ಸಿಟಿ ರವಿಗೆ ಮತ್ತೆ ಜೀವ ಬೆದರಿಕೆ: ಎಚ್ಚರ.. ಎಚ್ಚರ.. 15 ದಿನ ಗಡುವು ಕೊಟ್ಟ ಪತ್ರದಲ್ಲೇನಿದೆ?

ಚಿಕ್ಕಮಗಳೂರು , ಜನವರಿ 11: ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಅವಹೇಳನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಎಂಎಲ್‌ಸಿ ಸಿಟಿ ರವಿಗೆ ವಾಟ್ಸಪ್ ಮೂಲಕ ಜೀವ ಬೆದರಿಕೆ ಬಂದಿದೆ. ಎಚ್ಚರ.. ಎಚ್ಚರ ಎಂದು 15 ದಿನಗಳ ಒಳಗೆ ಕ್ಷಮೆ ಕೇಳದಿದ್ದರೆ ಕೈಕಾಲು ಮುರಿದು ಸಾಯಿಸುವುದಾಗಿ ಬೆದರಿಕೆ ಹಾಕಲಾಗಿದೆ.

ಸಚಿವೆ ಲಕ್ಮ್ಮಿ ಹೆಬ್ಬಾಳ್ಕರ್ ವಿರುದ್ಧ ಅಕ್ಷೇಪಾರ್ಹ ಪದ ಬಳಕೆ ಆರೋಪ ಪ್ರಕರಣದ ಗಲಾಟೆ ಬಳಿಕ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಬಹಿರಂಗವಾಗಿ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಬೆದರಿಕೆ ಕರೆಗಳು ನಿರಂತರವಾಗಿ ಬರುತ್ತಿವೆ ಎಂಬ ಸಿಟಿ ರವಿ ಆರೋಪಿಸಿದ್ದ ಬೆನ್ನಲ್ಲೇ ಇದೀಗ ವಾಟ್ಸಪ್ ಮೂಲಕ ಮತ್ತೊಮ್ಮೆ ಅನಾಮಧೇಯ ವ್ಯಕ್ತಿಗಳಿಂದ ಬೆದರಿಕೆ ಕರೆ ಬಂದಿದೆ. ಅಲ್ಲದೆ, ಸಿ ಟಿ ರವಿ ಅವರ ಮಗನನ್ನೂ ಕೊಲ್ಲುವುದಾಗಿ ಬೆದರಿಕೆ ಬಂದಿದ್ದು, ಸಿಟಿ ರವಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

Life Threat Letter To BJP MLC CT Ravi From Anonymous Person

ಬೆದರಿಕೆ ಪತ್ರದಲ್ಲಿ ಏನಿದೆ?

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಹಾಗೂ ಮಾಜಿ ಸಚಿವ ಸಿಟಿ ರವಿಗೆ ವಾಟ್ಸಪ್ ನಲ್ಲಿ ಜೀವ ಬೆದರಿಕೆಯೊಡ್ಡಿರುವ ಅನಾಮಧೇಯ ವ್ಯಕ್ತಿಗಳು, ಇನ್ನು 15 ದಿನದೊಳಗೆ ಚಿಕ್ಕಮಗಳೂರಿನಿಂದ ಬಂದು ಬೆಳಗಾವಿ ಅಭಿನೇತ್ರಿಯ ಕೈಕಾಲು ಹಿಡಿದು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಿಮ್ಮ ಮನೆಗೆ ನುಗ್ಗಿ ನಿಮ್ಮ ಕೈಕಾಲು ಮುರಿದು ಸಾಯಿಸುತ್ತೇವೆ. ಹಾಗೂ ನಿನ್ನ ಮಗನನ್ನು ಸಾಯಿಸುತ್ತೇವೆ. ನಿನ್ನ ಕೈ ಕಾಲು ಮುರಿಯುತ್ತೇವೆ, ಪ್ರಾಣ ತೆಗೆಯುತ್ತೇವೆ, ನಿನ್ನ ಮಗನನ್ನು ಸಾಯಿಸುತ್ತೇವೆ ಹುಷಾರ್...ಹುಷಾರ್... ಎಂದು ಬೆದರಿಕೆ ಪತ್ರದಲ್ಲಿ ತಿಳಿಸಲಾಗಿದೆ.

ಸಿಟಿ ರವಿಗೆ ಪ್ರಾಣ ಬೆದರಿಕೆ ಅಲ್ಲದೆ ಅವರ ಮಗ ಸೂರ್ಯನನ್ನೂ ಕೊಲ್ಲುತ್ತೇವೆ ಎಂದು ಬೆದರಿಕೆಯೊಡ್ಡಿರುವ ಕಿಡಿಗೇಡಿಗಳು. ಬೆದರಿಕೆ ಸಂದೇಶ ಬಂದ ಬಳಿಕ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಸಿಟಿ ರವಿ ಅವರು ಬಸವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನೂ ನಕ್ಸಲರ ಗನ್ ಗಳು ಪತ್ತೆ ಹಿನ್ನೆಲೆ ಚಿಕ್ಕಮಗಳೂರಲ್ಲಿ ಸಿ.ಟಿ.ರವಿ ಅವರು ಮಾತನಾಡಿ, ನಕ್ಸಲರು ಎಲ್ಲಿ ಕಾರ್ಯಾಚರಣೆ ಮಾಡ್ತಿದ್ರು, ಹಣ, ಗನ್ ಎಲ್ಲಿ ಬರೋದು ಯಾವ, ವ್ಯಕ್ತಿ ಸಂಘಟನೆ ಸಹಾಯ ಮಾಡ್ತಿದ್ರು. ಎಲ್ಲಾ ಮಾಹಿತಿ ಹಂಚ್ಕೊಂಡ್ರೆ ಮಾತ್ರ ಶರಣಾಗತಿಗೆ ಅರ್ಥ ಇರುತ್ತದೆ. ನಕ್ಸಲ್ ಸಿದ್ದಾಂತ ಸಂವಿಧಾನಕ್ಕೆ ವಿರುದ್ಧವಾದ ಸಿದ್ಧಾಂತ, ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲದಿರೋ ಸಿದ್ದಾಂತ. ಅವರಿಗೆ ಬ್ಯಾಲೆಟ್ ಮೇಲೆ ನಂಬಿಕೆ ಇಲ್ಲ, ಬುಲೆಟ್ ಮೇಲೆ ನಂಬಿಕೆ. ಪ್ಯಾಕೇಜ್ ನೀಡುವ ಮುನ್ನ ಎಲ್ಲಾ ಮಾಹಿತಿ ಕಲೆ ಹಾಕಬೇಕು. ನಕ್ಸಲರಿಂದ ನಾಗರೀಕರು, ಪೊಲೀಸರು, ಸೈನಿಕರು ಸಾವನ್ನಪ್ಪಿದ್ದಾರೆ. ನಕ್ಸಲರ ಶರಣಾಗತಿ ತಂತ್ರಗಾರಿಕೆಯ ಭಾಗ ಆಗಬಾರದು ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+