ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಎಸ್‌.ಆರ್. ಪಾಟೀಲ್ ಹೆಸರು ಅಂತಿಮ?

|
Google Oneindia Kannada News

ಬೆಂಗಳೂರು, ಜುಲೈ 7: ವಿಧಾನ ಪರಿಷತ್‌ ಸಭಾಪತಿ ಸ್ಥಾನವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡಲು ಜೆಡಿಎಸ್ ತೀರ್ಮಾನಿಸಿದೆ ಎನ್ನಲಾಗಿದೆ.

ಪರಿಷತ್ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನ ಎಸ್‌.ಆರ್. ಪಾಟೀಲ್ ಅವರ ಆಯ್ಕೆ ಬಹುತೇಕ ಖಚಿತವಾಗಿದೆ. ವಿಧಾನಸಭೆ ಅಧಿವೇಶನ ಮುಕ್ತಾಯವಾಗುವ ಕೊನೆಯಲ್ಲಿ ಸಭಾಪತಿ ಸ್ಥಾನದ ಚುನಾವಣೆ ನಡೆಯಲಿದೆ.

ಈ ಸಂಬಂಧ ಮುಂದಿನವಾರ ಅಧಿಸೂಚನೆ ಪ್ರಕಟಿಸುವ ನಿರೀಕ್ಷೆಯಿದೆ.

ಅಧಿಕಾರ ಅತೃಪ್ತಿ ಹೊರಹಾಕಿದ ಹಂಗಾಮಿ ಸಭಾಪತಿ ಹೊರಟ್ಟಿಅಧಿಕಾರ ಅತೃಪ್ತಿ ಹೊರಹಾಕಿದ ಹಂಗಾಮಿ ಸಭಾಪತಿ ಹೊರಟ್ಟಿ

ಪರಿಷತ್ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಜಟಾಪಟಿ ಶುರುವಾಗಿತ್ತು. ಆದರೆ, ಉಭಯ ಪಕ್ಷಗಳ ನಾಯಕರು ಸಮಾಲೋಚನೆ ನಡೆಸಿ ಒಪ್ಪಂದ ಮಾಡಿಕೊಂಡಿದ್ದು, ಸಭಾಪತಿ ಸ್ಥಾನವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡಲು ಜೆಡಿಎಸ್ ಒಪ್ಪಿಕೊಂಡಿದೆ.

legislative council sr patils name is finalised: reports

ಅಲ್ಲದೆ, ಸಿದ್ದರಾಮಯ್ಯ ಅವರು ಈ ವಿಚಾರದಲ್ಲಿ ಮೇಲುಗೈ ಪಡೆದಿದ್ದಾರೆ. ಬಾದಾಮಿಯಲ್ಲಿ ತಮ್ಮ ಗೆಲುವಿಗೆ ನೆರವಾದ ಮಾಜಿ ಸಚಿವ ಎಸ್‌.ಆರ್. ಪಾಟೀಲ್ ಅವರಿಗೆ ಸಭಾಪತಿ ಸ್ಥಾನ ಸಿಗಬೇಕೆಂದು ಸಿದ್ದರಾಮಯ್ಯ ಪಟ್ಟುಹಿಡಿದಿದ್ದರು ಎನ್ನಲಾಗಿದೆ.

ಅವರ ಒತ್ತಡಕ್ಕೆ ಮಣಿದು ಕಾಂಗ್ರೆಸ್ ಕೂಡ ಎಸ್.ಆರ್. ಪಾಟೀಲ್ ಅವರ ಆಯ್ಕೆಗೆ ಸಹಮತಿ ಸೂಚಿಸಿದೆ. ವಿ.ಎಸ್. ಉಗ್ರಪ್ಪ, ಕೆ.ಸಿ. ಕೊಂಡಯ್ಯ, ಬೋಸರಾಜು ಮತ್ತು ಪ್ರತಾಪ್ ಚಂದ್ರಶೆಟ್ಟಿ ಅವರ ಹೆಸರುಗಳು ಸಹ ಕಾಂಗ್ರೆಸ್ ಪಾಳಯದಲ್ಲಿ ಚಾಲ್ತಿಯಲ್ಲಿತ್ತು.

ವಿಧಾನಪರಿಷತ್ ಸಭಾಪತಿ ಆಯ್ಕೆ ಇನ್ನೂ ಕಗ್ಗಂಟು! ವಿಧಾನಪರಿಷತ್ ಸಭಾಪತಿ ಆಯ್ಕೆ ಇನ್ನೂ ಕಗ್ಗಂಟು!

ಈ ನಿರ್ಧಾರದಿಂದ ಜೆಡಿಎಸ್‌ನ ಬಸವರಾಜ ಹೊರಟ್ಟಿ ಅವರಿಗೆ ಮತ್ತೆ ನಿರಾಶೆ ಎದುರಾಗಿದೆ. ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರಗೊಂಡಿದ್ದ ಹೊರಟ್ಟಿ ಅವರಿಗೆ ಸಭಾಪತಿ ಸ್ಥಾನ ನೀಡುವುದಾಗಿ ಎಚ್‌.ಡಿ. ದೇವೇಗೌಡ ಮತ್ತು ಕುಮಾರಸ್ವಾಮಿ ಅವರು ಭರವಸೆ ನೀಡಿದ್ದರು.

ಬಸವರಾಜ ಹೊರಟ್ಟಿ ಅವರನ್ನೇ ಸಭಾಪತಿಯನ್ನಾಗಿ ಆಯ್ಕೆ ಮಾಡಲು ಜೆಡಿಎಸ್ ಉದ್ದೇಶಿಸಿತ್ತು. ಆದರೆ ಬದಲಾದ ಸನ್ನಿವೇಶದಲ್ಲಿ ಆ ಸ್ಥಾನ ಕಾಂಗ್ರೆಸ್ ಪಾಲಾಗಿದೆ. ಇದರಿಂದ ಹೊರಟ್ಟಿ ಅವರಿಗೆ ಮತ್ತೊಂದು ಪ್ರಮುಖ ಹುದ್ದೆಯೂ ಕೈತಪ್ಪಿದೆ ಎನ್ನಲಾಗಿದೆ.

English summary
Congress and JDS came to a conclusion over the election speaker of Legislative Council. Congress Senior leader SR Patil's name almost confirmed as JDS agreed to give up its fight.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X