ವಿಧಾನಮಂಡಲ ಜಂಟಿ ಅಧಿವೇಶನ: ಬಿಜೆಪಿ ಸರ್ಕಾರ ಎಲ್ಲರನ್ನು ಒಳಗೊಂಡ ಅಭಿವೃದ್ಧಿ ನೀತಿ ಅನುಸರಿಸಿದೆ: ಗೆಹ್ಲೋಟ್
ಕರ್ನಾಟಕದಲ್ಲಿ ಇಂದಿನಿಂದ (ಫೆ.10) 15 ನೇ ವಿಧಾನಮಂಡಲ ಜಂಟಿ ಅಧಿವೇಶನ ಆರಂಭವಾಯಿತು. ಉಭಯ ಸದನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಮಾತನಾಡಿದರು.
ಬೆಂಗಳೂರು, ಜನವರಿ 10: ಕರ್ನಾಟಕದಲ್ಲಿ ಇಂದಿನಿಂದ (ಫೆ.10) 15 ನೇ ವಿಧಾನಮಂಡಲ ಜಂಟಿ ಅಧಿವೇಶನ ಆರಂಭವಾಯಿತು. ಉಭಯ ಸದನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಮಾತನಾಡಿದರು.
ರಾಜ್ಯದಲ್ಲಿ ಆದ ಅಭಿವೃದ್ಧಿ, ನೀರಾವರಿ ಯೋಜನೆ, ಮೀಸಲಾತಿ ಸೇರಿದಂತೆ ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಿದ ಅವರು, ಕರ್ನಾಟಕ ಸರ್ಕಾರ ಎಲ್ಲರನ್ನು ಒಳಗೊಂಡ ಅಭಿವೃದ್ಧಿ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ಕಾರ್ಯ ಸಾಧನೆಗಳನ್ನು ಶ್ಲಾಘಿಸಿದರು.
ರಾಜ್ಯದಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವ ಜೊತೆಗೆ ಅದಕ್ಕಾಗಿ ಅಂದಾಜು 5,300 ಕೋಟಿ ಹಣ ನೀಡಲಾಯಿತು. ಇನ್ನೂ ಕೃಷ್ಣ ಮೇಲ್ದಂಡೆ ಯೋಜನೆ ಹಂತ ಮೂರರ ಅನುಷ್ಠಾನಕ್ಕೆ ಕ್ರಮ ವಹಿಸುತ್ತಿರುವುದು ಏರಿದಂತೆ ರಾಜ್ಯದ ಬಯಲು ಸೀಮೆ ಭಾಗದ ಜಿಲ್ಲೆಗಳ 527 ಕೆರೆಗಳಿಗೆ ಎತ್ತಿನ ಹೊಳೆ ಯೋಜನೆಯಡಿ ನೀರು ತುಂಬಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರದ ಕಾರ್ಯ ತಿಳಿಸಿದರು.
ಭಾರತೀಯ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಹೆಸರಿನಲ್ಲಿ ಸೈನಿಕ ಶಾಲೆ ಆರಂಭಿಸಲಾಗಿದೆ. ಇನ್ನು ಚಾಮರಾಜನಗರ ಜಿಲ್ಲೆಯಲ್ಲಿ ವಿಶೇಷ ಆಸ್ಪತ್ರೆಯೊಂದನ್ನು ಸ್ಥಾಪಿಸಿ ಜನರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ನೀಡಲು ಸರ್ಕಾರ ತೀರ್ಮಾನಿಸಿದೆ. ಅದೇ ರೀತಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಆಸ್ಪತ್ರೆಗಳನ್ನು ತೆರೆಲಾಗಿದೆ.

ಎಸ್‌ಸಿ, ಎಸ್‌ಟಿ ವರ್ಗಕ್ಕೆ ಉಚಿತ ವಿದ್ಯುತ್
ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿ ವರ್ಗದವ ಬಿಪಿಎಲ್ ಪಡಿತರ ಫಲಾನುಭವಿಗಳಿಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಗಿದ್ದು, ಸಮಾಜ ಕಲ್ಯಾಣ ಇಲಾಖೆ ನಿಗಮದಲ್ಲಿ ಮಹಿಳೆಯರಿಗೆ ಶೇಕಡಾ 50 ಪ್ರತಿಶತ ದಷ್ಟು ಮೀಸಲಾತಿ ನೀಡಲಾಗಿದೆ. ಇದೆಲ್ಲವನ್ನು ನೋಡಿದರೆ ಬಿಜೆಪಿ ಸರ್ಕಾರ ಎಲ್ಲರನ್ನು ಒಳಗೊಂಡ ಅಭಿವೃದ್ಧಿ ನೀತಿ ಅನುಸರಿಸುತ್ತಿದೆ ಎಂದು ತಿಳಿದು ಬರುತ್ತದೆ ಎಂದರು.

480 ಕೋಟಿ ಹಣದಲ್ಲಿ ವಿದ್ಯಾರ್ಥಿ ವೇತನ ವಿತರಣೆ
ರೈತರಿಗೆ ಅನುಕೂಲವಾಗಲೆಂದು ರೈತಶಕ್ತಿ ಯೋಜನೆ ಅಡಿಯಲ್ಲಿ ಪ್ರತಿ ಎಕರೆಗೆ 250ರೂ. ನಂತೆ ಡೀಸೆಲ್ ಸಹಾಯಧನ ನೀಡಿದೆ. 160 ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ಲೋಕಾರ್ಪಣೆ ಆಗಿವೆ. ಕೃಷಿ ಸಂಜೀವಿನಿ ಯೋಜನೆಯಡಿ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯಕ್ಕೆ ಸೇವೆ ನೀಡುತ್ತಿವೆ.
ನಾಡಿನ ರೈತರೆಲ್ಲರನ್ನು ಸಧೃಡಗೊಳಿಸಲು ಕೃಷಿ ಪರವಾದ ಹಲವು ಕಾರ್ಯಕ್ರಮಗಳನ್ನು ಜಾರಿ ತಂದಿದೆ. ರೈತರು, ನೇಕಾರರು, ಮೀನುಗಾರರ ಮಕ್ಕಳ ಶಿಕ್ಷಣ ಉತ್ತೇಜನಕ್ಕಾಗಿ ಅವರಿಗೆ ವಿದ್ಯಾನಿಧಿ ಯೋಜನೆ ವಿಸ್ತರಣೆ ಮಾಡಲಾಗಿದೆ. ಸರ್ಕಾರ 10 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ 480 ಕೋಟಿಗೂ ಹೆಚ್ಚು ಹಣವನ್ನ ವಿದ್ಯಾರ್ಥಿ ವೇತನವಾಗಿ ನೀಡಿದೆ ಎಂದು ವಿವರಿಸಿದರು.

ರಾಜ್ಯದಲ್ಲಿ ವಿಮಾನಯಾನಕ್ಕೆ ಆದ್ಯತೆ
ಉದ್ಯೋಗ ಒದಗಿಸಲು ರೋಜ್ಗಾರ್ ನೀತಿ ಜಾರಿಗೆ ತಂದಿರುವ ಸರ್ಕಾರ ರಾಜ್ಯದಲ್ಲಿ ವಿದೇಶಿ ಬಂಡವಾಳ ಹರಿವನ್ನು ಹೆಚ್ಚಿಸಲು ಶ್ರಮಿಸಿದೆ. ಬಂಡವಾಳದಾರರನ್ನು ರಾಜ್ಯಕ್ಕೆ ಆಹ್ವಾನಿದೆ. ವಿಮಾನಯಾನ ಅಭಿವೃದ್ಧಿಗೆ ನಿಲ್ದಾಣದ ನಿರ್ಮಾಣದಂತ ಕೆಲಸಗಳಿಗೆ ಆದ್ಯತೆ ನೀಡಿದೆ. ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಸಜ್ಜಾಗಿದೆ. ಉತ್ತರ ಕರ್ನಾಟಕ ಭಾಗದ ವಿಜಯಪುರ, ಹಾಸನ ವಿಮಾಣ ನಿಲ್ದಾಣಗಳ ಕಾಮಗಾರಿ ಬಹುತೇಕ ಮುಗಿದಿದೆ. ಕಲ್ಯಾಣ ಕರ್ನಾಟಕದ ರಾಯಚೂರು ವಿಮಾನ ನಿಲ್ದಾಣ ಸ್ಥಾಪನೆ ಕೆಲಸ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದರು.

ಅಮೃತ ಕಾಲದಲ್ಲಿ ರಾಜ್ಯ ಅಭಿವೃದ್ಧಿಯತ್ತ: ವಿಶ್ವಾಸ
150 ಕೋಟಿ ರೂ. ವೆಚ್ಚದಲ್ಲಿ 1 ಲಕ್ಷದ 614 ವಿದ್ಯಾರ್ಥಿನಿಯರಿಗೆ ಓಬವ್ವ ಆತ್ಮ ರಕ್ಷಣಾ ಕಲೆ ತರಬೇತಿ ನೀಡಲಾಗುತ್ತಿದೆ. ವಿದ್ಯಾರ್ಥಿಗಳಿಗಾಗಿ ಒಂದು ಸಾವಿರ ಬಹುಮಹಡಿ ಹಾಸ್ಟೆಲ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರದ ಅನುದಾನದಲ್ಲಿ ಸುಮಾರು 268.98 ಕೋಟಿ ರೂ. ವೆಚ್ಚದಲ್ಲಿ 4244 ಹೊಸ ಅಂಗನವಾಡಿ ಕೇಂದ್ರ ಸ್ಥಾಪನೆಗೆ ಅವಕಾಶ ನೀಡಲಾಗಿದೆ. ಒಟ್ಟಾರೆಯಾಗಿ ಪ್ರಧಾನಮಂತ್ರಿಗಳು ಮುಂದಿನ 25 ವರ್ಷಕ್ಕೆ ಅಮೃತ ಕಾಲದಲ್ಲಿ ಹಾಕಿಕೊಟ್ಟ ಪ್ರಗತಿಪಥದಲ್ಲಿ ಕರ್ನಾಟಕ ಯಶಸ್ವಿಯಾಗಿ ಮುಂದುವರಿಯುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.












Click it and Unblock the Notifications