Get Updates
Get notified of breaking news, exclusive insights, and must-see stories!

ಕರ್ನಾಟಕದಲ್ಲಿ ಅಸ್ಪೃಶ್ಯತೆ ಜೀವಂತವಾಗಿದೆ: ಶಾಸಕಾಂಗ ಸಮಿತಿ ವರದಿಯಲ್ಲಿ ಹಲವು ಆಘಾತಕಾರಿ ಮಾಹಿತಿ ಬಹಿರಂಗ

ಕರ್ನಾಟಕದ ಹಲವಾರು ಭಾಗಗಳಲ್ಲಿ ಅಸ್ಪೃಶ್ಯತೆ ಇನ್ನೂ ಪ್ರಚಲಿತದಲ್ಲಿದೆ ಎಂದು ಶಾಸಕಾಂಗ ಸಮಿತಿಯು ತನ್ನ ವರದಿಯಲ್ಲಿ ಹೇಳಿದ್ದು, ರಾಜ್ಯದಲ್ಲಿ ಸಾಮಾಜಿಕ ಬಹಿಷ್ಕಾರದ ಅಮಾನವೀಯ ಆಚರಣೆಯು ಇನ್ನೂ ಜೀವಂತವಾಗಿದೆ ಎಂದು ಹೇಳಿದೆ.

ಸಮಿತಿಯು ಎಸ್‌ಸಿ/ಎಸ್‌ಟಿ ವರ್ಗಗಳಿಗೆ ನೀಡಲಾದ 2.5 ಲಕ್ಷ ಕೋಟಿ ರೂಪಾಯಿಗಳಲ್ಲಿ ಎಷ್ಟು ತಲುಪಿದೆ ಎನ್ನುವ ಬಗ್ಗೆ ಪ್ರಶ್ನೆ ಮಾಡಿದೆ. ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಹಣವನ್ನು ಸರಿಯಾಗಿ ಬಳಕೆ ಮಾಡುವುದನ್ನು ಖಚಿತಪಡಿಸಿಕೊಳ್ಳಲು ಹೊಸ ಕಾರ್ಯವಿಧಾನ ರೂಪಿಸಲು ಕೋರಿದೆ.

 Legislature Committee Report Reveals Ongoing Practice of Untouchability in Karnataka

ಮಳವಳ್ಳಿ ಕಾಂಗ್ರೆಸ್ ಶಾಸಕ ಪಿ.ಎಂ.ನರೇಂದ್ರಸ್ವಾಮಿ ನೇತೃತ್ವದ ಪರಿಶಿಷ್ಟ ಜಾತಿ/ಪಂಗಡಗಳ ಕಲ್ಯಾಣ ಸಮಿತಿಯು ತನ್ನ ಮಧ್ಯಂತರ ವರದಿಯನ್ನು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಬುಧವಾರ ಮಂಡಿಸಿತು.

ಸಮಿತಿ ಹೇಳಿದ್ದೇನು?

"ಇಂದಿಗೂ, ಹಲವಾರು ಸ್ಥಳಗಳಲ್ಲಿ, ಅಸ್ಪೃಶ್ಯತೆ ಆಚರಣೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲಾಗಿಲ್ಲ" ಎಂದು ಸಮಿತಿಯು ವರದಿಯಲ್ಲಿ ಹೇಳಿದೆ.

ವರದಿಯ ಪ್ರಕಾರ ಕರ್ನಾಟಕದಲ್ಲಿ ಎಸ್‌ಸಿ/ಎಸ್‌ಟಿ ವರ್ಗದ ಜನಸಂಖ್ಯೆ 1.8 ಎನ್ನಲಾಗಿದೆ. 2013 ರಿಂದ, ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ (SCSP-TSP) ಅಡಿಯಲ್ಲಿ ಎಸ್‌ಸಿ/ಎಸ್‌ಟಿ ವರ್ಗಗಳಿಗೆ ಸರ್ಕಾರ 2.5 ಲಕ್ಷ ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ವರದಿಯಲ್ಲಿ ಹೇಳಿದೆ.

ಆದರೆ ಈ ಹಣ ಫಲಾನುಭವಿಗಳನ್ನು ತಲುಪುತ್ತಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ. ಈ ಹಣದ ಸಮರ್ಪಕ ಬಳಕೆಯಾಗುವಂತೆ ನೋಡಿಕೊಳ್ಳಲು, ಹೊಸ ಕಾರ್ಯ ವಿಧಾನದ ಅಗತ್ಯವಿದೆ ಎಂದು ಹೇಳಲಾಗಿದೆ.

ನಕಲಿ ಎಸ್‌ಸಿ/ಎಸ್‌ಟಿ ಜಾತಿ ಪ್ರಮಾಣ ಪತ್ರಗಳ ಸಮಸ್ಯೆ ಮುಂದುವರಿದಿದ್ದು, 175 ತಹಶೀಲ್ದಾರ್‌ಗಳ ವಿರುದ್ಧ ಪ್ರಕರಣಗಳಿವೆ ಎಂದು ಸಮಿತಿ ಹೇಳಿದೆ. ಕುರುಬರು, ಬ್ರಾಹ್ಮಣರು, ವೀರಶೈವರು, ಮುದಲಿಯಾರುಗಳು ಮತ್ತು ಇತರರು ಎಸ್‌ಸಿ/ಎಸ್‌ಟಿ ಪ್ರಮಾಣಪತ್ರಗಳನ್ನು ಪಡೆದಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.

ವಿದ್ಯಾರ್ಥಿಗಳ ನಿಗೂಢ ಸಾವು

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿ (ಕೆಆರ್‌ಇಐಎಸ್) ನಡೆಸುತ್ತಿರುವ ಶಾಲೆಗಳಲ್ಲಿ ಕಳೆದ ಐದು ವರ್ಷಗಳಲ್ಲಿ 92 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಸಮಿತಿಯು ಆತಂಕ ವ್ಯಕ್ತಪಡಿಸಿದೆ. ಇದರಲ್ಲಿ 29 ವಿದ್ಯಾರ್ಥಿಗಳು ಮನೆಗೆ ಹೋಗುವ ಸಂದರ್ಭದಲ್ಲಿ ನಿಗೂಢ ಪರಿಸ್ಥಿತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ. ಈ ಸಾವುಗಳ ಬಗ್ಗೆ ಸರಿಯಾದ ತನಿಖೆ ನಡೆದಿಲ್ಲ ಎಂದು ನರೇಂದ್ರಸ್ವಾಮಿ ಹೇಳಿದ್ದಾರೆ.

ಸಮಿತಿಯು ತನ್ನ ವರದಿಯಲ್ಲಿ, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯವು ಸಾವಿನ ಬಗ್ಗೆ ತನಿಖೆ ನಡೆಸಿದೆಯೇ ಅಥವಾ ಇಲ್ಲವೇ ಎಂಬುದರ ಕುರಿತು ಪೋಷಕರಿಂದ ಮಾಹಿತಿ ಪಡೆಯಲು ಸರ್ಕಾರಕ್ಕೆ ಶಿಫಾರಸು ಮಾಡಿದೆ.

206 ಶಾಲೆಗಳಲ್ಲಿ ಕೇವಲ 93 ಮಹಿಳಾ ವಾರ್ಡನ್‌ಗಳು ಮಾತ್ರ ಬಾಲಕಿಯರಿಗೆ ಲಭ್ಯರಿದ್ದಾರೆ ಎಂದಿರುವ ಸಮಿತಿಯು ಕೆಆರ್‌ಇಐಎಸ್ ಶಾಲೆಗಳಲ್ಲಿ ಬಾಲಕಿಯರ ಸುರಕ್ಷತೆಯ ಬಗ್ಗೆ ಆತಂಕ ವ್ಯಕ್ತಪಡಿಸಿದೆ. ಪ್ರತಿ ಶಾಲೆಗೆ ಮಹಿಳಾ ಹೋಂಗಾರ್ಡ್‌ಗಳನ್ನು ನೇಮಿಸುವಂತೆ ಸರ್ಕಾರಕ್ಕೆ ಕೇಳಿದೆ.

ಸಮಾಜ ಕಲ್ಯಾಣ ಇಲಾಖೆಯು ನಡೆಸುತ್ತಿರುವ ಹಲವಾರು ವಸತಿ ನಿಲಯಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕೆಟ್ಟ ಪರಿಸ್ಥಿತಿಯಲ್ಲಿವೆ ಎಂದು ತಿಳಿಸಿದೆ. ಸರಿಯಾದ ಶೌಚಾಲಯಗಳು ಮತ್ತು ಸ್ನಾನಗೃಹಗಳಿಲ್ಲದೆ, ವಿದ್ಯಾರ್ಥಿಗಳು ಬಯಲಿನಲ್ಲಿ ಸ್ನಾನ ಮಾಡುತ್ತಿದ್ದಾರೆ ಎಂದು ವರದಿ ಹೇಳಿದೆ.

ಹೊಸ ಸಿಎಲ್-2, ಸಿಎಲ್-7, ಸಿಎಲ್‌-9 ಮತ್ತು ಸಿಎಲ್‌-11 ಮದ್ಯದ ಪರವಾನಗಿಗಳನ್ನು ನೀಡಲು ಮತ್ತು ಎಸ್‌ಸಿ / ಎಸ್‌ಟಿ ವರ್ಗಕ್ಕೆ ಮೀಸಲಾತಿ ನೀಡಲು ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+