ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಸಭೆಯಲ್ಲಿ ಕಾಂಗ್ರೆಸ್‌-ಜೆಡಿಎಸ್ ಮೈತ್ರಿ : ಕುಮಾರಸ್ವಾಮಿ ಹೇಳುವುದೇನು?

By Gururaj
|
Google Oneindia Kannada News

ಬೆಂಗಳೂರು, ಜುಲೈ 24 : ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿಯೂ ಮೈತ್ರಿ ಮುಂದುವರೆಯುವ ಬಗ್ಗೆ ಚರ್ಚೆಗಳು ನಡೆಯುತ್ತಿದೆ. ಆದರೆ, ಜೆಡಿಎಸ್ ಕಾದು ನೋಡುವ ತಂತ್ರವನ್ನು ಅನುಸರಿಸಿದೆ.

ರಾಷ್ಟ್ರಮಟ್ಟದಲ್ಲಿ ಬಿಜೆಪಿಯನ್ನು ಎದುರಿಸಲು ಮಹಾಮೈತ್ರಿಕೂಟ ರಚನೆಯಾಗುವ ಸಾಧ್ಯತೆ ಇದೆ. ಇದರ ಭಾಗವಾಗಿಯೇ ಕರ್ನಾಟಕದಲ್ಲಿ ಕಾಂಗ್ರೆಸ್‌-ಜೆಡಿಎಸ್ ಸೇರಿ ಸರ್ಕಾರ ರಚನೆ ಮಾಡಿದ್ದು, ವಿಧಾನಸಭೆ ಚುನಾವಣೆಯಲ್ಲಿ 104 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿಯನ್ನು ಅಧಿಕಾರದಿಂದ ದೂರವಿಟ್ಟಿದ್ದಾರೆ.

ಲೋಕಸಭೆ ಚುನಾವಣೆ ಮೈತ್ರಿಗೆ ಮುನಿಸು : ಎ.ಮಂಜು ಬಿಜೆಪಿಗೆ?ಲೋಕಸಭೆ ಚುನಾವಣೆ ಮೈತ್ರಿಗೆ ಮುನಿಸು : ಎ.ಮಂಜು ಬಿಜೆಪಿಗೆ?

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮುಂದುವರೆಯಲಿದೆ ಎಂದು ಘೋಷಿಸಿದ್ದಾರೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾದರೆ ನಮ್ಮ ಆಕ್ಷೇಪವಿಲ್ಲ ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ.

ಲೋಕಸಭೆ ಚುನಾವಣೆ : ಕರ್ನಾಟಕ ಬಿಜೆಪಿಗೆ ಕಗ್ಗಂಟಾಗಿರುವ 11 ಕ್ಷೇತ್ರಗಳುಲೋಕಸಭೆ ಚುನಾವಣೆ : ಕರ್ನಾಟಕ ಬಿಜೆಪಿಗೆ ಕಗ್ಗಂಟಾಗಿರುವ 11 ಕ್ಷೇತ್ರಗಳು

ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ಬಗ್ಗೆ ಘೋಷಣೆ ಮಾಡುವ ಮೊದಲು ಕಾಂಗ್ರೆಸ್‌ ಪಕ್ಷ ಜೆಡಿಎಸ್‌ ಅನ್ನು ಹೇಗೆ ನಡೆಸಿಕೊಳ್ಳಲಿದೆ? ಎಂದು ಕಾದು ನೋಡಲಿದೆ. ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಿ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ರಾಹುಲ್ ಗಾಂಧಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ....

ಎಚ್.ಡಿ.ಕುಮಾರಸ್ವಾಮಿ ಹೇಳುವುದೇನು?

ಎಚ್.ಡಿ.ಕುಮಾರಸ್ವಾಮಿ ಹೇಳುವುದೇನು?

2019ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಜೊತೆ ಚುನಾವಣಾ ಮೈತ್ರಿ ಮಾಡಿಕೊಳ್ಳುವ ಕುರಿತು ಇಂದು ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, 'ಕಾಂಗ್ರೆಸ್ ಜೆಡಿಎಸ್ ಪಕ್ಷವನ್ನು ಹೇಗೆ ನಡೆಸಿಕೊಳ್ಳಲಿದೆ?' ಎಂದು ನೋಡುತ್ತೇವೆ ಎಂದು ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಕುರಿತು ಹಲವು ಚರ್ಚೆಗಳು ರಾಜ್ಯದಲ್ಲಿ ನಡೆಯುತ್ತಿವೆ. ಆದರೆ, ಸೀಟು ಹಂಚಿಕೆ, ಅಭ್ಯರ್ಥಿಗಳ ಆಯ್ಕೆ ಮುಂತಾದವುಗಳ ಬಗ್ಗೆ ಇನ್ನೂ ಎರಡೂ ಪಕ್ಷಗಳು ನಿರ್ಧಾರ ಕೈಗೊಂಡಿಲ್ಲ. ಆದ್ದರಿಂದ, ಮೈತ್ರಿ ಪ್ರಸ್ತಾಪ ಮಾತುಕತೆಯ ಹಂತದಲ್ಲಿಯೇ ಇದೆ

ಕಾಂಗ್ರೆಸ್‌ನ 20 ಪ್ಲಸ್ ಯೋಜನೆ

ಕಾಂಗ್ರೆಸ್‌ನ 20 ಪ್ಲಸ್ ಯೋಜನೆ

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲೇಬೇಕು ಎಂಬುದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸೂಚನೆ. ಆದ್ದರಿಂದ, ಪ್ರತಿ ರಾಜ್ಯದಲ್ಲಿ ಇಂತಿಷ್ಟು ಸೀಟು ಗೆಲ್ಲಬೇಕು ಎಂದು ಟಾರ್ಗೆಟ್ ನೀಡಲಾಗುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿದೆ. ಆದ್ದರಿಂದ, 20 ಪ್ಲಸ್ ಸೀಟುಗಳ ಟಾರ್ಗೆಟ್ ಕೊಡಲಾಗಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ರಾಹುಲ್ ಗಾಂಧಿ ಭೇಟಿ ಮಾಡಿದ್ದರು. ಆಗ ರಾಜ್ಯದ 28 ಸೀಟುಗಳ ಪೈಕಿ 20 ಪ್ಲಸ್ ಸೀಟುಗಳನ್ನು ಗೆಲ್ಲಿಸಬೇಕು ಎಂದು ರಾಹುಲ್ ಗಾಂಧಿ ನಿರ್ದೇಶನ ನೀಡಿದ್ದಾರೆ. ಆದ್ದರಿಂದ, ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

ಕಾಂಗ್ರೆಸ್‌ ಪಕ್ಷದಲ್ಲಿಯೇ ಅಪಸ್ವರ

ಕಾಂಗ್ರೆಸ್‌ ಪಕ್ಷದಲ್ಲಿಯೇ ಅಪಸ್ವರ

ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಕ್ಕೆ ಕಾಂಗ್ರೆಸ್‌ ನಾಯಕರಲ್ಲಿಯೇ ಇನ್ನೂ ಒಮ್ಮತ ಮೂಡಿಲ್ಲ. ಕೆಲವು ಜಿಲ್ಲೆಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ವಿಚಾರದಲ್ಲಿ ಕಾಂಗ್ರೆಸ್‌ ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

'ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಿ. ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲೇಬೇಕಾಗಿದೆ' ಎಂದು ರಾಹುಲ್ ಗಾಂಧಿ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡಿದ್ದಾರೆ. ಲೋಕಸಭೆ ಚುನಾವಣೆ ಹತ್ತಿರವಾಗುವಾಗ ಮೈತ್ರಿ ಬಗ್ಗೆ ಸ್ಪಷ್ಟ ಚಿತ್ರಣ ಲಭ್ಯವಾಗುವ ಸಾಧ್ಯತೆ ಇದೆ.

ಬಿಜೆಪಿಗೆ ಜೆಡಿಎಸ್‌-ಕಾಂಗ್ರೆಸ್ ಮೈತ್ರಿ ಬೇಡ

ಬಿಜೆಪಿಗೆ ಜೆಡಿಎಸ್‌-ಕಾಂಗ್ರೆಸ್ ಮೈತ್ರಿ ಬೇಡ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬಿಜೆಪಿಗೆ ಇಷ್ಟವಿಲ್ಲ. ಕಳೆದ ಚುನಾವಣೆಯಲ್ಲಿ ಬಿಜೆಪಿ 17 ಸ್ಥಾನ ಗೆದ್ದಿದೆ. ಆದರೆ, ಈ ಬಾರಿಯ ಚುನಾವಣೆಯಲ್ಲಿ ಕೆಲವು ಹಾಲಿ ಸಂಸದರು ಸೋಲು ಕಾಣಲಿದ್ದಾರೆ ಎನ್ನುತ್ತಿದೆ ಕೆಲವು ಸಮೀಕ್ಷೆಗಳ ವರದಿ.

ಜೆಡಿಎಸ್ ಮತ್ತು ಕಾಂಗ್ರೆಸ್ ಒಟ್ಟಾದರೆ ಬಿಜೆಪಿಗೆ ಹಲವು ಕ್ಷೇತ್ರಗಳಲ್ಲಿ ಪ್ರಬಲ ಪೈಪೋಟಿ ಎದುರಾಗಲಿದೆ. ಆದ್ದರಿಂದ, ಮೈತ್ರಿ ಬೇಡ ಎಂದು ಬಿಜೆಪಿ ಬಯಸುತ್ತಿದೆ.

2014ರ ಫಲಿತಾಂಶ

2014ರ ಫಲಿತಾಂಶ

ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿವೆ. 2014ರ ಚುನಾವಣೆಯಲ್ಲಿ ಬಿಜೆಪಿ 17, ಕಾಂಗ್ರೆಸ್‌ 9 ಮತ್ತು ಜೆಡಿಎಸ್‌ 2 ಸ್ಥಾನಗಳಲ್ಲಿ ಜಯಗಳಿಸಿದ್ದವು.

ಬಿ.ಎಸ್.ಯಡಿಯೂರಪ್ಪ (ಶಿವಮೊಗ್ಗ), ಬಿ.ಶ್ರೀರಾಮುಲು (ಬಳ್ಳಾರಿ) ಅವರು ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ ಬಳಿಕ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸದ್ಯ ಬಿಜೆಪಿ 15 ಸೀಟುಗಳನ್ನು ಹೊಂದಿದೆ.

ಸಿ.ಎಸ್.ಪುಟ್ಟರಾಜು (ಮಂಡ್ಯ) ಅವರು ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ ಬಳಿಕ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸದಸ್ಯ ಜೆಡಿಎಸ್ 1 ಸ್ಥಾನವನ್ನು ಹೊಂದಿದೆ.

English summary
Karnataka Chief Minister H.D.Kumaraswamy on July 24, 2018 said that, Let us see how Congress is going to treat JD(S). Decussion going on about chances of a pre-poll alliance with Congress in 2019 general elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X