MUDA Scam Row: "ನೈತಿಕೆ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಲಿ"
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೀಗ ಮುಡಾ ಹಗರಣದಲ್ಲಿ ತೀವ್ರ ಸಂಕಷ್ಟ ಎದುರಾಗಿದೆ. ಈ ನಡುವೆ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಡ ಹೆಚ್ಚಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕೆ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ. ಈ ಸಂಬಂಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಸಹ ಟ್ವೀಟ್ ಮಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಹೈಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್‌ನಲ್ಲಿ ಘನತೆವೆತ್ತ ರಾಜ್ಯಪಾಲರು ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ನೀಡಿದ್ದ ಅನುಮತಿ ಕಾನೂನು ಬದ್ಧವಾಗಿದೆ ಎಂದು ಮಾನ್ಯ ಹೈಕೋರ್ಟ್ ರಾಜ್ಯಪಾಲರ ನಿರ್ಧಾರವನ್ನು ಎತ್ತಿಹಿಡಿದಿದೆ. ಇದು ಸತ್ಯಕ್ಕೆ ಸಂದ ಜಯವಾಗಿದೆ ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದಾಗಿನಿಂದ ಮುಖ್ಯಮಂತ್ರಿ, ಸಚಿವರು, ಶಾಸಕರು ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಕಳೆದ ಹಲವು ದಿನಗಳಿಂದ ರಾಜ್ಯಪಾಲರನ್ನು ಹಾಗೂ ರಾಜಭವನವನ್ನು ನಿಂದಿಸಿದ್ದರು. ಇದೀಗ ಮಾನ್ಯ ಹೈಕೋರ್ಟ್ ನೀಡಿರುವ ತೀರ್ಪು ಇಡೀ ಕಾಂಗ್ರೆಸ್ ಪಕ್ಷಕ್ಕೆ ಛಡಿ ಏಟು ಕೊಟ್ಟಿದೆ ಎಂದು ಹೇಳಿದ್ದಾರೆ. ಅಲ್ಲದೇ ಇನ್ನಾದರೂ ಅನಗತ್ಯವಾಗಿ ರಾಜ್ಯಪಾಲರನ್ನ ನಿಂದಿಸುವುದು ಬಿಟ್ಟು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕೆ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ಘನತೆವೆತ್ತ ರಾಜ್ಯಪಾಲರು ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ @siddaramaiah ನವರ ವಿರುದ್ಧ ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಕಾನೂನುಬದ್ಧವಾಗಿದೆ ಎಂದು ಮಾನ್ಯ ಹೈಕೋರ್ಟ್ ರಾಜ್ಯಪಾಲರ ನಿರ್ಧಾರವನ್ನ ಎತ್ತಿಹಿಡಿದಿದ್ದು, ಇದು ಸತ್ಯಕ್ಕೆ ಸಂದ ಜಯವಾಗಿದೆ.
— R. Ashoka (@RAshokaBJP) September 24, 2024
ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಾಗಿನಿಂದ… pic.twitter.com/NebYp5eotp
ಸುಪ್ರೀಂ ಕೋರ್ಟ್ ಹೇಳಿದ್ದೇನು ?
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೀಡಿದ್ದ ಅನುಮತಿಯನ್ನು ಪ್ರಶ್ನೆ ಮಾಡಿ (ರದ್ದುಪಡಿಸುವಂತೆ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ, ಹೈಕೋರ್ಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿನ್ನಡೆ ಉಂಟಾಗಿದೆ. ರಾಜ್ಯಪಾಲರ ನಿರ್ಧಾರವನ್ನು ಇದೀಗ ಹೈಕೋರ್ಟ್ ಸಹ ಸಮ್ಮತಿ (ತಪ್ಪಿಲ್ಲ) ಎಂದು ಹೇಳಿದೆ. ಈ ಮೂಲಕ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಒಂದೊಮ್ಮೆ ಹೈಕೋರ್ಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೆಲುವು ಸಿಕ್ಕಿದ್ದರೆ, ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರ ಏನು ಇಲ್ಲ.
ರಾಜ್ಯಪಾಲರು ಹಾಗೂ ರಾಜಭವನ ತಪ್ಪು ನಿರ್ಧಾರ ತೆಗೆದುಕೊಂಡಿದೆ ಎಂದು ವಾದ ಮಾಡುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಅವಕಾಶವಿರುತ್ತಿತ್ತು. ಆದರೆ, ಈಗ ಬಂದಿರುವ ತೀರ್ಪು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯ ಹಿನ್ನಡೆಗೂ ಕಾರಣವಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮಧ್ಯಂತರ ಆದೇಶವನ್ನು ಮುಂದುವರಿಸುವುದಕ್ಕೆ ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಹೀಗಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಮುಂದಿನ ಹಂತದಲ್ಲಿ ವಿಚಾರಣೆ ಪ್ರಾರಂಭವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.












Click it and Unblock the Notifications