿಗಳು ಕಣದಲ್ಲಿ

ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು ಐವರು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಬಿಜೆಪಿಯಿಂದ ಶಶಿಲ್ ಜಿ. ನಮೋಶಿ, ಕಾಂಗ್ರೆಸ್‌ನಿಂದ ಶರಣಪ್ಪ ಮಟ್ಟೂರು, ಜೆಡಿಎಸ್‌ನಿಂದ ತಿಮ್ಮಯ್ಯ ಪುರ್ಲೆ ಅಭ್ಯರ್ಥಿಗಳಾಗಿದ್ದಾರೆ.

Recommended Video

Muniratna ಅವರಿಗೆ Ticket ಸಿಗುವ ಮುನ್ನವೇ Supreme Court ಕ್ಲೀನ್ ಚಿಟ್ | Oneindia Kannada
11 ಅಭ್ಯರ್ಥಿಗಳು ಕಣದಲ್ಲಿ

11 ಅಭ್ಯರ್ಥಿಗಳು ಕಣದಲ್ಲಿ

ಪಶ್ಚಿಮ ಪಧವೀಧರ ಕ್ಷೇತ್ರದಲ್ಲಿ ಒಟ್ಟು 11 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಬಿಜೆಪಿಯಿಂದ ಪ್ರೊ. ಎಸ್. ವಿ. ಸಂಕನೂರ, ಕಾಂಗ್ರೆಸ್‌ನಿಂದ ಕುಬೇರಪ್ಪ, ಜೆಡಿಎಸ್‌ನಿಂದ ಶಿವಶಂಕಲ್ ಕಲ್ಲೂರ್ ಅಭ್ಯರ್ಥಿಗಳಾಗಿದ್ದಾರೆ.

English summary
30 candidates in fray for the four legislative council seat election that will be held on October 28, 2020. Elections will held for south east and west graduates constituencies and north east and bengaluru teachers constituencies.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X