Get Updates
Get notified of breaking news, exclusive insights, and must-see stories!

ವಿಧಾನಮಂಡಲ ಅಧಿವೇಶನ: ಕದನಕ್ಕೆ ಸಜ್ಜಾದ ಕಮಲ- ದಳ: ಮೊದಲ ದಿನ ಪ್ರತಿಭಟನೆ ಮಾಡಿದ್ಯಾಕೆ?

ಬೆಂಗಳೂರು, ಆಗಸ್ಟ್‌ 11: ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭಗೊಳ್ಳಲಿದೆ. ಸದನದಲ್ಲಿ ಕದನಕ್ಕೆ ಆಡಳಿತ ಮತ್ತು ವಿಪಕ್ಷ ಸಜ್ಜಾಗಿದ್ದು, ಮೊದಲ ದಿನದಂದೇ ಆಡಳಿತ ಪಕ್ಷಗಳ ವೈಫಲ್ಯಗಳನ್ನು ಗಮನ ಸೆಳೆಯುವ ನಿಟ್ಟಿನಲ್ಲಿ ವಿಪಕ್ಷಗಳು ಬಾಣ ಪ್ರಯೋಗ ಮಾಡಲು ಮುಂದಾಗಿದೆ. ರಾಜ್ಯ ಸರ್ಕಾರದ ವಿರುದ್ದ ಸಾಲು ಸಾಲು ಆರೋಪಗಳು ಕೇಳಿ ಬಂದಿದ್ದು, ಈ ಎಲ್ಲಾ ಆರೋಪ ಹಾಗೂ ಅನುದಾನ ವಿಚಾರವಾಗಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಕಮಲ-ದಳ ಸಜ್ಜಾಗಿದೆ.

ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಜೆಡಿಎಸ್ ವಿರೋಧ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದಲ್ಲಿ ಇಂದು ಬೆಳಿಗ್ಗೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌, ಸಚಿವ ಸಂಪುಟ ಮತ್ತು ಈ ಸರಕಾರ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ ಎಂದು ಆಕ್ಷೇಪಿಸಿದ್ದಾರೆ.

Legislative Session BJP And JDS Protest Against The State Government

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆದ ಕಾಲ್ತುಳಿತ ಪ್ರಕರಣದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಗೃಹಸಚಿವರು, ಸಚಿವರು ಜವಾಬ್ದಾರಿ ತೆಗೆದುಕೊಳ್ಳಬೇಕಿತ್ತು. ಅದನ್ನು ಬಿಟ್ಟು ಅಮಾಯಕ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಅಮಾನತು ಮಾಡಿದ್ದಾರೆ ಎಂದು ಟೀಕಿಸಿದರು. ಇವರ ಹುಳುಕು ಮುಚ್ಚಿ ಹಾಕಿಕೊಳ್ಳುವ ಸಲುವಾಗಿ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡರು ಎಂದು ಆರೋಪಿಸಿದರು.

ರಸಗೊಬ್ಬರ ಕೊರತೆಯಿಂದ ರೈತರು ರಾಜ್ಯದಲ್ಲಿ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಪರಿಹಾರ ನೀಡುತ್ತಿಲ್ಲ. ಇದರ ಕುರಿತು ಚರ್ಚೆಯೂ ಆಗುತ್ತಿಲ್ಲ, ಈ ಎಲ್ಲ ವಿಷಯಗಳನ್ನು ಸದನದಲ್ಲಿ ಕೈಗೆತ್ತಿಕೊಳ್ಳಲು ತೀರ್ಮಾನಿಸಿದ್ದೇವೆ. ಸಾಂಕೇತಿಕವಾಗಿ ಎರಡೂ ಪಕ್ಷಗಳ ಶಾಸಕರು ಹೋರಾಟ ಮಾಡಿದ್ದೇವೆ ಎಂದು ವಿವರಿಸಿದರು.

ಇವೆಲ್ಲ ವಿಷಯಗಳನ್ನು ಸದನದ ಒಳಗೆ ಪ್ರಸ್ತಾಪಿಸುತ್ತೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಹೊಣೆಗೇಡಿ ಸರಕಾರ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಆಗ್ರಹಿಸುತ್ತೇವೆ ಎಂದು ತಿಳಿಸಿದರು. ‌ ಇಂದಿನಿಂದ ಆರಂಭವಾಗುವ ಅಧಿವೇಶನದಲ್ಲಿ ಈ ಸರಕಾರಕ್ಕೆ ಚಾಟಿ ಬೀಸುವ ನಿಟ್ಟಿನಲ್ಲಿ ಯಾವ್ಯಾವ ವಿಚಾರಗಳನ್ನು ಸದನದಲ್ಲಿ ಚರ್ಚಿಸಬೇಕು ಎಂಬ ವಿಷಯವನ್ನು ಚರ್ಚಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.

ಸದನ 15- 20 ದಿನ ನಡೆಯಬೇಕಿತ್ತು. 8-9 ದಿನಗಳಿಗೆ ಸೀಮಿತ ಮಾಡಿದ್ದಾರೆ. ಸರಕಾರವು ಕಾಟಾಚಾರಕ್ಕೆ ಅಧಿವೇಶನ ನಡೆಸುತ್ತಿದೆ ಎಂದು ಟೀಕಿಸಿದರು. ರೈತರ ಸಮಸ್ಯೆಯನ್ನು ವಿಶೇಷವಾಗಿ ತೆಗೆದುಕೊಳ್ಳುತ್ತೇವೆ. ಸಿದ್ದರಾಮಯ್ಯನವರ ಸರಕಾರವು ಉತ್ತರ ಕರ್ನಾಟಕಕ್ಕೆ ಯಾವ ರೀತಿ ಅನ್ಯಾಯ ಮಾಡುತ್ತಿದೆ ಎಂಬ ಕುರಿತು ಚರ್ಚೆ ಮಾಡುತ್ತೇವೆ. ರಾಜ್ಯದಲ್ಲಿ ಜನವಿರೋಧಿ, ಬಡವರ ವಿರೋಧಿ, ರೈತ ವಿರೋಧಿ, ಭ್ರಷ್ಟಾಚಾರಿ ಸರಕಾರ ಇದೆ. ಇಂಥ ಕಾಂಗ್ರೆಸ್ ಸರಕಾರಕ್ಕೆ ಚಾಟಿ ಬೀಸುವ ಕೆಲಸ ಮಾಡಲಿದ್ದೇವೆ ಎಂದರು.

ಈ ವೇಳೆ ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಮಾಜಿ ಸಚಿವರು, ಬಿಜೆಪಿ- ಜೆಡಿಎಸ್ ಪಕ್ಷದ ಶಾಸಕರು, ವಿಧಾನಪರಿಷತ್ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+