ಬೆಳಗಾವಿ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ
ಬೆಳಗಾವಿ, ಸೆ.26: ಮುಂದಿನ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನವೆಂಬರ್ 11ರಿಂದ ನಡೆಸಲು ನಿರ್ಧರಿಸಲಾಗಿದೆ ಎಂದು ವಿಧಾನ ಪರಿಷತ್ತಿನ ಸಭಾಪತಿ ಡಿಹೆಚ್ ಶಂಕರಮೂರ್ತಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಚಳಿಗಾಲದ ಅಧಿವೇಶನ ಕುರಿತು ಈಗಾಗಲೇ ಸದನದ ಕಲಾಪಗಳ ಸಮಿತಿಯು ಮುಖ್ಯಮಂತ್ರಿಗಳೊಂದಿಗೆ ಸಭೆಯನ್ನು ನಡೆಸಿದೆ. ನ. 11 ರಿಂದ 10 ದಿನಗಳ ಕಾಲ ನಡೆಸಲು ತಾತ್ಕಾಲಿಕವಾಗಿ ನಿರ್ಧರಿಸಲಾಗಿದೆ ಎಂದರು.

ರಾಜ್ಯ ಸರ್ಕಾರ ಈ ಕುರಿತು ಅಂತಿಮ ನಿರ್ಣಯ ಕೈಗೊಂಡು ವಿಧಾನ ಮಂಡಲದ ಉಭಯ ಸದನಗಳ ಸಭಾಪತಿಗಳೊಂದಿಗೆ ಚರ್ಚಿಸಿದ ನಂತರ ಅಂತಿಮ ನಿರ್ಣಯ ಕೈಗೊಳ್ಳಲಿದೆ ಎಂದರು.
ಪ್ರತಿವರ್ಷ 60 ದಿನಗಳ ಕಾಲ ಸದನ ನಡೆಸಲು ಈಗಾಗಲೇ ಮಸೂದೆ ಅಂಗೀಕರಿಸಲಾಗಿದೆ. ಪ್ರಸಕ್ತ ವರ್ಷ 32 ದಿನ ಅಧಿವೇಶನ ನಡೆದಿದ್ದು, ಬರುವ ಡಿಸೆಂಬರ್ ಅಂತ್ಯದೊಳಗೆ ಇನ್ನೂ 28 ದಿನಗಳ ಕಾಲ ಅಧಿವೇಶನ ನಡೆಸಬೇಕಿದೆ ಎಂದರು. ಬಾಕಿ ಉಳಿದಿರುವ 28 ದಿನಗಳಲ್ಲಿ 10 ದಿನ ಬೆಳಗಾವಿಯಲ್ಲಿ , ಉಳಿದ 18 ದಿನ ಬೆಂಗಳೂರಿನಲ್ಲಿ ಅಧಿವೇಶನ ನಡೆಸುವ ಕುರಿತು ಚಿಂತನೆ ನಡೆದಿದೆ. ಈ ಕುರಿತು ಮುಖ್ಯಮಂತ್ರಿ ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ಶಂಕರಮೂರ್ತಿ ಹೇಳಿದರು.
ನವೆಂಬರಿನಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸುವ ಕುರಿತು ವಿಧಾನ ಪರಿಷತ್ ಸಭಾಪತಿ ಶಂಕರಮೂರ್ತಿ ಅವರು ಅಧಿಕಾರಿಗಳ ಜತೆ ಭಾವಿ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಅವರು, ಅಧಿವೇಶನ ಸುಗಮವಾಗಿ ನಡೆಸಲು ವಿಧಾನ ಮಂಡಲದ ಸಚಿವಾಲಯ ಹಾಗೂ ಜಿಲ್ಲಾ ಆಡಳಿತ ಸಮನ್ವಯದಿಂದ ಈಗಿಂದಲೇ ಸಿದ್ಧತಾ ಕಾರ್ಯಗಳನ್ನು ಪ್ರಾರಂಭಿಸಬೇಕು ಎಂದು ಸೂಚಿಸಿದರು.
ಈ ಅಧಿವೇಶನಕ್ಕೆ ಆಗಮಿಸುವ ಶಾಸಕರು, ವಿಧಾನ ಪರಿಷತ್ ಸದಸ್ಯರು, ಅಧಿಕಾರಿಗಳು, ಗಣ್ಯರು ಹಾಗೂ ಇತರರಿಗೆ ಸೂಕ್ತವಾದ ವಸತಿ, ಊಟ ಹಾಗೂ ಸಾರಿಗೆ ವ್ಯವಸ್ಥೆ ಮಾಡುವ ಕುರಿತು ಸಭೆಯಲ್ಲಿ ಚರ್ಚಿಸಿದ ಅವರು, ಅಧಿಕಾರಿಗಳಿಗೆ ಕೆಲ ಸೂಚನೆಗಳನ್ನು ನೀಡಿದರು. ಅಧಿವೇಶನದ ಸಂದರ್ಭದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ, ನಗರದ ಸ್ವತ್ಛತೆ, ಅಧಿವೇಶನ ಕಾಲಕ್ಕೆ ನಿರಂತರ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅವರು ಹೇಳಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಎನ್ ಜಯರಾಂ, ವಿಧಾನ ಪರಿಷತ್ ಕಾರ್ಯದರ್ಶಿ ಶ್ರೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಚಂದ್ರಗುಪ್ತ, ಮಹಾನಗರಸಭೆಯ ಆಯುಕ್ತ ಪ್ರಿಯಾಂಕಾ ಫ್ರಾನ್ಸಿಸ್ ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications