ಡಿ. 4 ರಿಂದ 15 ರವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ
ಬೆಂಗಳೂರು, ನವೆಂಬರ್ 09: ವಿಧಾನ ಮಂಡಲ ಉಭಯ ಸದನಗಳ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್ 04 ರಿಂದ 15 ರ ವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತಿರ್ಮಾನಿಸಲಾಗಿದೆ.

ಈ ಕುರಿತು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತಿರ್ಮಾನವನ್ನ ತೆಗೆದುಕೊಂಡಿದ್ದು, ಸಚಿವ ಸಂಪುಟ ಸಭೆಯ ಬಳಿಕ ಸಚಿವ ಹೆಚ್ ಕೆ ಪಾಟೀಲ್ ಸುದ್ದಿಗೋಷ್ಠಿ ನಡೆಸುವ ಮೂಲಕ ಬೆಳಗಾವಿಯಲ್ಲಿ ಒಟ್ಟು ಹತ್ತು ದಿನಗಳ ಕಾಲ ವಿಧಾನ ಮಂಡಲ ಅಧಿವೇಶನ ಕಲಾಪವನ್ನು ನಡೆಸಲು ಸಂಪುಟ ನಿರ್ಧರಿಸಲಾಗಿದೆ ಎಂದರು.
ಇನ್ನೂ ಕ್ಯಾಬಿನೆಟ್ ಸಭೆಯಲ್ಲಿ ಬರಗಾಲದ ಬಗ್ಗೆ ವಿಸ್ತೃತ ವಾಗಿ ಚರ್ಚೆ ಮಾಡಿದ್ದೇವೆ. ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ ಮಾಡಿದ್ದೇವೆ, ಆದರೆ ಇದುವರೆಗೂ ಕೇಂದ್ರ ಸರ್ಕಾರ ನಯಾ ಪೈಸೆ ಬಿಡುಗಡೆ ಮಾಡಿಲ್ಲ. ಇವತ್ತಿನ ಸಭೆಯಲ್ಲಿ ಕೇಂದ್ರ ಸರ್ಕಾರದ ನಡೆ ವಿರುದ್ಧ ಖಂಡನೆ ವ್ಯಕ್ತ ಪಡಿಸಿದ್ದೇವೆ. ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರ ಗಳಲ್ಲಿ ಬರಗಾಲ ಪರಿಹಾರದ ಕೆಲಸಗಳು ಶುರುವಾಗಬೇಕು. ಈಗಾಗಲೇ 700-800 ಕೋಟಿ ಜಿಲ್ಲಾಧಿಕಾರಿ ಗಳ ಅಕೌಂಟ್ ನಲ್ಲಿದೆ, ಬರಗಾಲ ನಿರ್ವಹಣೆಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಸಿಎಂ ಸಚಿವರಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಿದರು.
ಹಣಕಾಸು ರಿಲೀಸ್ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ವಿರೋಧ ಪಕ್ಷಗಳು ಒತ್ತಾಯ ಮಾಡುತ್ತಿಲ್ಲ. ಆದರೆ ಬದಲಾಗಿ ಅನವಶ್ಯಕವಾಗಿ ಸಮಯ ಕಳೆಯಲು ಬಿಜೆಪಿಯವರು ಪ್ರವಾಸ ಮಾಡುತ್ತಿದ್ದಾರೆ. ನೈಜವಾಗಿ ಸಂಸದರ ಬಳಿ ಕೇಂದ್ರದ ಬಳಿ ಒತ್ತಡ ತರಬೇಕು. ಪರಿಹಾರ ಬಿಡುಗಡೆ ಮಾಡುವುದು ಕೇಂದ್ರ ಸರ್ಕಾರದ ಕರ್ತವ್ಯ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.
ಕನಕಪುರ ತಾಲೂಕಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲು 10.38 ಕೋಟಿ ರೂ. ಅನುಮೋದನೆಗೆ ಸಂಪುಟ ಒಪ್ಪಿಗೆ ಸೂಚಿಸಿದೆ. ಇನ್ಫೋಸಿಸ್ ಕಂಪನಿ ವತಿಯಿಂದ ಸಿಎಸ್ಆರ್ ಫಂಡ್ ನಿಂದ ಕನಕಪುರದ ತಾಯಿ ಆಸ್ಪತ್ರೆ ನಿರ್ಮಿಸಲಾಗುವುದು ಎಂದು ಹೆಚ್ ಕೆ ಪಾಟೀಲ್ ಹೇಳಿದರು.
ಮಹತ್ವಾಕಾಂಕ್ಷೆ ತಾಲೂಕುಗಳ 73 ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಲ್ಲಿ ಹಾಗೂ 50 ಆದರ್ಶ ಶಾಲೆಗಳಲ್ಲಿ 20 ಕೋಟಿ ವೆಚ್ಚದಲ್ಲಿ ಆವಿಷ್ಕಾರ ಮಾಡಲಾಗಿದ್ದು, ಇನ್ನೋವೇಟಿವ್ ಲ್ಯಾಬ್ ಗಳ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಇನ್ನೂ ವಾಯುವ್ಯ ಸಾರಿಗೆಯಲ್ಲಿ16.20 ಕೋಟಿ ವೆಚ್ಚದಲ್ಲಿ 45 ಬಸ್ ಗಳ ಖರೀದಿಗೆ ಅನುಮೋದನೆ ನೀಡಿದ್ದು, ಹುಬ್ಬಳ್ಳಿ ಬಿ.ಆರ್.ಟಿಗೆ 45 ಕೋಟಿ ರೂ. ವೆಚ್ಚದಲ್ಲಿ 100 ಬಸ್ ಖರೀದಿಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ.












Click it and Unblock the Notifications