ಬಿ. ಟಿ. ಲಲಿತಾ ನಾಯಕ್, ಸಿದ್ದು ಸೇರಿ 12 ಮಂದಿಗೆ ಜೀವ ಬೆದರಿಕೆ
ಬೆಂಗಳೂರು ಜುಲೈ 17: ಚಿಂತಕರು, ಸಾಹಿತಿಗಳು ಹಾಗೂ ರಾಜಕೀಯ ನಾಯಕರಿಗೆ ಜೀವ ಬೆದರಿಕೆ ಪತ್ರಗಳು ಬರುವುದು ನಿರಂತರವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಎಚ್. ಡಿ. ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರ ಭಾವಚಿತ್ರ ಇರುವ ಪತ್ರ ಕಳುಹಿಸಿ 'ಸಂತ ಶ್ರದ್ಧಾಂಜಲಿ' ಎಂದು ಬರೆಯಲಾಗಿದೆ.
ಶನಿವಾರ ಮಾಜಿ ಸಚಿವೆ ಬಿ. ಟಿ. ಲಲಿತಾ ನಾಯಕ್‌ಗೆ 3ನೇ ಜೀವ ಬೆದರಿಕೆ ಪತ್ರ ಬಂದಿದೆ. ಪತ್ರದಲ್ಲಿ 12 ವ್ಯಕ್ತಿಗಳ ಭಾವಚಿತ್ರ ಹಾಕಿ ದೇಶದ್ರೋಹಿಗಳ ಪಡೆ ಎಂದು ಹೇಳಲಾಗಿದೆ. ಆ ಮೂಲಕ ಜೀವ ಬೆದರಿಕೆ ಒಡ್ಡಲಾಗಿದೆ.
ಸಾಹಿತಿಗಳು, ಚಿಂತಕರು, ರಾಜಕೀಯ ನಾಯಕರಿಗೆ ಪದೇ ಪದೆ ಜೀವ ಬೆದರಿಕೆ ಪತ್ರಗಳು ಬರುತ್ತಿವೆ. ದುಷ್ಕರ್ಮಿಗಳು ಬಹಿರಂಗವಾಗಿ ಪತ್ರ, ಕರೆಗಳ ಮೂಲಕ ಬೆದರಿಕೆ ಹಾಕುತ್ತಿದ್ದಾರೆ. ಈ ವಿಚಾರವನ್ನು ಸರ್ಕಾರದ ಗಮನಕ್ಕೂ ತರಲಾಗಿದೆ.

ಪೊಲೀಸ್ ಮಹಾನಿರ್ದೇಶಕರ ಬಳಿಯೂ ಈ ಬಗ್ಗೆ ಚರ್ಚಿಸಲಾಗಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರನ್ನು ಪತ್ತೆ ಮಾಡಬೇಕು. ಸಂವಿಧಾನದ ಆಶಯ ಕಾಪಾಡುವವರನ್ನು ರಕ್ಷಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಸರ್ಕಾರವನ್ನು ಆಗ್ರಹಿಸಿದ್ದರು.

ಭಾವಚಿತ್ರ ಸಹಿತ ಬೆದರಿಕೆ; ಮಾಜಿ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್. ಡಿ. ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ. ಎಸ್. ಜಿ. ಸಿದ್ದರಾಮಯ್ಯ, ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿದಂತೆ ಒಟ್ಟು 12 ಮಂದಿಗೆ ಭಾವಚಿತ್ರಗಳ ಸಹಿತ ನೀವು ದೇಶದ್ರೋಹಿ ಗಳು, ನಿಮ್ಮನ್ನು ಉಳಿಸಲ್ಲ ಎಂದು ಪತ್ರ ಬರೆಯಲಾಗಿದೆ. ಇದೇ ತಿಂಗಳ ಜುಲೈ 3 ಮತ್ತು 7ರಂದು ಬೆದರಿಕೆ ಬಂದಿತ್ತು. ಆದರೂ ಪತ್ರ ಬರೆದವರನ್ನು ಪತ್ತೆ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ.
ಪ್ರಗತಿಪರರಿಗೆ ಈ ರೀತಿ ಪದೇ ಪದೆ ಕೊಲೆ ಮಾಡುವುದಾಗಿ ಕರೆಗಳು, ಬೆದರಿಕೆ ಪತ್ರಗಳು ಬರುತ್ತಿರುವುದು ಸಾಕಷ್ಟು ಆತಂಕ ಸೃಷ್ಟಿಸಿದೆ. ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ಮಾತನಾಡುವಂತಾಗಿದೆ. ಸರ್ಕಾರ ಇದನ್ನು ನಿರ್ಲಕ್ಷಿಸದೇ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಸೇರಿದಂತೆ ಅನೇಕರು ಆಗ್ರಹಿಸಿದ್ದಾರೆ.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಸರ್ಕಾರ ಸಾಲದ ಮೇಲೆ ನಡೆಯುತ್ತಿದೆ ಎಂಬುದು ಸುಳ್ಳು: ವಿರೋಧ ಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications