ಪೊಲೀಸ್ ವಾಹನದಲ್ಲಿ ಗಣೇಶ ಫೋಟೋ ವೈರಲ್: ರಾಜ್ಯ ಸರ್ಕಾರ ವಿರುದ್ಧ ವಿಜಯೇಂದ್ರ ಸಿಡಿಮಿಡಿ
ಬೆಂಗಳೂರು, ಸೆಪ್ಟೆಂಬರ್ 14: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಹಾಗೂ ಗಲಭೆ ಖಂಡಿಸಿ ಕೆಲ ಹಿಂದೂ ಕಾರ್ಯಕರ್ತರು ಬೆಂಗಳೂರಿನ ಟೌನ್ ಹಾಲ್‌ನಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಗಣೇಶನ ವಿಗ್ರಹವನ್ನು ಕೂಡ ತರಲಾಗಿತ್ತು. ಪ್ರತಿಭಟನೆ ಕಾವು ಹೆಚ್ಚಾದಂತೆ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.
ಈ ವೇಳೆ ಪೊಲೀಸರು ಗಣೇಶ ಮೂರ್ತಿಯನ್ನು ಎಲ್ಲಿಡುವುದು ಎಂದು ತೋಚದೆ, ವಿಗ್ರಹವನ್ನು ಪ್ರತಿಭಟನಾ ಸ್ಥಳದಿಂದ ತೆಗೆದುಕೊಂಡು ಹೋಗಿ ಪೊಲೀಸ್ ವಾಹನದ ಸೀಟಿನ ಮೇಲೆ ಕೂರಿಸಿಬಿಟ್ಟಿದ್ದಾರೆ. ಕೈದಿಗಳಂತೆ ಗಣೇಶನ ಮೂರ್ತಿಯು ಪೊಲೀಸರು ವ್ಯಾನ್‌ನಲ್ಲಿರುವ ಫೋಟೋ ಎಲ್ಲೆಡೆ ಆಗುತ್ತಿದೆ. ಈ ಬಗ್ಗೆ ರಾಜ್ಯ ಬಿಜೆಪಿ ಕಿಡಿಕಾರುತ್ತಿದ್ದು, ಪೊಲೀಸರು ಪ್ರತಿಭಟನಾಕಾರರ ಜೊತೆ ಗಣೇಶ ವಿಗ್ರಹವನ್ನು ಕೂಡ ಬಂಧಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಪೊಲೀಸ್ ವಾಹನದಲ್ಲಿ ಗಣೇಶನ ವಿಗ್ರಹ ಫೋಟೋ ವೈರಲ್ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. ಗಣೇಶೋತ್ಸವ ಹಿಂದೂಗಳ ಧಾರ್ಮಿಕ ಶ್ರದ್ಧೆ ಹಾಗೂ ಸಾಂಸ್ಕೃತಿಕ ಸಂಗಮದ ದ್ಯೋತಕ. ಈ ಉತ್ಸವದ ಆಚರಣೆಗೆ ಎಲ್ಲೆ, ಕಟ್ಟುಪಾಡುಗಳನ್ನು ಮೀರಿ ಅಬಾಲವೃದ್ಧರಾದಿಯಾಗಿ ಪ್ರತಿಯೊಬ್ಬರೂ ಸಂಭ್ರಮಿಸುವ ಉತ್ಸವದ ಹಬ್ಬ.
ಹಿಂದೂಗಳ ಧಾರ್ಮಿಕ ಆಚಾರ-ವಿಚಾರಗಳಲ್ಲಿ ಮೊದಲ ಪೂಜೆ ವಿಘ್ನ ನಿವಾರಿಸುವ ವಿನಾಯಕನಿಗೆ ಸಲ್ಲಿಸಲಾಗುತ್ತದೆ. ಈ ಕಾರಣದಿಂದಾಗಿಯೂ ಗಣೇಶನಿಗೆ ಎಲ್ಲಿಲ್ಲದ ಮಹತ್ವ. ಜನರ ಭಾವೊದ್ವೇಗಗಳು ಕಾನೂನು ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರಬಾರದು ಎಂಬುದನ್ನು ಒಪ್ಪಬಹುದಾದರೂ ಅದರ ಹೆಸರಿನಲ್ಲಿ ಅನಗತ್ಯ ಕಿರಿಕಿರಿ ಉಂಟು ಮಾಡುವ ಮಾರ್ಗಸೂಚಿಗಳನ್ನು ಅಳವಡಿಸಿ ಉತ್ಸವ ಆಚರಣೆಯ ಸಡಗರದ ಸ್ವಾತಂತ್ರ್ಯಕ್ಕೆ ತೊಂದರೆ ನೀಡುವುದನ್ನು ಒಪ್ಪಲಾಗದು ಎಂದಿದ್ದಾರೆ.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಿದ್ಧಪಡಿಸುವ ಮಾರ್ಗಸೂಚಿಗಳು ಉದ್ದೇಶಪೂರ್ವಕ ಎಂಬ ಭಾವನೆ ಹಿಂದೂ ಸಮಾಜದಲ್ಲಿ ಬಲವಾಗಿ ಬೇರೂರಿದೆ ಇದಕ್ಕೆ ನಾಗಮಂಗಲದಂತಹ ಘಟನೆ ಸಾಕ್ಷಿಯಾಗಿದೆ, ದುರ್ಘಟನೆ ಉದ್ಭವಿಸುವುದಕ್ಕೆ ಆಸ್ಪದ ನೀಡುವ ನಿಟ್ಟಿನಲ್ಲಿ ಉತ್ಸವ ವಿರೋಧಿ ದುಷ್ಟ ಗುಂಪುಗಳು ಗಣೇಶ ಮೆರವಣಿಗೆ ಸಂದರ್ಭದಲ್ಲಿ ದಾಂಧಲೆ ನಡೆಸಿ ಅಟ್ಟಹಾಸ ಮೆರೆಯುವ ಪರಿಸ್ಥಿತಿಯ ಸೃಷ್ಟಿಗೆ ಕಾನೂನು ಸುವ್ಯವಸ್ಥೆಯ ನಿಷ್ಕ್ರೀಯತೆ ಅವಕಾಶ ಮಾಡಿಕೊಡುತ್ತಿದೆ ಎಂದರು.
ಈ ಸಂಬಂಧವಾಗಿ ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿಯ ಸದಸ್ಯರು ಟೌನ್ ಹಾಲ್ ಬಳಿ ಗಣೇಶ ಮೂರ್ತಿಯೊಂದಿಗೆ ಶಾಂತಿಯುತ ಪ್ರತಿಭಟನೆಗೆ ಮುಂದಾದ ಸಂದರ್ಭದಲ್ಲಿ ಪ್ರತಿಭಟನಾನಿರತರೊಂದಿಗೆ 'ಗಣಪತಿ ಮೂರ್ತಿಯನ್ನೂ ಪೊಲೀಸ್ ವಾಹನದಲ್ಲಿ ಬಂಧಿಸಿಟ್ಟಿದ್ದು' ಹಿಂದೂ ಸಮಾಜದ ಧಾರ್ಮಿಕ ಭಾವನೆಯನ್ನು ಕೆರಳಿಸುವ ಕ್ರಮವಾಗಿದೆ.
ಪರಿಸ್ಥಿತಿಯನ್ನು ನಾಜೂಕಾಗಿ ನಿಭಾಯಿಸಿ ಗಣೇಶ ಮೂರ್ತಿಯ ಪಾವಿತ್ರ್ಯತೆಗೆ ಧಕ್ಕೆ ಬಾರದ ರೀತಿಯಲ್ಲಿ ಕಾಳಜಿ ವಹಿಸಬಹುದಾಗಿದ್ದ ಪೊಲೀಸರು ಅತ್ಯಂತ ಉಡಾಫೆಯಾಗಿ ವರ್ತಿಸಿರುವ ರೀತಿ ಸರ್ವಥಾ ಖಂಡನೀಯ, ಕಾಂಗ್ರೆಸ್ ಸರ್ಕಾರ ಹಿಂದೂ ಸಮಾಜದ ಬಗ್ಗೆ ತೋರುವ ತಾತ್ಸಾರ ದೋರಣೆಯನ್ನು ಈ ಘಟನೆ ಪ್ರತಿಬಿಂಬಿಸಿದೆ. ಈ ಕೂಡಲೇ ಸರ್ಕಾರ ಹಿಂದೂ ಸಮಾಜದ ಕ್ಷಮೆ ಕೇಳಲಿ ಎಂದು ಆಗ್ರಹಿಸಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications