• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಭಾಗ್ಯಲಕ್ಷ್ಮಿ ಬಾಂಡ್ ಗೊಂದಲ: ಸಿಎಂ ಯಡಿಯೂರಪ್ಪ ಭೇಟಿ ಮಾಡಿದ LIC ಅಧಿಕಾರಿಗಳು!

|
Google Oneindia Kannada News

ಬೆಂಗಳೂರು, ಡಿ. 23: ಹಿಂದೆ ತಾವೇ ಮುಖ್ಯಮಂತ್ರಿ ಆಗಿದ್ದಾಗ ಬಿ.ಎಸ್. ಯಡಿಯೂರಪ್ಪ ಅವರು ಮಹತ್ವದ ಭಾಗ್ಯಲಕ್ಷ್ಮಿ ಯೋಜನೆ ಜಾರಿಗೆ ತಂದಿದ್ದರು. ಆ ಮೂಲಕ ಹೆಣ್ಣು ಭ್ರೂಣಹತ್ಯೆ ತಡೆಯುವುದು ಸರ್ಕಾರದ ಉದ್ದೇಶವಾಗಿತ್ತು. ಯಡಿಯೂರಪ್ಪ ಅವರು ಅಧಿಕಾರದಿಂದ ಕೆಳಗಿಳಿದ ಬಳಿಕ ಆ ಯೋಜನೆ ಕುಂಟುತ್ತ ಸಾಗಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಇದೀಗ ಮತ್ತೊಮ್ಮೆ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಯಡಿಯೂರಪ್ಪ ಅವರ ಉದ್ದೇಶಿಸಿದ್ದಾರೆ.

ಇದೇ ಹಿನ್ನೆಲೆಯಲ್ಲಿ ಭಾರತೀಯ ಜೀವವಿಮಾ ನಿಗಮದ ಅಧಿಕಾರಿಗಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಎಲ್‌ಐಸಿ ಅಧಿಕಾರಿಗಳೊಂದಿಗೆ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳೂ ಚರ್ಚೆಯಲ್ಲಿ ಭಾಗಿಯಾಗಿದ್ದರು. ಇದೇ ಸಂದರ್ಭದಲ್ಲಿ ಭಾರತೀಯ ಜಿವವಿಮಾ ನಿಗಮದ ಅಧಿಕಾರಿಗಳು ಸರ್ಕಾರಕ್ಕೆ ಮಹತ್ವದ ಮನವಿ ಮಾಡಿಕೊಂಡಿದ್ದಾರೆ.

ಮನೆಮನೆ ಮಾತಾದ ಗೋಲ್ಡ್ ವಿನ್ನರ್‌ನಿಂದ ಎಲ್ಡಿಯಾ ಶುದ್ಧ ಕೊಬ್ಬರಿ ಎಣ್ಣೆಮನೆಮನೆ ಮಾತಾದ ಗೋಲ್ಡ್ ವಿನ್ನರ್‌ನಿಂದ ಎಲ್ಡಿಯಾ ಶುದ್ಧ ಕೊಬ್ಬರಿ ಎಣ್ಣೆ

ಭಾಗ್ಯಲಕ್ಷ್ಮಿ ಯೋಜನೆ

ಭಾಗ್ಯಲಕ್ಷ್ಮಿ ಯೋಜನೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾಗ್ಯ ಲಕ್ಷ್ಮಿ ಯೋಜನೆಯಡಿ ಭಾರತೀಯ ಜೀವವಿಮಾ ನಿಗಮ ನೀಡಬಹುದಾದ ಅತ್ಯುತ್ತಮ ಕೊಡುಗೆಯ ಕುರಿತು ಪರಿಶೀಲಿಸುವಂತೆ LIC ಅಧಿಕಾರಿಗಳಿಗೆ ತಿಳಿಸಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರದ ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸುವಂತೆಯೂ ತಮ್ಮನ್ನು ಭೇಟಿಯಾಗಿದ್ದ LIC ಅಧಿಕಾರಿಗಳಿಗೆ ಯಡಿಯೂರಪ್ಪ ಅವರು ಸೂಚಿಸಿದ್ದಾರೆ.

ಸಿಎಂ ಯಡಿಯೂರಪ್ಪ ಭರವಸೆ

ಸಿಎಂ ಯಡಿಯೂರಪ್ಪ ಭರವಸೆ

ಭಾರತೀಯ ಜೀವವಿಮಾ ನಿಗಮದ ವಲಯ ವ್ಯವಸ್ಥಾಪಕಿ ಮಿನಿ ಇಪೆ ಅವರ ನೇತೃತ್ವದ ಎಲ್‌ಐಸಿ ಅಧಿಕಾರಿಗಳ ನಿಯೋಗವು, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ, ಭಾಗ್ಯಲಕ್ಷ್ಮಿ ಯೋಜನೆಯನ್ನು ಎಲ್‌ಐಸಿ ಮೂಲಕವೇ ಜಾರಿಗೊಳಿಸುವ ಕುರಿತು ಮತ್ತೊಮ್ಮೆ ಪರಿಶೀಲಿಸುವಂತೆ ಮನವಿ ಮಾಡಿತು.

ಅದಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು, ಭಾಗ್ಯಲಕ್ಷ್ಮಿ ಯೋಜನೆಯಡಿ ನೀವು ನೀಡಬಹುದಾದ ಕೊಡುಗೆಗಳ ಕುರಿತು ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಪರಿಶೀಲಿಸುವುದಾಗಿ ತಿಳಿಸಿದರು.

ಸುಕನ್ಯಾ ಸಮೃದ್ಧಿ ಯೋಜನೆ

ಸುಕನ್ಯಾ ಸಮೃದ್ಧಿ ಯೋಜನೆ

ಭಾಗ್ಯ ಲಕ್ಷ್ಮಿ ಯೋಜನೆಯಡಿ ರಾಜ್ಯ ಸರ್ಕಾರ ಪಾವತಿಸುತ್ತಿರುವ ಪ್ರಿಮಿಯಂ ಮೊತ್ತಕ್ಕೆ 1 ವರ್ಷದ ವೇಳೆಗೆ 1 ಲಕ್ಷ ರೂ. ನೀಡಲು ಎಲ್‌ಐಸಿ ಅಧಿಕಾರಗಳು ಅಸಹಾಯಕತೆ ವ್ಯಕ್ತಪಡಿಸಿದ್ದರು. ಹೀಗಾಗಿ ಭಾರತೀಯ ಅಂಚೆಯ ಸುಕನ್ಯಾ ಸಮೃದ್ಧಿ ಯೋಜನೆ ಮೂಲಕ ಭಾಗ್ಯಲಕ್ಷ್ಮಿ ಯೋಜನೆ ಜಾರಿಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ಇತ್ತೀಚೆಗೆ ತೀರ್ಮಾನಿಸಲಾಗಿತ್ತು.

  ಬೆಂಗಳೂರು: ಆಹಾರ ಅರಸಿ ನಾಡಿನತ್ತ ಕಾಡಾನೆಗಳ ಲಗ್ಗೆ | Oneindia Kannada
  ಹಿರಿಯ ಅಧಿಕಾರಿಗಳು ಭಾಗಿ

  ಹಿರಿಯ ಅಧಿಕಾರಿಗಳು ಭಾಗಿ

  ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ನಾಗಲಾಂಬಿಕಾ ದೇವಿ ಮೊದಲಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು. ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಲಾಗುವುದು ಎಂದು ಹಿರಿಯ ಅಧಿಕಾರಿಗಳು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

  English summary
  A delegation of LIC officials led by Zonal Manager of Indian Bio Insurance Corporation, Mini Ipe, met Chief Minister Yediyurappa and requested to review the implementation of the Bhagyalakshmi project through the LIC. Know more.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X